ಬೆಂಗಳೂರು : 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಆಯುಷ್ಯ ಇಲಾಖೆಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ ಹಮ್ಮಿಕೊಳ್ಳಲಾಗಿದ್ದ "ಯೋಗ-ವಸುದೈವ ಕುಟುಂಬಕ್ಕಾಗಿ" ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮದ ಬಳಿಕ ಮಾತನಾಡಿದ ರಾಜ್ಯಪಾಲರು ಯೋಗದ ಮಹತ್ವವನ್ನ ತಿಳಿಸಿದರು. "ನಮ್ಮ ಸಂಸ್ಕೃತಿಯಲ್ಲಿ ಯೋಗಕ್ಕೆ ತನ್ನದೇ ಆದ ಹೆಸರಿದೆ. ಯೋಗದ ಮಹತ್ವ ಕುರಿತು ನಮ್ಮ ಹಳೆ ಗ್ರಂಥಗಳಲ್ಲಿ ಉಲ್ಲೇಖವಿದೆ. ಯೋಗಭ್ಯಾಸದಿಂದ ಭೌತಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಣೆ ಆಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಯೋಗ ದಿನದ ಆಚರಣೆ ಬಗ್ಗೆ ವಿಶ್ವಸಂಸ್ಥೆ ಬಳಿ ಪ್ರಸ್ತಾಪ ಮಾಡಿದ್ದು, ಅದಕ್ಕೆ ಒಪ್ಪಿ ಇಂದು ಅಂತಾರಾಷ್ಟ್ರೀಯ ಯೋಗ ದಿನ ಆಚರಿಸಲಾಗುತ್ತಿದೆ" ಎಂದು ಹೇಳಿದರು.
-
ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ.
— CM of Karnataka (@CMofKarnataka) June 21, 2023 " class="align-text-top noRightClick twitterSection" data="
ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#YogaForHealth #YogaforHumanity #YogaDay pic.twitter.com/8ht0fVLyDg
">ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ.
— CM of Karnataka (@CMofKarnataka) June 21, 2023
ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#YogaForHealth #YogaforHumanity #YogaDay pic.twitter.com/8ht0fVLyDgಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೆ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ.
— CM of Karnataka (@CMofKarnataka) June 21, 2023
ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು.
- ಮುಖ್ಯಮಂತ್ರಿ @siddaramaiah#YogaForHealth #YogaforHumanity #YogaDay pic.twitter.com/8ht0fVLyDg
"ಜನರನ್ನು ದೇಶ-ಭಾಷೆ ಮೀರಿ ಸಂಪರ್ಕಿಸುವ ಮತ್ತು ಆರೋಗ್ಯ ಸಮಾಜ ಕಟ್ಟುವ ಶಕ್ತಿ ಯೋಗಕ್ಕೆ ಇದೆ. ದೇಹ, ಮನಸ್ಸು ಮತ್ತು ಭಾವನೆಗಳನ್ನು ಸಮತೋಲನಗೊಳಿಸಲು ಯೋಗ ಉತ್ತಮ ಮಾರ್ಗವಾಗಿದೆ. ಇಂದು ಪ್ರಪಂಚಾದ್ಯಂತ ಜನರು ತಮ್ಮ ಜೀವನದಲ್ಲಿ ಯೋಗವನ್ನು ಅಳವಡಿಸಿಕೊಳ್ಳುತ್ತಿದ್ದಾರೆ. ಯೋಗಾಸನದ ಅಭ್ಯಾಸದ ಮೂಲಕ, ನಾವು ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಪಡೆಯಬಹುದು. ಯೋಗದ ಈ ಉಪಯುಕ್ತತೆಯ ಬಗ್ಗೆ ಎಲ್ಲರಿಗೂ ಅರಿವು ಮೂಡಿಸಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿ ವರ್ಷ ಯೋಗ ದಿನವನ್ನು ಆಚರಿಸಲಾಗುತ್ತದೆ" ಎಂದು ಹೇಳಿದರು.
"2014 ರಲ್ಲಿ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಯೋಗವನ್ನು ಅಳವಡಿಸಿಕೊಳ್ಳುವಂತೆ ವಿಶ್ವದ ಎಲ್ಲಾ ದೇಶಗಳಿಗೆ ಕರೆ ನೀಡಿದರು ಮತ್ತು ಪ್ರತಿ ವರ್ಷ ಜೂನ್ 21 ರಂದು ಯೋಗ ದಿನವನ್ನು 172 ಕ್ಕೂ ಹೆಚ್ಚು ದೇಶಗಳು ಆಚರಿಸುತ್ತಿವೆ. ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನದ ಥೀಮ್ "ವಸುಧೈವ ಕುಟುಂಬಕ್ಕಾಗಿ ಯೋಗ". ಇದು ನಮ್ಮ ಭಾತೃತ್ವ ಮತ್ತು ವಿಶ್ವ ಸಹೋದರತ್ವದ ನಡವಳಿಕೆಯನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕ ರಾಜ್ಯದಲ್ಲಿ ಜನವರಿ 15, 2023 ರಂದು 26 ನೇ ರಾಷ್ಟ್ರೀಯ ಯುವಜನೋತ್ಸವವನ್ನು ಆಯೋಜಿಸುವ ಸಂದರ್ಭದಲ್ಲಿ, ದೊಡ್ಡ ಪ್ರಮಾಣದ ಯೋಗವನ್ನು ಆಯೋಜಿಸುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಕ್ಕಾಗಿ ನಾನು ನಿಮ್ಮೆಲ್ಲರನ್ನು ಅಭಿನಂದಿಸುತ್ತೇನೆ" ಎಂದರು.
-
Warm greetings to my fellow Indians on International #YogaDay. I have touched the age of 91 and yoga has helped sustain me. I urge everybody to practice yoga and discover its benefits. pic.twitter.com/Nep9SNr2uN
— H D Deve Gowda (@H_D_Devegowda) June 21, 2023 " class="align-text-top noRightClick twitterSection" data="
">Warm greetings to my fellow Indians on International #YogaDay. I have touched the age of 91 and yoga has helped sustain me. I urge everybody to practice yoga and discover its benefits. pic.twitter.com/Nep9SNr2uN
— H D Deve Gowda (@H_D_Devegowda) June 21, 2023Warm greetings to my fellow Indians on International #YogaDay. I have touched the age of 91 and yoga has helped sustain me. I urge everybody to practice yoga and discover its benefits. pic.twitter.com/Nep9SNr2uN
— H D Deve Gowda (@H_D_Devegowda) June 21, 2023
ಈ ಸಂದರ್ಭದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್, ಶಾಸಕರುಗಳಾದ ರಿಜ್ವಾನ್ ಅರ್ಷದ್, ಶರವಣನ್, ಕ್ರೀಡಾಪಟುಗಳಾದ ವೆಂಕಟೇಶ್ ಪ್ರಸಾದ್, ಅಂಜು ಬಿ ಜಾರ್ಜ್, ನಟಿ ಭಾವನ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ರಾಜ್ಯಪಾಲರು ಸೇರಿದಂತೆ ಎಲ್ಲ ಗಣ್ಯರು ಯೋಗಾಸನ ಮಾಡಿದರು. ನಂತರ, ನುರಿತ ಯೋಗಪಟುಗಳು ಯೋಗ ಪ್ರದರ್ಶನ ನೀಡಿದರು.
ಇದನ್ನು ಓದಿ: ವಿಶ್ವಸಂಸ್ಥೆಯಲ್ಲಿ ಇಂದು ಮೋದಿ ಯೋಗ ಪ್ರದರ್ಶನ.. ದೇಶಾದ್ಯಂತ ಯೋಗ ದಿನದ ಸಂಭ್ರಮ
Video : ಉಪರಾಷ್ಟ್ರಪತಿ ಧನಕರ್ ಸೇರಿ ಗಣ್ಯರಿಂದ ಯೋಗ ದಿನ ಆಚರಣೆ..
ಹೆಚ್ ಡಿ ದೇವೇಗೌಡ ಟ್ವೀಟ್ : ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರು 9ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಶುಭಾಶಯ ಕೋರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, " ನಾನು 91ನೇ ವಯಸ್ಸನ್ನು ಮುಟ್ಟಿದ್ದೇನೆ. ನನಗೆ ಯೋಗ ಸಹಾಯ ಮಾಡಿದೆ. ಪ್ರತಿಯೊಬ್ಬರು ಯೋಗವನ್ನು ಅಭ್ಯಾಸ ಮಾಡಿ ಮತ್ತು ಅದರ ಪ್ರಯೋಜನಗಳನ್ನು ಪಡೆದುಕೊಳ್ಳಿ " ಎಂದು ಕರೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್ : "ಜಾತಿ, ಧರ್ಮ, ಪಂಥ, ಸಿದ್ಧಾಂತಗಳನ್ನು ತಳುಕುಹಾಕದೇ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಯೋಗಾಭ್ಯಾಸ ಮಾಡೋಣ. ಸರ್ವರಿಗೂ ಅಂತಾರಾಷ್ಟ್ರೀಯ ಯೋಗದ ದಿನದ ಶುಭಾಶಯಗಳು" ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಶುಭಕೋರಿದ್ದಾರೆ. ಯೋಗ ದಿನಚರಣೆ ಹಿನ್ನೆಲ್ಲೆ ಜಾತಿ, ಧರ್ಮ, ವಯಸ್ಸಿನ ಮಿತಿ ಇಲ್ಲದೆ ರಾಜ್ಯಾದ್ಯಂತ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರು ನಗರದ ಹಲವು ಕಾಲೇಜು, ಪಾರ್ಕ್, ಗ್ರೌಂಡ್ಗಳಲ್ಲಿ ಯೋಗ ಡೇ ಆಯೋಜನೆ ಮಾಡಲಾಗುತ್ತಿದೆ.
ಈ ಸುದ್ದಿಗಳನ್ನು ಓದಿ : International Yoga Day 2023 : ಲಡಾಖ್ನ ಪ್ಯಾಂಗೊಂಗ್ನಲ್ಲಿ ಭಾರತೀಯ ಸೇನಾ ಸಿಬ್ಬಂದಿಯಿಂದ ಯೋಗ ಪ್ರದರ್ಶನ
ಈ ಬಾಲಕ ಜ್ಯೂನಿಯರ್ ರಾಮದೇವ ಬಾಬಾ.. ವಯಸ್ಸು ಕೇವಲ 10.. 150ಕ್ಕೂ ಹೆಚ್ಚು ಆಸನಗಳು ಈತನಿಗೆ ಸುಲಲಿತ