ETV Bharat / state

ಬಹುನಿರೀಕ್ಷಿತ ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ, ಅಧಿಸೂಚನೆ ಹೊರಡಿಸಿದ ಸರ್ಕಾರ

ಬಹುನಿರೀಕ್ಷಿತ ಎಸ್ಸಿ/ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ದು, ಅಧಿಸೂಚನೆ ಹೊರಡಿಸಲಾಗಿದೆ.

Governor nod to SC ST reservation  SC ST reservation enhancement ordinance  SC ST reservation news  ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆ  ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ  ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ  ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಇದೀಗ ಕಾಯ್ದೆಯಾಗಿ ಜಾರಿ  ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ  ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡ  ಅಸಾಧಾರಣ ಸನ್ನಿವೇಶ ಮತ್ತು ವಿಶೇಷ ಪ್ರಕರಣ  ನ್ಯಾ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ
ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ
author img

By

Published : Oct 24, 2022, 6:26 AM IST

ಬೆಂಗಳೂರು: ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧ್ಯಾದೇಶ 2022ಗೆ ರಾಜ್ಯಪಾಲರು ಅಂಕಿತ ಹಾಕುವ ಮೂಲಕ ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಇದೀಗ ಕಾಯ್ದೆಯಾಗಿ ಜಾರಿಯಾಗಿದೆ. ಆ ಮೂಲಕ ಇನ್ನು ಮುಂದೆ ರಾಜ್ಯದಲ್ಲಿ ಪರಿಶಿಷ್ಟ ಜಾತಿಗೆ ಶೇ 17ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 7ರಷ್ಟು ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ ಸಿಗಲಿದೆ.

ಸುಗ್ರೀವಾಜ್ಞೆಯಲ್ಲಿ ಸರ್ಕಾರ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗೆ ಸೇರಿದ ಸದಸ್ಯರಿಗಾಗಿ ಮೀಸಲಾತಿಗಳನ್ನು ಹಚ್ಚಿಸಲು ಅಸಾಧಾರಣ ಸನ್ನಿವೇಶ ಮತ್ತು ವಿಶೇಷ ಪ್ರಕರಣ ಈಡೇರಬೇಕಾಗಿದೆ. ಆದರಿಂದ ಸಂವಿಧಾನದ 15ನೇ ಅನುಚ್ಛೇದದ (4)ನೇ ಖಂಡವು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಯಾವುದೇ ನಾಗರಿಕರ ವರ್ಗಗಳ ಏಳಿಗೆಗಾಗಿ ಯಾವುದೇ ವಿಶೇಷ ಉಪಬಂಧಗಳನ್ನು ಕಲ್ಪಿಸಲು ರಾಜ್ಯವನ್ನು ಸಮರ್ಥಗೊಳಿಸಿರುವ ಬಗ್ಗೆ ಉಲ್ಲೇಖಿಸಲಾಗಿದೆ.

Governor nod to SC ST reservation  SC ST reservation enhancement ordinance  SC ST reservation news  ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆ  ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ  ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ  ಎಸ್ಸಿ ಎಸ್ಟಿ ಮೀಸಲಾತಿ ಹೆಚ್ಚಳ ಇದೀಗ ಕಾಯ್ದೆಯಾಗಿ ಜಾರಿ  ಶಿಕ್ಷಣ ಹಾಗೂ ಸರ್ಕಾರಿ ಉದ್ಯೋಗ ನೇಮಕಾತಿಯಲ್ಲಿ ಮೀಸಲಾತಿ  ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡ  ಅಸಾಧಾರಣ ಸನ್ನಿವೇಶ ಮತ್ತು ವಿಶೇಷ ಪ್ರಕರಣ  ನ್ಯಾ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ
ಎಸ್ಸಿ-ಎಸ್ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

ಸಂವಿಧಾನದ 15ನೇ ಅನುಚ್ಛೇದದ (4) ನೇ ಖಂಡ ಸರ್ಕಾರಿ ಸೇವೆಗಳಲ್ಲಿ ಸಾಕಷ್ಟು ಪ್ರಾತಿನಿಧ್ಯವನ್ನು ಹೊಂದಿಲ್ಲವೆಂದು ರಾಜ್ಯ ಅಭಿಪ್ರಾಯಪಡುವಂಥ ಹಿಂದುಳಿದ ಯಾವುದೇ ನಾಗರಿಕರ ವರ್ಗಗಳ ಪರವಾಗಿ ನೇಮಕಾತಿ ಮತ್ತು ಹುದ್ದೆಗಳಲ್ಲಿ ಮೀಸಲಾತಿಗಾಗಿ ಯಾವುದೇ ಉಪಬಂಧ ಕಲ್ಪಿಸಲು ರಾಜ್ಯಕ್ಕೆ ಅಧಿಕಾರ ನೀಡಿದೆ.

ಶೇ. 50ರ ಮೀಸಲಾತಿ ಪರಿಮಿತಿಯನ್ನು ಮೀರಿ ಇತರ ಹಲವು ರಾಜ್ಯಗಳು ಕಾಲಕಾಲಕ್ಕೆ ಮೀಸಲಾತಿ ಕೋಟಾವನ್ನು ಹೆಚ್ಚಿಸಿದೆ. ಹೀಗಾಗಿ ಕರ್ನಾಟಕ ವಿಧಾನಸಭೆ ಮತ್ತು ಕರ್ನಾಟಕ ವಿಧಾನ ಪರಿಷತ್ತು ಅಧಿವೇಶನ ಇಲ್ಲದಿರುವುದರಿಂದ ಅಧ್ಯಾದೇಶ ಹೊರಡಿಸಲು ಶೀಘ್ರ ಕ್ರಮ ತೆಗೆದುಕೊಳ್ಳಲು ಅವಶ್ಯಗೊಳಿಸುವಂಥ ವಿದ್ಯಮಾನಗಳು ಉಂಟಾಗಿವೆ. ಈ ಬಗ್ಗೆ ಕರ್ನಾಟಕದ ರಾಜ್ಯಪಾಲರಿಗೆ ಮನದಟ್ಟಾಗಿರುವುದರಿಂದ ಸಂವಿಧಾನದ 213ನೇ ಅನುಚ್ಛೇದದ (1)ನೇ ಖಂಡದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕದ ರಾಜ್ಯಪಾಲರು ಈ ಸುಗ್ರೀವಾಜ್ಞೆ ಹೊರಡಿಸಿರುತ್ತಾರೆ ಎಂದು ರಾಜ್ಯಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಸುಗ್ರೀವಾಜ್ಞೆಯಲ್ಲಿ ನ್ಯಾ ನಾಗಮೋಹನ್ ದಾಸ್ ಆಯೋಗ ಸಲ್ಲಿಸಿರುವ ವರದಿ ಬಗ್ಗೆ ಸವಿವರವಾಗಿ ಉಲ್ಲೇಖಿಸಲಾಗಿದೆ. ವರದಿಯಲ್ಲಿ ಹೇಳಲಾದ ಕನಿಷ್ಠ ಮಿತಿಯಲ್ಲಿರುವ ಮತ್ತು ಈಗಲೂ ಮುಖ್ಯವಾಹಿನಿಯಿಂದ ಹೊರಗಿರುವ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಲ್ಲಿನ ಅನೇಕ ಜಾತಿಗಳು ಮತ್ತು ಸಮುದಾಯಗಳು ಸಾಮಾಜಿಕ ಮತ್ತು ಶೈಕ್ಷಣಿಕ ಹಿಂದುಳಿದಿರುವಿಕೆಯ ಸಾಕ್ಷ್ಯವು ಕಂಡುಬಂದಿದೆ.

ಪಶ್ಚಿಮ ಘಟ್ಟಗಳ ಜೊತೆಜೊತೆಗೆ ಒಣಭೂಮಿ ಭಾಗಗಳಲ್ಲಿ ರಾಜ್ಯದ ಉದ್ದಗಲಕ್ಕೂ ಹರಡಿರುವ ಪ್ರದೇಶಗಳಲ್ಲಿ ವಾಸಿಸುವ ದಕ್ಕಲಿಗರು, ಧೋಲಿಬಿಲ್‌, ಮಲೇರು, ಸೋಲಿಗರು ಮುಂತಾದ ಕೆಲವು ಸಮುದಾಯಗಳಲ್ಲಿ ಅಂಥ ಹಿಂದುಳಿದಿರುವಿಕೆಯು ನಿಜವಾಗಿಯೂ ಹೆಚ್ಚಾಗಿದೆ. ಈ ಸಮುದಾಯಗಳು ಮೀಸಲಾತಿಯ ಪ್ರಯೋಜನಗಳನ್ನು ಸಾಕಷ್ಟು ಪಡೆಯಲು ಸಾಧ್ಯವಾಗಿರುವುದಿಲ್ಲ ಎಂದು ಉಲ್ಲೇಖಿಸಲಾಗಿದೆ.

ಅವರ ಜನಸಂಖ್ಯೆಗೆ ಹೋಲಿಸಿದಲ್ಲಿ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳಿಗಾಗಿ ಇರುವ ಶಕ್ಷಣಿಕ ಸಂಸ್ಥೆಗಳು, ಸರ್ಕಾರಿ ಉದ್ಯೋಗದಲ್ಲಿ ಅವರ ಪ್ರಾತಿನಿಧ್ಯವು ಸಾಕಷ್ಟಿಲ್ಲದಿರುವುದಕ್ಕೆ ಸಾಕ್ಷವಿದೆ. ಇದು ಹಿಂದುಳಿದಿರುವಿಕೆಯಿಂದ ಹೊರಬರಲು ಸಂಕಷ್ಟ ಪಡುತ್ತಿದ್ದಾರೆ ಎಂಬುದು ಗೊತ್ತಾಗಿದೆ. ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಜನಸಂಖ್ಯೆಗೆ ಹೋಲಿಸಿದಲ್ಲಿ ಅವರ ಭೂ ಹಿಡುವಳಿಗಳು ಆಸಮಪ್ರಮಾಣದಲ್ಲಿವ ಮತ್ತು ತೀವ್ರವಾಗಿ ಕಡಿಮೆ ಇದೆ ಎಂದು ಉಲ್ಲೇಖಿಸಲಾಗಿದೆ.

ಈ ಅಧ್ಯಯನದ ಆಧಾರದ ಮೇಲೆ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಮೀಸಲಾತಿಗಳನ್ನು ಹೆಚ್ಚಿಸಲು ವಿಶೇಷ ಪ್ರಕರಣವೊಂದನ್ನು ಮಾಡಬೇಕಿದ್ದು, ವಿಸ್ತೃತ ಅಧ್ಯಯನ ಮತ್ತು ವಿಶ್ಲೇಷಣೆಯ ಆಧಾರದಲ್ಲಿ ಅಂಥ ಹೆಚ್ಚಳಕ್ಕಾಗಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಅನಸೂಚಿತ ಜಾತಿಗಳಿಗೆ ಶೇ 17ರಷ್ಟು ಮತ್ತು ಅನುಸೂಚಿತ ಪಂಗಡಳಿಗೆ ಶೇ 7ರಷ್ಟು ಮೀಸಲಾತಿಯು ಅನುಕ್ರಮವಾಗಿ ಹೆಚ್ಚಾಗಲಿದೆ ಎಂಬ ವರದಿಯ ಅಂಶಗಳನ್ನು ವಿವರಿಸಲಾಗಿದೆ.

ಓದಿ: ಎಸ್ಸಿ - ಎಸ್ಟಿ ಮೀಸಲು ಹೆಚ್ಚಳದಿಂದ ಜನರಲ್ ಕೆಟಗರಿ ಕೋಟಾಕ್ಕೆ ಕತ್ತರಿ!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.