ಬೆಂಗಳೂರು : 73ನೇ ಗಣರಾಜ್ಯೋತ್ಸವ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಧ್ವಜಾರೋಹಣ ಮಾಡುವ ಮೂಲಕ ಸರಳವಾಗಿ 73ನೇ ಗಣರಾಜ್ಯೋತ್ಸವನ್ನು ಆಚರಿಸಲಾಯಿತು.
ಸರ್ಕಾರಿ ಕಾರ್ಯಕ್ರಮದಲ್ಲಿ ಗಣ್ಯ ವ್ಯಕ್ತಿಗಳು ಆಗಮಿಸುವ ಹಿನ್ನೆಲೆ ಸುರಕ್ಷತೆ ದೃಷ್ಟಿಯಿಂದ ಭಾಷಣ ಮಾಡುವ ಸ್ಥಳದಲ್ಲಿ ಬುಲೆಟ್ ಪ್ರೂಫ್ ಗ್ಲಾಸ್ ನಿರ್ಮಾಣ ಮಾಡಲಾಗುತ್ತದೆ.
ಅದರಂತೆ ಸರ್ಕಾರದಿಂದ ವೇದಿಕೆ ಮೇಲೆ ಬುಲೆಟ್ ಪ್ರೂಫ್ ಗ್ಲಾಸ್ ಸಿದ್ಧಪಡಿಸಲಾಗಿತ್ತು. ಆದರೆ, ರಾಜ್ಯಪಾಲರು, ಬುಲೆಟ್ ಪ್ರೂಫ್ ಗ್ಲಾಸ್‌ಶೀಲ್ಡ್ ತೆಗೆಸಿ ಸಾಮಾನ್ಯ ವೇದಿಕೆಯಲ್ಲಿ ನಾಡಿನ ಜನತೆಗೆ ಸಂದೇಶ ನೀಡುವ ಮೂಲಕ ಗಮನ ಸೆಳೆದರು.
ಇದನ್ನೂ ಓದಿ: ನಿಮ್ಹಾನ್ಸ್ಲ್ಲಿ ಅಡ್ಮಿಟ್ ಆಗಬೇಕಾದವರ ಬಗ್ಗೆ ನಾನು ಮಾತನಾಡಲ್ಲ: 'ರ-ಜಾ'ಗೆ ಡಿಕೆಶಿ ಟಾಂಗ್
ಮೊದಲೇ ರಾಜ್ಯಪಾಲರು ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಯಾವುದೇ ಬುಲೆಟ್ ಪ್ರೂಫ್ ಗ್ಲಾಸ್ ಅಳವಡಿಸದೆ ಭಾಷಣ ಮಾಡಿದ್ದಾರೆ.
ಜಾಹೀರಾತು : ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ