ETV Bharat / state

ಮಾದಕ ವಸ್ತುಗಳ ಮಾರಾಟ: ಮಹಿಳೆ ಸೇರಿ ಇಬ್ಬರು ವಿದೇಶಿ ಪ್ರಜೆಗಳ ಬಂಧನ

ಸಿಲಿಕಾನ್​ ಸಿಟಿಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಉದ್ಯಮಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಡ್ರಗ್​​ ಪೆಡ್ಲರ್​​ಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

author img

By

Published : Jul 5, 2021, 8:51 PM IST

police arrested two drug peddlers
ವಿದೇಶಿ ಪ್ರಜೆಗಳ ಬಂಧನ

ಬೆಂಗಳೂರು: ಕಾಲೇಜು ವಿದ್ಯಾರ್ಥಿಗಳು, ಉದ್ಯಮಿಗಳಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಓರ್ವ ಮಹಿಳೆ ಸೇರಿದಂತೆ ಇಬ್ಬರು ವಿದೇಶಿ ಪ್ರಜೆಗಳನ್ನು ಗೋವಿಂದಪುರ ಪೊಲೀಸರು ಬಂಧಿಸಿದ್ದಾರೆ.

ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುವ ಪೆಡ್ಲರ್‌ಗಳನ್ನು ಪತ್ತೆ ಹಚ್ಚಲು ಹಿರಿಯ ಪೊಲೀಸ್ ಅಧಿಕಾರಿಗಳು ಸೂಚನೆ ನೀಡಿದ್ದರು. ಈ ಸಂಬಂಧ ಕಾರ್ಯಾಚರಣೆಗಿಳಿದ ಗೋವಿಂದಪುರ ಠಾಣಾ ಪೊಲೀಸರು, ಡ್ರಗ್ಸ್ ಪೆಡ್ಲರ್‌ಗಳ ಪತ್ತೆ ಕಾರ್ಯದಲ್ಲಿ ತೊಡಗಿದ್ದರು. ಈ ಸಮಯದಲ್ಲಿ ಬಂಧಿತ ಆರೋಪಿಗಳು ಹೆಚ್​ಬಿಆರ್​​ ಲೇಔಟ್​​​​​ ಬಳಿ ಇರುವ ಹಿಲಾಲ್​​​ ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರು.

ಈ ಕುರಿತಂತೆ ಖಚಿತ ಮಾಹಿತಿ ಪಡೆದ ಪೊಲೀಸರು, ಮಾಲುಸಮೇತ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 4 ಲಕ್ಷಕ್ಕೂ ಅಧಿಕ ಮೌಲ್ಯದ 55 ಗ್ರಾಂ ಕೊಕೇನ್, 400 ನಗದು, ಒಂದು ಮೊಬೈಲ್ ಮತ್ತು ಕೃತ್ಯಕ್ಕೆ ಉಪಯೋಗಿಸಿದ್ದ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದುಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಡಿಸಿಪಿ ಡಾ.ಶರಣಪ್ಪ ಮಾಹಿತಿ ನೀಡಿದರು.

ಆರೋಪಿಗಳಿಗೆ ಮನೆ ಬಾಡಿಗೆ ನೀಡಿದ್ದ ಮಾಲೀಕರ ವಿಚಾರಣೆ ಮತ್ತು ಕ್ರಮ:

ವಿದೇಶಿ ಪ್ರಜೆಗಳ ವೀಸಾ ದಾಖಲಾತಿಗಳನ್ನು ಪರಿಶೀಲಿಸದೆ ವಾಸಿಸಲು ಮನೆ ಬಾಡಿಗೆ ನೀಡಿದ್ದ ಮನೆ ಮಾಲೀಕರುಗಳ ವಿರುದ್ಧ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.