ETV Bharat / state

ಗಂಗಾ ಕಲ್ಯಾಣ ಯೋಜನೆ ಅಕ್ರಮ: ಸಿಐಡಿ ತನಿಖೆಗೆ ಸರ್ಕಾರ ನಿರ್ಧಾರ

ಗಂಗಾ ಕಲ್ಯಾಣ ಯೋಜನೆಯಡಿ ಆಹ್ವಾನಿಸಿರುವ ಟೆಂಡರ್​ಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ಸಿಐಡಿಯಿಂದ ತನಿಖೆ ನಡೆಸಲು ಸರ್ಕಾರ ನಡೆಸಿದೆ.

ganga kalyana scheme
ಗಂಗಾ ಕಲ್ಯಾಣ ಯೋಜನೆ
author img

By

Published : Dec 23, 2022, 1:49 PM IST

ಬೆಂಗಳೂರು: ಗಂಗಾ ಕಲ್ಯಾಣ ಕೊಳವೆ ಬಾವಿ ಯೋಜನೆಯಲ್ಲಿನ ಅಕ್ರಮ ಆರೋಪದ ಬಗ್ಗೆ ಸಿಐಡಿ ತನಿಖೆ ನಡೆಸಲು ಸರ್ಕಾರ ನಿರ್ಧರಿಸಿದೆ. ಸಮಾಜ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮಣಿವಣ್ಣನ್ ಒಳಾಡಳಿತಕ್ಕೆ ಪತ್ರ ಬರೆದು ಸಿಐಡಿ ತನಿಖೆ ನಡೆಸುವಂತೆ ಕೋರಿದ್ದಾರೆ. 2019-20 ಹಾಗೂ 2020-21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಹ್ವಾನಿಸಿರುವ ಟೆಂಡರ್​ಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿರುವ ಬಗ್ಗೆ ಸಿಐಡಿಯಿಂದ ತನಿಖೆ ನಡೆಸುವಂತೆ ಕೋರಲಾಗಿದೆ.

ಏನಿದು ಆರೋಪ?: ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ 2019-20 ಹಾಗೂ 2020-21ನೇ ಸಾಲಿನ ಗಂಗಾ ಕಲ್ಯಾಣ ಯೋಜನೆಯಡಿ ಆಹ್ವಾನಿಸಿರುವ ಟೆಂಡರ್ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿರುವ ಬಿಡ್‌ದಾರರು ಅಕ್ರಮ/ನಕಲಿ ದಾಖಲಾತಿಗಳನ್ನು (Forgery/illegal Documents) ಸಲ್ಲಿಸಿ ನಿಯಮಗಳನ್ನು ಉಲ್ಲಂಘಿಸಿ ಯಶಸ್ವಿ ಬಿಡ್‌ದಾರರಾಗಿ ಆಯ್ಕೆಗೊಂಡಿರುವ ಬಗ್ಗೆ ಆರೋಪ ಕೇಳಿ ಬಂದಿತ್ತು.

ಈ ಯೋಜನೆಯ ಅನುದಾನ ದುರುಪಯೋಗವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸಹ ಈ ಅಕ್ರಮದಲ್ಲಿ ಶಾಮೀಲಾಗಿರುವ ಬಗ್ಗೆ, ಕೂಡಲೇ ಸಮಗ್ರವಾಗಿ ಸಿಐಡಿಯಿಂದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ಆದೇಶಿಸಿದ್ದರು. ಈ ಹಿನ್ನೆಲೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಲಾಗಿದೆ.

ನಿಯಮ ಗಾಳಿಗೆ ತೂರಿ ಟೆಂಡರ್: ಗಂಗಾಕಲ್ಯಾಣ ಯೋಜನೆಯಡಿ 2019-20, 2020-21ರ ಸಾಲಿನಲ್ಲಿ 14,577 ಕೊಳವೆಬಾವಿ ಕೊರೆಸಲು ₹431 ಕೋಟಿ ಮೊತ್ತದ ಟೆಂಡರ್ ಕರೆಯಲಾಗಿದೆ. ಈ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮಗಳನ್ನು ಗಾಳಿಗೆ ತೂರಿ ಗುತ್ತಿಗೆದಾರರಿಗೆ ಅನುಕೂಲವಾಗುವಂತೆ ಅಕ್ರಮ ನಡೆದಿದೆ. ಅರ್ಹರಿಲ್ಲದ ಗುತ್ತಿಗೆದಾರರಿಗೆ ಕೊಳವೆಬಾವಿ ಕೊರೆಸುವ ಗುತ್ತಿಗೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಇದನ್ನೂ ಓದಿ:ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮ ಆರೋಪ: ಗ್ರಾಮಸ್ಥರಿಂದ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.