ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳ ನಿರೂಪಣೆಗೆ ಹೊಸಬರಿಗೆ ಅವಕಾಶ ಕಲ್ಪಿಸಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಮುಂದೆ ಏಕಾಂಗಿ ಹೋರಾಟ ನಡೆಸಿರುವ ಡಾ.ಗಿರಿಜಾ ಅವರು ಬೇಡಿಕೆಗೆ ಸರ್ಕಾರ ಮನ್ನಣೆ ನೀಡದೆ, ಹಳೆ ನಿರೂಪಕರನ್ನೇ ಮುಂದುವರೆಸಿದೆ.
ನಗರದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆದ 75ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಿರೂಪಕರಾಗಿ ಶಂಕರ್ ಪ್ರಕಾಶ್ ಮತ್ತು ಅಪರ್ಣ ಅವರನ್ನೇ ಈ ಬಾರಿಯೂ ಮುಂದುವರಿಸಲಾಗಿದೆ. ಸ್ವಾತಂತ್ರ್ಯ ಕಾರ್ಯಕ್ರಮ ಸೇರಿದಂತೆ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಳೆಯ ನಿರೂಪಕರು, ಗಾಯಕರಿಗೆ ಅವಕಾಶ ನೀಡುತ್ತಿದ್ದಾರೆ. ಹೀಗಾಗಿ, ಉದಯೋನ್ಮುಖ ಹಾಗೂ ಹೊಸ ಪ್ರತಿಭೆಗಳಿಗೆ ಅವಕಾಶ ಸಿಗದಂತಾಗಿದೆ.
ಹಾಗಾಗಿ, ಇನ್ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಳೆ ನಿರೂಪಕರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಬೇಕು ಎಂದು ಡಾ.ಗಿರಿಜಾ ಎಂಬುವರು ಸಿಎಂ ನಿವಾಸದ ಮುಂದೆ ಇತ್ತೀಚೆಗೆ ಪ್ರತಿಭಟನೆ ನಡೆಸಿ, ಮನವಿ ಸಲ್ಲಿಸಿದ್ದರು.