ETV Bharat / state

ಮಳೆ ನೀರು ಸೋರಿಕೆ ತಡೆಯಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪ ಬದಲಾವಣೆ: ಗೋವಿಂದ ಕಾರಜೋಳ - DCM Govinda Karajola statement

ಮಳೆ ನೀರು ಸೋರಿಕೆ ತಡೆಯಲು ಸರ್ಕಾರಿ ಕಟ್ಟಡಗಳ ವಿನ್ಯಾಸ ಹಾಗೂ ಛಾವಣಿ ಸ್ವರೂಪವನ್ನು ಬದಲಾವಣೆ ಮಾಡುವಂತೆ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದರು.

DCM Govinda Karajola
ಡಿಸಿಎಂ ಗೋವಿಂದ ಕಾರಜೋಳ
author img

By

Published : Feb 4, 2021, 7:29 PM IST

ಬೆಂಗಳೂರು: ಮಳೆ ನೀರು ಸೋರಿಕೆ ತಡೆಯಲು ಸರ್ಕಾರಿ ಕಟ್ಟಡಗಳ ಛಾವಣಿ ಸ್ವರೂಪವನ್ನು ಬದಲಾಯಿಸಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ವಿಧಾನಸಭೆಯಲ್ಲಿ ಇಂದು ಪ್ರಶ್ನೋತ್ತರ ವೇಳೆ ಶಾಸಕ ಹರತಾಳು ಹಾಲಪ್ಪ ಮಲೆನಾಡಿನ ಭಾಗಗಳಲ್ಲಿ ಮಳೆಗಾಲ ಬಂದರೆ ಕಾಲೇಜುಗಳು, ಆಸ್ಪತ್ರೆಗಳು ಸೇರಿದಂತೆ ಸರ್ಕಾರಿ ಕಟ್ಟಡಗಳು ಸೋರುತ್ತವೆ. ಇದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಕೆ.ಸುಧಾಕರ್ ಅವರಿಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಲೆನಾಡಿನ ಭಾಗಗಳಲ್ಲಿ ಇದು ದೊಡ್ಡ ಸಮಸ್ಯೆಯಾಗಿದೆ. ಮಳೆಗಾಲ ಆರಂಭವಾದರೆ ಸರ್ಕಾರಿ ಕಟ್ಟಡಗಳಲ್ಲಿ ನೀರು ಸೋರಿಕೆಯಾಗುತ್ತದೆ. ಇದಕ್ಕೆ ಪರಿಹಾರ ಕಲ್ಪಿಸಬೇಕೆಂದು ಸದನದಲ್ಲಿದ್ದ ಸಚಿವ ಗೋವಿಂದ ಕಾರಜೋಳ ಅವರಿಗೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಕಾರಜೋಳ, ಇನ್ನು ಮುಂದೆ ಸರ್ಕಾರಿ ಕಟ್ಟಡಗಳ ವಿನ್ಯಾಸ ಹಾಗೂ ಛಾವಣಿ ಸ್ವರೂಪವನ್ನು ಬದಲಾವಣೆ ಮಾಡುವಂತೆ ಇಲಾಖೆ ವತಿಯಿಂದ ಸುತ್ತೋಲೆ ಹೊರಡಿಸಲಾಗುವುದು ಎಂದರು.

ನಂತರ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಸಚಿವ ಸುಧಾಕರ್, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಸ್ನಾತಕೋತ್ತರ ಕೋರ್ಸ್‍ಗಳನ್ನು ಪೂರ್ಣಗೊಳಿಸಿದವರು ಕಡ್ಡಾಯವಾಗಿ ಒಂದು ವರ್ಷ ಸೇವೆ ಸಲ್ಲಿಸಬೇಕೆಂದು ಸೂಚಿಸಲಾಗಿದೆ. ಈಗಾಗಲೇ 280 ಜನ ಸ್ನಾತಕೋತ್ತರ ಪದವೀಧರರನ್ನು ನಿಯೋಜನೆ ಮಾಡಲಾಗಿದೆ ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.