ETV Bharat / state

ಮತಾಂತರ ನಿಷೇಧದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ: ರಾಜ್ಯದಲ್ಲಿ ಅಧಿಕೃತವಾಗಿ ಕಾಯ್ದೆ ಜಾರಿ - ರಾಜ್ಯದಲ್ಲಿ ಅಧಿಕೃತವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿ

ಸಾರ್ವಜನಿಕರ, ಸಂಘಟನೆಗಳು, ಕೈಸ್ತ್ರ ಸಮುದಾಯದ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಕಾಯ್ದೆಯನ್ನು ಅನುಷ್ಠಾನ ಮಾಡಲಾಗಿದೆ. ಈ ಕಾಯ್ದೆಗೆ ಇಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​​ ಅಂಕಿತ ಹಾಕಿದ್ದಾರೆ.

Governor
ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್
author img

By

Published : May 17, 2022, 9:24 PM IST

ಬೆಂಗಳೂರು: ರಾಜ್ಯದಲ್ಲಿ ತೀವ್ರ ವಿರೋಧಕ್ಕೆ ಕಾರಣವಾಗಿದ್ದ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ವಿಧೇಯಕದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್​ ಅಂಕಿತ ಹಾಕಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಅಧಿಕೃತವಾಗಿ ಕಾಯ್ದೆ ಜಾರಿಗೆ ಬಂದಿದೆ. ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ವಿಧೇಯಕದ ಸುಗ್ರೀವಾಜ್ಞೆಗೆ ಒಪ್ಪಿಗೆ ನೀಡಿ ರಾಜ್ಯಪಾಲರಿಗೆ ಕಳುಹಿಸಿಕೊಡಲಾಗಿತ್ತು.

ರಾಜ್ಯಪಾಲರು ಮಂಗಳವಾರ ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ. ಸಾರ್ವಜನಿಕರ, ಸಂಘಟನೆಗಳು, ಕೈಸ್ತ್ರ ಸಮುದಾಯದ ತೀವ್ರ ವಿರೋಧದ ನಡುವೆಯೇ ಮತಾಂತರ ನಿಷೇಧ ಕಾಯ್ದೆಯನ್ನು ಅನುಷ್ಠಾನ ಮಾಡಲಾಗಿದೆ. ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಚಳಿಗಾಲ ಅಧಿವೇಶನದ ವೇಳೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆ ಅಂಗೀಕಾರಗೊಂಡಿತ್ತು.

ಆದರೆ, ವಿಧಾನಪರಿಷತ್‌ನಲ್ಲಿ ಆಡಳಿತರೂಢ ಬಿಜೆಪಿಯ ಸಂಖ್ಯಾಬಲ ಇಲ್ಲದಿರುವ ಹಿನ್ನೆಲೆ ಮಂಡಿಸಿ ಅನುಮೋದನೆ ಪಡೆದುಕೊಳ್ಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ವಿಧಾನಸಭೆಯಲ್ಲಿ ಅಂಗೀಕಾರವಾಗಿರುವ ಸ್ವರೂಪದಲ್ಲಿಯೇ ಮಸೂದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿದೆ. ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿರುವ ಕಾಯ್ದೆಯನ್ನು ಮುಂದಿನ ಅಧಿವೇಶನದಲ್ಲಿ ಪರಿಷತ್‌ನಲ್ಲಿ ಮಂಡಿಸಿ ಅಂಗೀಕಾರ ಪಡೆದುಕೊಳ್ಳಲಾಗುತ್ತದೆ. ಪರಿಷತ್‌ನಲ್ಲಿ ಬಿಜೆಪಿ ಸಂಖ್ಯಾಬಲ ಹೆಚ್ಚಾಗಿರುವ ಹಿನ್ನೆಲೆ ಮಂಡಿಸಲಾಗುತ್ತದೆ.

ಕಾಯ್ದೆಯಲ್ಲಿ ಬಲವಂತ, ವಂಚನೆ, ಒತ್ತಾಯ ಮತ್ತು ಆಮಿಷದ ಮೂಲಕ ನಡೆಸುವ ಮತಾಂತರ ಮತ್ತು ಮದುವೆಯಾಗುವ ಭರವಸೆಯ ಮೂಲಕ ನಡೆಸುವ ಮತಾಂತರಕ್ಕೆ ನಿಷೇಧ ಇದೆ. ಮತಾಂತರಗೊಂಡ ವ್ಯಕ್ತಿಯ ಪೋಷಕರು, ಸಹೋದರ, ಸಹೋದರಿ, ಸಹವರ್ತಿ ಅಥವಾ ಸಹ್ಯೋದ್ಯೋಗಿಗಳಿಗೂ ಮತಾಂತರದ ಬಗ್ಗೆ ದೂರನ್ನು ನೀಡಿದರೆ ಎಫ್‌ಐಆರ್ ದಾಖಲಿಸುವ ಅವಕಾಶ ಇದೆ. ಬಲವಂತ ಮತಾಂತರಕ್ಕೆ ಮೂರು ವರ್ಷದಿಂದ ಐದು ವರ್ಷದವರೆಗೆ ಜೈಲು ಶಿಕ್ಷೆ ಮತ್ತು 25 ಸಾವಿರ ರು. ದಂಡ ವಸೂಲಾತಿಗೆ ಅವಕಾಶ ಇದೆ.

ಇದನ್ನೂ ಓದಿ: ರಾಜಧಾನಿ ಬೆಂಗಳೂರಿನಲ್ಲಿ ಶೇ.37 ರಷ್ಟು ಜನರಿಗೆ ಅಧಿಕ ರಕ್ತದೊತ್ತಡ; ನ್ಯೂರಾ ಅಧ್ಯಯನದಿಂದ ಬಹಿರಂಗ..

ಅಪ್ರಾಪ್ತ ವ್ಯಕ್ತಿ, ಮಹಿಳೆ, ಎಸ್‌ಸಿ/ಎಸ್‌ಟಿ ಸೇರಿದ ವ್ಯಕ್ತಿಯ ಬಲವಂತದ ಮತಾಂತರಕ್ಕೆ ಮೂರು ವರ್ಷದಿಂದ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾಯ್ದೆಯಲ್ಲಿ ಅವಕಾಶ ಇದೆ. ಅಷ್ಟೇ ಅಲ್ಲ 50 ಸಾವಿರ ರೂ. ದಂಡ ವಸೂಲಿಗೂ ಅವಕಾಶ ಇದೆ. ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಎರಡು ತಿಂಗಳು ಮೊದಲು ಜಿಲ್ಲಾಧಿಕಾರಿಗೆ ತಿಳಿಸಬೇಕು. ಮತಾಂತರ ಮಾಡುವ ವ್ಯಕ್ತಿಯೂ ಜಿಲ್ಲಾಧಿಕಾರಿಗೆ 30 ದಿನಗಳ ಮೊದಲೇ ಮಾಹಿತಿ ನೀಡಬೇಕು. ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್​ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು.

ಇದಕ್ಕೆ 30 ದಿನಗಳೊಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ. ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲಧರ್ಮ, ಮತಾಂತರಗೊಂಡ ಧರ್ಮ ಮತ್ತು ಇತರೆ ಮಾಹಿತಿಗಳನ್ನು ಜಿಲ್ಲಾಧಿಕಾರಿಗೆ ನೀಡಬೇಕು. ಅಪರಾಧಕ್ಕೆ ನೆರವು ಮತ್ತು ದುಷ್ಪೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ ಎಂದು ಕಾಯ್ದೆಯಲ್ಲಿ ಉಲ್ಲೇಖಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.