ETV Bharat / state

ಮಂಜೂರಾದ 4 ಗುಂಟೆ ಜಮೀನಿನಲ್ಲಿ ಭೂ ಪರಿವರ್ತಿಸಲು ಡಿಸಿಗೆ ಅಧಿಕಾರ: ಸರ್ಕಾರ ಆದೇಶ

ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಧಿನಿಯಮ, 1978 ರನ್ವಯ ಅನುಮತಿ ಇಲ್ಲದೆ ಜಮೀನು ಪರಭಾರೆ ಮಾಡುವಂತಿರಲಿಲ್ಲ. ಆದ್ರೆ ಇದೀಗ ಸರ್ಕಾರ ಹೊಸ ಆದೇಶ ಹೊರಡಿಸಿ, 10 ಸೆಂಟ್ಸ್ / 4 ಗುಂಟೆ ಜಾಗವನ್ನು ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಡಿಸಿಗೆ ಅಧಿಕಾರ ನೀಡಿದೆ.

ಸರ್ಕಾರ ಆದೇಶ
ಸರ್ಕಾರ ಆದೇಶ
author img

By

Published : Nov 6, 2022, 7:08 AM IST

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ 10 ಸೆಂಟ್ಸ್ / 4 ಗುಂಟೆ ಜಮೀನಿನಲ್ಲಿ ವಾಸದ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಜಿಲ್ಲಾಧಿಕಾರಿಯವರಿಗೆ ಅಧಿಕಾರ ನೀಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರದಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ಮಂಜೂರಾದ ಜಮೀನುಗಳನ್ನು ಸರ್ಕಾರದ ಪೂರ್ವಾನುಮತಿ ಇಲ್ಲದೇ ಪರಭಾರೆ ಮಾಡಲು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಕೆಲವು ಭೂಮಿಗಳ ಪರಭಾರೆ ನಿಷೇಧ) ಅಧಿನಿಯಮ, 1978 ರನ್ವಯ ನಿರ್ಬಂಧ ವಿಧಿಸಿತ್ತು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರು ಭೂ ರಹಿತರಾಗುವುದನ್ನು ತಪ್ಪಿಸುವ ಧೇಯೋದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೆ ತರಲಾಗಿತ್ತು.

ಅಂತೆಯೇ ಈ ಕಾಯ್ದೆಯ ವ್ಯಾಪ್ತಿಗೆ ಒಳಪಡುವ ಜಮೀನುಗಳನ್ನು ಭೂಪರಿವರ್ತನೆ ಮಾಡುವ ಮೊದಲು ಸರ್ಕಾರದಿಂದ ಕಡ್ಡಾಯವಾಗಿ ಪೂರ್ವಾನುಮತಿ ಪಡೆದ ನಂತರವಷ್ಟೇ ಭೂ ಪರಿವರ್ತನೆ ಮಾಡತಕ್ಕದ್ದು ಎಂದು ಸೂಚಿಸಲಾಗಿತ್ತು.

ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರು, ಕಂದಾಯ ಸಚಿವರಿಗೆ ಸಲ್ಲಿಸಿರುವ ಮನವಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನುಗಳಲ್ಲಿ 10 ಸೆಂಟ್ಸ್ ಜಾಗವನ್ನು ಸ್ವಂತ ವಾಸದ (Residential Purpose) ಹಾಗೂ ವಾಣಿಜ್ಯ ಉದ್ದೇಶಕ್ಕೆ ಭೂ ಪರಿವರ್ತನೆ ಮಾಡುವಾಗ, ಭೂ ಪರಿವರ್ತನೆಯ ಅಧಿಕಾರವನ್ನು ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರ್‌ರವರಿಗೆ ನೀಡುವಲ್ಲಿ ಸೂಕ್ತ ಕ್ರಮವಹಿಸುವಂತೆ ಕೋರಿದ್ದರು.

ಈ ಹಿನ್ನೆಲೆ ಇನ್ನು ಮುಂದೆ ಪಿಟಿಸಿಎಲ್ ಕಾಯ್ದೆಯ ವ್ಯಾಪ್ತಿಗೆ ಒಳಪಡುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾದ ಜಮೀನಿನಲ್ಲಿ 10 ಸೆಂಟ್ಸ್ / 4 ಗುಂಟೆ ಜಮೀನಿನಲ್ಲಿ ಸ್ವಂತ ವಾಸದ (Residential Purpose) ಉದ್ದೇಶಕ್ಕೆ ಭೂ ಪರಿವರ್ತನೆ ಮಾಡಲು ಕೋರಿ ಅರ್ಜಿ ಸಲ್ಲಿಸಿದಲ್ಲಿ, ಅಂತಹ ಅರ್ಜಿಗಳನ್ನು, ನಿಯಮಾನುಸಾರ ಪರಿಶೀಲಿಸಿ, ಜಿಲ್ಲಾಧಿಕಾರಿಯರ ಹಂತದಲ್ಲಿಯೇ ಭೂ ಪರಿವರ್ತನೆ ಆದೇಶ ಹೊರಡಿಸಲು ಕ್ರಮವಹಿಸಬೇಕು ಎಂದು ಸರ್ಕಾರ ಸೂಚಿಸಿದೆ.

ಹಾಗೆ ಭೂ ಪರಿವರ್ತನೆಯಾದ ಜಮೀನನ್ನು ಯಾವುದೇ ಕಾರಣಕ್ಕೂ ಮಾರಾಟ ಮಾಡತಕ್ಕದ್ದಲ್ಲ ಎಂಬ ಷರತ್ತನ್ನು ವಿಧಿಸಲು ಸಹ ಸೂಚಿಸಿದೆ. ಆದರೆ ಜಮೀನನ್ನು ಮಾರಾಟ ಮಾಡಲು ಸರ್ಕಾರದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯತಕ್ಕದ್ದು. ಇದರಲ್ಲಿ ಲೋಪವೇನಾದರೂ ಕಂಡುಬಂದಲ್ಲಿ, ಸಂಬಂಧಪಟ್ಟ ಜಿಲ್ಲಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ಸರ್ಕಾರ ತಿಳಿಸಿದೆ.

(ಓದಿ: ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ: ವಯೋಮಿತಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.