ETV Bharat / state

ಓಲಾ, ಉಬರ್​ನಲ್ಲಿ ಆಟೋರಿಕ್ಷಾ ಸೇವೆ: 4 ವಾರ ಸಮಯ ನೀಡುವಂತೆ ಹೈಕೋರ್ಟ್​ಗೆ ಮನವಿ ಮಾಡಿದ ಸರ್ಕಾರ - ಆಟೋರಿಕ್ಷಾ ಸೇವೆ

ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ ಅರ್ಜಿಗಳ ವಿಚಾರಣೆ ವೇಳೆ ಮುಂದಿನ 4 ವಾರ ಸಮಯ ನೀಡುವಂತೆ ಹೈಕೋರ್ಟ್​ಗೆ ಸರ್ಕಾರದ ಪರ ವಕೀಲರು ಮನವಿ ಮಾಡಿದರು.

ola uber
ಹೈಕೋರ್ಟ್
author img

By

Published : Nov 7, 2022, 2:10 PM IST

ಬೆಂಗಳೂರು: ಮೊಬೈಲ್ ಆ್ಯಪ್ ಆಧಾರಿತ ಓಲಾ ಉಬರ್ ಸೇವೆಗಳಲ್ಲಿ ಆಟೋರಿಕ್ಷಾಗಳ ಬಳಕೆ ನಿರ್ಬಂಧಿಸಿದ್ದ ಅರ್ಜಿ ಸಂಬಂಧ ಪರಿಹಾರ ಕಂಡುಕೊಳ್ಳಲು ಇನ್ನೂ ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದು ಹೈಕೋರ್ಟ್​ಗೆ ಸರ್ಕಾರ ಮನವಿ ಮಾಡಿದೆ.

ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶ ರದ್ದುಪಡಿಸುವಂತೆ ಕೋರಿ ಎಎನ್‌ಐ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಮತ್ತು ಉಬರ್ ಇಂಡಿಯಾ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ನೇತೃತ್ವದ ಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ಕಾರಕ್ಕೆ‌ಸೂಚನೆ ನೀಡಿ‌ ವಿಚಾರಣೆಯನ್ನು ಮುಂದೂಡಿತ್ತು.

ಇದನ್ನೂ ಓದಿ: ಓಲಾ, ಉಬರ್ ಆಟೋ ರಿಕ್ಷಾ ಸೇವೆ: ಬಲವಂತದ ಕ್ರಮ ಬೇಡ, ಪ್ರಯಾಣ ಶುಲ್ಕ ನಿಗದಿಗೆ ಹೈಕೋರ್ಟ್​ ಸೂಚನೆ

ಇಂದು ವಿಚಾರಣೆ ಕೈಗೆತ್ತಿಕೊಂಡ ನ್ಯಾಯಪೀಠದ ಮುಂದೆ ಸರ್ಕಾರ ಪರ ವಕೀಲರು ಹಾಜರಾಗಿ, ಓಲಾ, ಉಬರ್ ಸೇವೆಗಳಲ್ಲಿ ಆಟೋರಿಕ್ಷಾಗಳ ಬಳಕೆಗೆ ಸಂಬಂಧಿಸಿದಂತೆ ಮತ್ತಷ್ಟು ಚರ್ಚೆ ನಡೆಸಬೇಕಾಗಿದೆ. ಹೀಗಾಗಿ, ಮತ್ತಷ್ಟು ಕಾಲಾವಕಾಶ ನೀಡಬೇಕು ಎಂದು ಮನವಿ ಮಾಡಿದರು. ಮನವಿ ಪುರಸ್ಕರಿಸಿದ ನ್ಯಾಯಪೀಠ, ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಆ್ಯಪ್ ಆಧಾರಿತ ಆಟೋರಿಕ್ಷಾ ಸೇವೆ ಅಧಿಕೃತಗೊಳಿಸಲು ಮುಂದಾದ ಸಾರಿಗೆ ಇಲಾಖೆ

ಐದು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಿ: ಇದೇ ವೇಳೆ ಆಟೋಗಳ ಬಳಕೆಗೆ ಹೆಚ್ಚುವರಿ ಶುಲ್ಕ ನಿಗದಿಪಡಿಸಲು ಕೋರಿ ಓಲಾ ಮತ್ತು ಉಬರ್ ಮಧ್ಯಂತರ ಅರ್ಜಿ ಸಲ್ಲಿಸಿತು. ಈ ಸಂಬಂಧ ಐದು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ ನ್ಯಾಯಪೀಠ ವಿಚಾರಣೆ ಮುಂದೂಡಿತು.

ಇದನ್ನೂ ಓದಿ: ಆ್ಯಪ್ ಆಧಾರಿತ ಆಟೋ ಸೇವೆಗೆ 15 ದಿನದಲ್ಲಿ ಪ್ರಯಾಣ ಶುಲ್ಕ ನಿಗದಿಪಡಿಸಲು ಹೈಕೋರ್ಟ್ ಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.