ETV Bharat / state

'ಭೂಸುಧಾರಣಾ ತಿದ್ದುಪಡಿ ಕಾಯ್ದೆ ಸುಗ್ರೀವಾಜ್ಞೆ ವಾಪಸ್​ ಪಡೆಯಲ್ಲ' - bengalore news

ಪ್ರಗತಿಗೆ ಪೂರಕವಾದ ಭೂಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಸದನದಲ್ಲಿ ಕಾಂಗ್ರೆಸ್ ಸದಸ್ಯರೇ ಬೆಂಬಲಿಸಿದ್ದರು. ಆದ್ರೀಗ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಈ ಕಾಯ್ದೆಯ ಸುಗ್ರೀವಾಜ್ಞೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ
ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ
author img

By

Published : Jul 16, 2020, 8:35 PM IST

ಬೆಂಗಳೂರು: ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಹೊರಡಿಸಲಾಗಿರುವ ಸುಗ್ರೀವಾಜ್ಞೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಖಡಾಖಂಡಿತವಾಗಿ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಗತಿಗೆ ಪೂರಕವಾದ ಈ ತಿದ್ದುಪಡಿ ಕಾಯ್ದೆಯನ್ನು ಹಿಂದೆ ಸದನದಲ್ಲಿ ಕಾಂಗ್ರೆಸ್ ಸದಸ್ಯರೇ ಬೆಂಬಲಿಸಿದ್ದರು. ಈಗ ನೋಡಿದರೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕೆ ಮಾಡುತ್ತಿರುವುದು ಅಚ್ಚರಿ ತಂದಿದೆ ಎಂದರು.

ಇಡೀ ದೇಶದಲ್ಲೇ ಒಂದು ಕಾಯ್ದೆ ಇದ್ದರೆ, ನಮ್ಮ ರಾಜ್ಯದಲ್ಲೇ ಒಂದು ಕಾಯ್ದೆ ಇತ್ತು. ಅದರಿಂದ ರೈತರಿಗೆ, ಜನರಿಗೆ ಅನುಕೂಲವಾಗಿದ್ದು ಏನೂ ಇಲ್ಲ. ಈವರೆಗೂ ಇದರ ದುರ್ಬಳಕೆ ಆಗಿ ವಿಪರೀತ ಭ್ರಷ್ಟಾಚಾರಕ್ಕೆ ಕಾರಣವಾಗಿತ್ತು. ಇದರಿಂದಾಗಿಯೇ ರಾಜ್ಯಕ್ಕೆ ಸಾಕಷ್ಟು ಹಾನಿಯಾಗಿದೆ. ವಾಸ್ತವದಲ್ಲಿ ಈ ತಿದ್ದುಪಡಿ ಕಾಯ್ದೆ ಪ್ರಗತಿಗೆ ಪೂರಕವಾದ ಕ್ರಮವಾಗಿದೆ ಎಂದು ಡಿಸಿಎಂ ಕಾಯ್ದೆಯನ್ನು ಸಮರ್ಥಿಸಿಕೊಂಡರು.

ವಿಧಾನಸಭೆಯಲ್ಲಿ ಚರ್ಚೆ ನಡೆಯಬೇಕಾದರೆ, ಇದೊಂದು ಅತ್ಯುತ್ತಮ ಕಾಯ್ದೆ. ಇದು ಜಾರಿಗೆ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಹೇಳಿದ್ದರು. ಈ ಬಗ್ಗೆ ಟೀಕೆ ಮಾಡುತ್ತಿರುವವರು ಎದೆ ಮುಟ್ಟಿಕೊಂಡು ಆತ್ಮಾವಲೋಕನ ಮಾಡಿಕೊಳ್ಳಲಿ. ಇದು ಖಂಡಿತಾ ರೈತ ವಿರೋಧಿಯಲ್ಲ. ಕೆಲವರು ತಮ್ಮ ಏನೇನೋ ರಾಜಕೀಯ ಹುನ್ನಾರಗಳ ಕಾರಣಕ್ಕೆ ಭಿನ್ನಸ್ವರ ಹಾಡುತ್ತಿದ್ದಾರೆ. ಜನರನ್ನು ಹಾಳು ಮಾಡುವುದೇ ಕೆಲವರ ನಿತ್ಯ ಕೆಲಸವಾಗಿದೆ ಎಂದು ಡಿಸಿಎಂ ಹರಿಹಾಯ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.