ಬೆಂಗಳೂರು: ರಾಜಭವನದಲ್ಲಿ ಆಯುಧ ಪೂಜೆಯನ್ನು ಸರಳವಾಗಿ ನೆರವೇರಿಸಲಾಯಿತು.
ರಾಜ್ಯಪಾಲ ವಜುಭಾಯಿ ವಾಲಾ ಅವರು ಆಯುಧ ಪೂಜೆ ಅಂಗವಾಗಿ ರಾಜಭವನದ ಪೊಲೀಸ್ ಗಾರ್ಡ್ ಕೊಠಡಿಯಲ್ಲಿ ಭದ್ರತಾ ಸಿಬ್ಬಂದಿಯ ಶಸ್ತ್ರಾಸ್ತ್ರಗಳನ್ನು ಇರಿಸಿ ಪೂಜೆ ನೆರವೇರಿಸಿದರು.
ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ಸರಳವಾಗಿ ಪೂಜೆ ನೆರವೇರಿಸಲಾಯಿತು. ಈ ವೇಳೆ ರಾಜಭವನದ ಸಿಬ್ಬಂದಿ ಪೂಜೆಯಲ್ಲಿ ಪಾಲ್ಗೊಂಡಿದ್ದರು.