ETV Bharat / state

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ - etv bharat kannada

ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತಿರುಪತಿಯ ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ.

governor-thawar-chand-gehlot-who-had-darshan-of-venkateswara-in-tirupati
ತಿಮ್ಮಪ್ಪನ ದರ್ಶನ ಪಡೆದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
author img

By ETV Bharat Karnataka Team

Published : Aug 23, 2023, 10:59 PM IST

ಬೆಂಗಳೂರು: ಅನಾರೋಗ್ಯದಿಂದ ಚೇತರಿಸಿಕೊಳ್ಳುತ್ತಿದ್ದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಟೆಂಪಲ್ ರನ್ ಶುರು ಮಾಡಿದ್ದು, ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಿರುಪತಿಯಲ್ಲಿ ರಾಜ್ಯಪಾಲರು, ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು.

ಇದಕ್ಕೂ ಮುನ್ನ, ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. ಪೂಜೆಯ ನಂತರ ರಂಗಾನಾಯಕುಲ ಮಂಟಪದಲ್ಲಿ ಶ್ರೀವಾರಿ ವಸ್ತ್ರವನ್ನು ನೀಡಿ ರಾಜ್ಯಪಾಲರನ್ನು ಗೌರವಿಸಿದರು. ನಂತರ ತಿಮ್ಮಪ್ಪ ಸ್ವಾಮಿ ಪ್ರಸಾದವನ್ನು ದೇವಾಲಯದ ವತಿಯಿಂದ ನೀಡಲಾಯಿತು.

ವೆಲ್ಲೂರು ಗೋಲ್ಡನ್ ಟೆಂಪಲ್​ಗೆ ಭೇಟಿ: ಗೆಹ್ಲೋಟ್ ಅವರು ವೆಲ್ಲೂರಿನಲ್ಲಿರುವ ಶ್ರೀರಾಮಪುರ ಗೋಲ್ಡನ್ ಟೆಂಪಲ್​ಗೆ ಭೇಟಿ ನೀಡಿದರು. ಶ್ರೀ ನಾರಾಯಣಿ ದೇವಿ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಕೆಲವು ನಿಮಿಷಗಳ ಕಾಲ ಪ್ರಾರ್ಥನೆ ಸಲ್ಲಿಸುವ ಮೂಲಕ ಕೆಲ ಸಮಯ ಕಳೆದರು. ಶ್ರೀ ನಾರಾಯಣಿ ಪೀಠದ ಸಂಸ್ಥಾಪಕ ಮತ್ತು ಪೀಠಾಧಿಪತಿ ಶ್ರೀ ಶಕ್ತಿ ಅಮ್ಮನವರ ಆಶೀರ್ವಾದ ಪಡೆದರು. ಶಕ್ತಿ ಅಮ್ಮನವರು ರಾಜ್ಯಪಾಲರನ್ನು ಸನ್ಮಾನಿಸಿದರು. ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: Chandrayaan-3 ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ: ಅಭಿನಂದನೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ, ಹೆಚ್​ಡಿಡಿ.. ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.