ETV Bharat / state

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದೆ: ಗೋವಿಂದ ಕಾರಜೋಳ - etv bharat kannada

ರಾಜ್ಯ ಸರ್ಕಾರ 50 ಸಾವಿರ ಕೋಟಿ ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ಟೋಪಿ ಹಾಕುವ ಕೆಲಸವನ್ನು ಮಾಡುತ್ತಿದೆ ಎಂದು ಮಾಜಿ ಡಿಸಿಎಂ ಗೋವಿಂದ ಕಾರಜೋಳ ಟೀಕಿಸಿದ್ದಾರೆ.

govinda-karajola-reaction-on-congress-government
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಹೆಸರಿನಲ್ಲಿ ಜನರಿಂದ ಸುಲಿಗೆ ಮಾಡುತ್ತಿದೆ: ಗೋವಿಂದ ಕಾರಜೋಳ
author img

By

Published : Aug 1, 2023, 8:34 PM IST

ಮಾಜಿ ಡಿಸಿಎಂ ಗೋವಿಂದ ಕಾರಜೋಳ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿಗಳ ಹೆಸರಿನಲ್ಲಿ 75 ಸಾವಿರ ಕೋಟಿಯನ್ನು ಜನರಿಂದ ಸುಲಿಗೆ ಮಾಡುತ್ತಿದೆ. ದಲಿತರ ಹಣವನ್ನು ಬೇರೆಯದಕ್ಕೆ ಬಳಿಕೆ ಮಾಡಿಕೊಂಡು ದಲಿತರಿಗೆ ಮೋಸ ಮಾಡಲು ಹೊರಟಿದೆ ಇದರ ವಿರುದ್ಧ ನಾವು ಹೋರಾಟ ನಡೆಸುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಯಲ್ಲಿಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

50 ಸಾವಿರ ಕೋಟಿ ಖರ್ಚು ಮಾಡುವುದಾಗಿ ಅವರೇ ಹೇಳಿದ್ದಾರೆ. ಈಗಾಗಲೇ ಜುಲೈ ಮುಗಿದಿದೆ. 50 ಸಾವಿರ ಕೋಟಿ ಕೊಡಲು ಹೋಗಿ ಜನರಿಗೆ 75 ಸಾವಿರ ಕೋಟಿ ಟೋಪಿ ಹಾಕುವ ಕೆಲಸವನ್ನು ಮಾಡುತ್ತಿರುವುದು ಖಂಡನೀಯ. ಇಂಥ ಮೋಸದಾಟ ಒಪ್ಪಲು ಅಸಾಧ್ಯ. ನಿನ್ನೆ ಸಮಾಜ ಕಲ್ಯಾಣ ಇಲಾಖೆಯ ವಿಶೇಷ ಅನುದಾನ ಸಂಬಂಧಿತ ಸಭೆ ಮಾಡಿ, ಎಸ್​ಸಿ, ಎಸ್​ಪಿ. ಟಿಎಸ್​ಪಿಯ 11 ಸಾವಿರ ಕೋಟಿ ರೂಪಾಯಿ ಹಣವನ್ನು ಬೇರೆ ಉದ್ದೇಶಕ್ಕೆ ಬಳಸಲು ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದರು.

ಸರ್ಕಾರ ವಸತಿ ಶಾಲೆ ನಿರ್ಮಾಣಕ್ಕೆ ಒಂದು ರೂಪಾಯಿ ಇಟ್ಟಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದಲ್ಲೇ ಈ ಸಭೆ ಮಾಡಿದ್ದಾರೆ. ಸಂವಿಧಾನದ ಆಶಯ ಏನು? ಈ ದೇಶದಲ್ಲಿರುವ ದೀನದಲಿತರು, ಬಡವರು, ಶಿಕ್ಷಣ ವಂಚಿತರು, ಉದ್ಯೋಗದಲ್ಲಿ ಅವಕಾಶ ವಂಚಿತರು, ಕಡು ಬಡವರನ್ನು ಮೇಲೆತ್ತುವ ಕಾರ್ಯಕ್ರಮಗಳನ್ನು ಮಾಡಬೇಕು. ಮುಖ್ಯವಾಗಿ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು. ಉದ್ಯೋಗ ನೀಡಿಕೆ, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡಬೇಕು. ಆರೋಗ್ಯಕ್ಕೆ ಅನುದಾನ ಕೊಡಬೇಕೆಂಬುದೇ ಸಂವಿಧಾನದ ಆಶಯ. ಈ ಸರ್ಕಾರ ಹಾಸ್ಟೆಲ್ ನಿರ್ಮಾಣ, ವಸತಿ ಶಾಲೆ ನಿರ್ಮಾಣಕ್ಕೆ ಒಂದೇ ಒಂದು ರೂಪಾಯಿ ಇಟ್ಟಿಲ್ಲ ಎಂದು ಟೀಕಿಸಿದರು.

ಎಸ್‍ಸಿ, ಎಸ್‍ಟಿ ಜನಾಂಗಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಶೇ. 24 ಅನುದಾನ ಕೊಡುವ ಶ್ರೇಷ್ಠ ಕೆಲಸ ಮಾಡಿದ್ದಾಗಿ ಸಿದ್ದರಾಮಯ್ಯನವರು ಎದೆ ಬಡಿದುಕೊಳ್ಳುತ್ತಿದ್ದರು. ಅವರು ಮಾಡಿದ್ದಾದರೂ ಏನು ಎಂದು ಕೇಳಿದರು. 156 ವಸತಿ ಶಾಲೆಯ ಕಟ್ಟಡದ ಕಾಮಗಾರಿ ಕಳೆದ 3 ತಿಂಗಳಿನಿಂದ ನಿಲ್ಲಿಸಿದ್ದಾರೆ. 75 ಹಾಸ್ಟೆಲ್‍ಗಳ ನಿರ್ಮಾಣ ಕಾರ್ಯ ಸ್ಥಗಿತವಾಗಿದೆ. 108 ವಸತಿ ಶಾಲೆಗಳಿಗೆ ಪ್ರತಿ ಶಾಲೆಗೆ 10 ಎಕರೆಯಷ್ಟು ಭೂಮಿಯನ್ನು ನಾವು ನೀಡಿದ್ದೆವು. ಅವುಗಳಿಗೆ ಹಣ ಮಂಜೂರು ಮಾಡಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಸಚಿವ ಮಹದೇವಪ್ಪನವರು ಸುಮ್ಮನೆ ರಾಜಕೀಯಕ್ಕೆ ಬಂದವರಲ್ಲ. ಅವರಿಗೆ ದಲಿತ ಸಂಘರ್ಷ ಸಮಿತಿ ಹೋರಾಟದ ಹಿನ್ನೆಲೆ ಇದೆ. ಅವರು ಯಾವುದೇ ಕಾರಣಕ್ಕೂ ಅನುದಾನ ಹೊಂದಾಣಿಕೆಯನ್ನು ಒಪ್ಪಬಾರದು ಎಂದು ಆಗ್ರಹಿಸಿದರು. ಒಲ್ಲದ, ಭಾರವಾದ ಮನಸ್ಸಿನಿಂದ ಇದನ್ನು ಒಪ್ಪಿಕೊಂಡಿದ್ದಾಗಿ ಮಹದೇವಪ್ಪನವರು ಹೇಳಿದ್ದನ್ನು ಕೆಲವು ಪತ್ರಿಕೆಯವರು ಪ್ರಕಟಿಸಿದ್ದಾರೆ. ಮಹದೇವಪ್ಪನವರು ಡಾ. ಬಿ. ಆರ್.ಅಂಬೇಡ್ಕರ್ ಅವರು ನೀಡಿದ ಶಕ್ತಿಯಿಂದ ಇದಕ್ಕೆ ತಡೆ ಒಡ್ಡಬೇಕು ಎಂದು ಅವರು ಒತ್ತಾಯಿಸಿದರು.

ಬಡವರ ಮಕ್ಕಳಿಗೆ ಓದಲು ಅವಕಾಶ ಮಾಡಿಕೊಡಲು ಮೊದಲು ಹಾಸ್ಟೆಲ್ ನಿರ್ಮಿಸಿಕೊಡಿ. ವಸತಿ ಶಾಲೆಗಳನ್ನು ಪೂರ್ಣಗೊಳಿಸಿ ಬಡವರ ಮಕ್ಕಳಿಗೆ ಅವಕಾಶ ಸಿಗುವಂತಾಗಲಿ. ಹಾಸ್ಟೆಲ್‍ನಲ್ಲಿ ಒಂದು ಕೊಠಡಿಯಲ್ಲಿ 20ರಿಂದ 30 ಹುಡುಗರನ್ನು ಕುರಿ ತುಂಬಿಸಿದಂತೆ ತುಂಬಿಸಿ ಓದಿಸಲು ಸಾಧ್ಯವಿಲ್ಲ. ಅವರಿಗೆ ನೀರು, ಶೌಚಾಲಯ, ವಿದ್ಯುತ್ ವ್ಯವಸ್ಥೆ ಸರಿಯಾಗಿಲ್ಲ. 11 ಸಾವಿರ ಕೋಟಿ ಪೈಕಿ 2,500 ಕೋಟಿಯನ್ನು ಹಾಸ್ಟೆಲ್ ಮತ್ತು ವಸತಿ ಶಾಲೆಗೆ ಕೊಡಬೇಕು ಎಂದು ಗೋವಿಂದ ಕಾರಜೋಳ ಅವರು ಆಗ್ರಹಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗೆ ದಲಿತರ ಏಳಿಗೆ, ಕಲ್ಯಾಣಕ್ಕೋಸ್ಕರ ಮೀಸಲಿಟ್ಟ ಹಣವನ್ನು ಒಂದೆಡೆ ನೀಡುತ್ತಿದೆ. ಅಷ್ಟೂ ಸಾಕಾಗದೆ ಬೆಲೆ ಏರಿಕೆಯ ಬರೆಯನ್ನೂ ಈ ಸರ್ಕಾರ ಹಾಕುತ್ತಿದೆ. ವಿದ್ಯುತ್ ಬಿಲ್, ಬಸ್ ಪ್ರಯಾಣ ದರ, ನೀರಿನ ದರ, ಮದ್ಯದ ದರ, ವಿವಿಧ ತರಕಾರಿ ಬೆಲೆಯನ್ನೂ ಏರಿಸಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ದುಬಾರಿ ದುನಿಯಾ, ಬೆಲೆ ಏರಿಕೆಯೇ ಆರನೇ ಗ್ಯಾರಂಟಿ: ಬೊಮ್ಮಾಯಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.