ಬೆಂಗಳೂರು: ಉಕ್ರೇನ್‌ನಿಂದ ರಾಜ್ಯಕ್ಕೆ ಆಗಮಿಸಿರುವ ವಿದ್ಯಾರ್ಥಿಗಳಿಗೆ ವಿಶೇಷ ಕೋಟಾದಡಿ ಮುಂದಿನ ಶಿಕ್ಷಣಕ್ಕೆ ಸರ್ಕಾರ ಅವಕಾಶ ಮಾಡಿ ಕೊಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಮಾಜಿ ಸಚಿವ ರಾಮಲಿಂಗರೆಡ್ಡಿ ಒತ್ತಾಯಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಉಕ್ರೇನ್‌ನಲ್ಲಿ ಕಡಿಮೆ ಮೊತ್ತಕ್ಕೆ ವಿದ್ಯಾಭ್ಯಾಸ ಸಿಗುತ್ತದೆ ಎಂಬ ಕಾರಣಕ್ಕೆ ಅಲ್ಲಿ ಹೋಗಿ ವ್ಯಾಸಂಗ ಮಾಡಿರುವ ವಿದ್ಯಾರ್ಥಿಗಳು ತಮ್ಮ ಮುಂದಿನ ಶಿಕ್ಷಣವನ್ನು ಬಹುಶಃ ಇಲ್ಲಿ ಮುಂದುವರಿಸಬೇಕಾಗಿದೆ ಬರಲಿದೆ. ಆದರೆ ಇಲ್ಲಿನ ದುಬಾರಿ ಶಿಕ್ಷಣ ಮೊತ್ತ ಭರಿಸುವ ಶಕ್ತಿ ಅವರಿಗೆ ಇರುವುದಿಲ್ಲ. ಇದರಿಂದ ಇಂತಹ ವಿದ್ಯಾರ್ಥಿಗಳಿಗೆ ವಿಶೇಷ ಕೋಟಾದಡಿ ಅವಕಾಶ ಕಲ್ಪಿಸುವುದು ಅನುಕೂಲಕರ ಎಂದರು.
ನಮ್ಮ ದೇಶದಲ್ಲಿ ವೈದ್ಯಕೀಯ ಶಿಕ್ಷಣ ದುಬಾರಿಯಾಗಿದೆ. ಹಾಗಾಗಿ ಬಹಳ ಜನ ಉಕ್ರೇನ್, ಬೇರೆ ಬೇರೆ ಕಡೆ ಹೋಗ್ತಾರೆ. ಉಕ್ರೇನ್‌ನಲ್ಲಿ 20 ಸಾವಿರಕ್ಕೂ ಅಧಿಕ ಮಕ್ಕಳು ಶಿಕ್ಷಣ ಪಡೆಯುತ್ತಿದ್ದರು. ಯುದ್ಧ ಯಾವಾಗ ಮುಗಿಯುತ್ತೋ ಗೊತ್ತಿಲ್ಲ. ಅಲ್ಲಿಂದ ಬಂದ ವಿದ್ಯಾರ್ಥಿಗಳ ಪರಿಸ್ಥಿತಿ ಹೇಗೆ, ಅಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಶಿಕ್ಷಣದ ಭವಿಷ್ಯ ಏನು ಎಂಬುದರ ಬಗ್ಗೆ ಚಿಂತನೆ ಮಾಡುವುದು ಅಗತ್ಯವಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿಶೇಷ ಕೋಟಾದಲ್ಲಿ ಮಕ್ಕಳಿಗೆ ಶಿಕ್ಷಣ ಕೊಡಬೇಕು ಎಂದು ಒತ್ತಾಯಿಸಿದರು
ಇದನ್ನೂ ಓದಿ: 'ಉಕ್ರೇನ್‌ನಲ್ಲಿ ನಮ್ಮ ನೆರವಿಗೆ ಬಂದಿದ್ದು ತ್ರಿವರ್ಣಧ್ವಜ; ಭಾರತೀಯಳೆನ್ನಲು ಹೆಮ್ಮೆ ಅನ್ನಿಸುತ್ತಿದೆ'