ETV Bharat / state

ಜಯಲಲಿತಾರಿಂದ ಜಪ್ತಿ ಮಾಡಿದ್ದ ಬೆಲೆಬಾಳುವ ವಸ್ತುಗಳ ವಿಲೇವಾರಿಗೆ ವಿಶೇಷ ಅಭಿಯೋಜಕರನ್ನ ನೇಮಿಸಿದ ಸರ್ಕಾರ

ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರಿಂದ ಜಪ್ತಿ ಮಾಡಿದ್ದ ಬೆಲೆಬಾಳುವ ವಸ್ತುಗಳನ್ನು ವಿಲೇವಾರಿ ಮಾಡಲು ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸುವಂತೆ ವಿಶೇಷ ನ್ಯಾಯಾಲಯ ಹೇಳಿತ್ತು.

Govt appointed special prosecutor to deal with valuables seized from Jayalalitha
ಜಯಲಲಿತಾರಿಂದ ಜಪ್ತಿ ಮಾಡಿದ್ದ ಬೆಲೆಬಾಳುವ ವಸ್ತುಗಳ ವಿವೇವಾರಿಗೆ ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ
author img

By

Published : Apr 7, 2023, 1:22 PM IST

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಬೆಳೆ ಬಾಳುವ ವಸ್ತುಗಳನ್ನು ವಿಲೇವಾರಿ ಮಾಡಲು ಹಿರಿಯ ವಕೀಲ ಕಿರಣ್ ಎಸ್ ಜವಳಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಜವಳಿ ಅವರನ್ನು ನೇಮಕ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆಧಿನಾರಾಯಣ ಅವರು ಇತ್ತೀಚೆಗೆ ಆದೇಶ ಮಾಡಿದ್ದಾರೆ.

ಮುಂದಿನ ಒಂದು ತಿಂಗಳಲ್ಲಿ ಈ ಕುರಿತ ವಿಚಾರಣೆ ಪ್ರಾರಂಭವಾಗಲಿದ್ದು, ಎಲ್ಲ ವಸ್ತುಗಳನ್ನು ಹರಾಜು ಮೂಲಕ ಮಾರಾಟ ಮಾಡಿ ಬಂದ ಹಣವನ್ನು ನ್ಯಾಯಾಲಯವೇ ತಮಿಳುನಾಡು ಸರ್ಕಾರಕ್ಕೆ ಒಪ್ಪಿಸಲಿದೆ ಎಂದು ಕಾನೂನು ತಜ್ಞರು ವಿವರಿಸಿದ್ದಾರೆ. ಮಾಹಿತಿ ಹಕ್ಕು ಕಾರ್ಯಕರ್ತ (ಆರ್‌ಟಿಐ) ಟಿ. ನರಸಿಂಹ ಮೂರ್ತಿ ಸಲ್ಲಿಸಿದ್ದ ಮೇಲ್ಮನವಿ ಕುರಿತು ನಗರದ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ (ಪ್ರಥಮ ಮೇಲ್ಮನವಿ ಪ್ರಾಧಿಕಾರ) ಇತ್ತೀಚೆಗೆ ಈ ಮಾಹಿತಿಯನ್ನು ಒದಗಿಸಿದೆ.

ಪ್ರಕರಣದ ಹಿನ್ನೆಲೆ?: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ನಗರದ ವಿಶೇಷ ನ್ಯಾಯಾಲಯವು ಜಯಲಲಿತಾ ಅವರಿಗೆ ನಾಲ್ಕು ವರ್ಷಗಳು ಜೈಲು ಮತ್ತು 100 ಕೋಟಿ ರೂ. ದಂಡ ವಿಧಿಸಿ 2014 ರ ಸೆ.27 ರಂದು ಆದೇಶಿಸಿತ್ತು. ಜಪ್ತಿ ಮಾಡಲಾದ ಜಯಲಲಿತಾ ಅವರ ಬೆಲೆ ಬಾಳುವ ವಸ್ತುಗಳನ್ನು ಆರ್‌ಬಿಐ, ಎಸ್‌ಬಿಐಗೆ ಅಥವಾ ಸಾರ್ವಜನಿಕ ಹರಾಜು ಮೂಲಕ ಮಾರಾಟ ಮಾಡಬೇಕು. ಅದರಿಂದ ಬಂದ ಹಣವನ್ನು ದಂಡ ಮೊತ್ತಕ್ಕೆ ಹೊಂದಾಣಿಕೆ ಮಾಡಬೇಕು ಎಂದು ನಿರ್ದೇಶಿಸಿತ್ತು.

ಏನೆಂದು ಮನವಿ ಮಾಡಲಾಗಿತ್ತು?: ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ತಮಿಳುನಾಡು ಭ್ರಷ್ಟಾಚಾರ ನಿಗ್ರಹ ದಳ ಮತ್ತ ವಿಚಕ್ಷಣಾ ದಳದ ಅಧಿಕಾರಿಗಳು 1996 ರ ಡಿ.11 ರಂದು ಚೆನ್ನೈ ನಗರದ ಜಯಲಲಿತಾ ನಿವಾಸ ಪೊಯಾಸ್ ಗಾರ್ಡನ್ ಮೇಲೆ ದಾಳಿ ನಡೆಸಿ ಕೋಟ್ಯಂತರ ರೂ. ಬೆಲೆ ಬಾಳುವ ವಸ್ತುಗಳನ್ನು ಜಪ್ತಿ ಮಾಡಿದ್ದರು. ಈಗಾಗಲೇ ಪ್ರಕರಣ ಮುಕ್ತಾಯಗೊಂಡಿರುವ ಕಾರಣ ಆ ವಸ್ತುಗಳನ್ನು ನ್ಯಾಯಾಲಯದ ಸುಪರ್ದಿಯಲ್ಲಿ ಇಟ್ಟುಕೊಳ್ಳುವ ಯಾವುದೇ ಅಗತ್ಯ ಇಲ್ಲ. ಆದ್ದರಿಂದ ಆ ವಸ್ತುಗಳನ್ನು ವಿಲೇವಾರಿ ಮಾಡಬೇಕು. ಅವುಗಳನ್ನು ಸಾರ್ವಜನಿಕ ಹರಾಜು ಮೂಲಕ ಮಾರಾಟಕ್ಕೆ ಇಟ್ಟರೆ, ಜಯಲಲಿತಾ ಡೈ-ಹಾರ್ಡ್ ಬೆಂಬಲಿಗರು ದೊಡ್ಡ ಮೊತ್ತಕ್ಕೆ ಖರೀದಿ ಮಾಡುವುದರಲ್ಲಿ ಸಂದೇಹವಿಲ್ಲ ಎಂದು ಮೇಲ್ಮನವಿದಾರ ತಮ್ಮ ಮನವಿಯಲ್ಲಿ ತಿಳಿಸಿದ್ದರು.

ಜಯಲಲಿತಾಗೆ ಸೇರಿದ ಯಾವ ಯಾವ ವಸ್ತುಗಳಿವೆ?: 7,040 ಗ್ರಾಂ ತೂಕದ 468 ಬಗೆಯ ಚಿನ್ನ ಹಾಗೂ ವಜ್ರಖಚಿತ ಆಭರಣಗಳು, 700 ಕೆ.ಜಿ. ತೂಕದ ಬೆಳ್ಳಿ ಆಭರಣಗಳು, 740 ದುಬಾರಿ ಬೆಲೆಯ ಚಪ್ಪಲಿಗಳು, 11,344 ರೇಷ್ಮೆ ಸೀರೆಗಳು, 250 ಶಾಲು, 12 ರೆಫ್ರಿಜೆರೇಟರ್, 10 ಟಿವಿ ಸೆಟ್, 8 ವಿಸಿಆರ್, 1 ವಿಡಿಯೋ ಕ್ಯಾಮೆರಾ, 4 ಸಿಡಿ ಪ್ಲೇಯರ್, 2 ಆಡಿಯೋ ಡೆಕ್, 24 ಟೂ-ಇನ್ ಒನ್ ಟೇಪ್ ರೇಕಾರ್ಡರ್, 1,040 ವಿಡಿಯೋ ಕ್ಯಾಸೆಟ್, 3 ಐರನ್ ಲಾಕರ್, 1,93,202 ರೂ. ನಗದು ಸೇರಿದಂತೆ ಹಲವು ವಸ್ತುಗಳು ಜಯಲಲಿತಾ ಅವರಿಂದ ಜಪ್ತಿ ಮಾಡಲಾಗಿತ್ತು.

ಇದನ್ನೂ ಓದಿ: ಜಯಲಲಿತಾಗೆ ಸೇರಿದ ವಸ್ತುಗಳ ವಿಲೇವಾರಿಗೆ ವಿಶೇಷ ಅಭಿಯೋಜಕರನ್ನು ನೇಮಿಸಲು ಸರ್ಕಾರಕ್ಕೆ ಸೂಚಿಸಿದ ನ್ಯಾಯಾಲಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.