ಬೆಂಗಳೂರು: ನಿನ್ನೆ ತಡರಾತ್ರಿ ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಉಂಟಾಗಿ ಸಾಕಷ್ಟು ಆತಂಕಕ್ಕೆ ಕಾರಣವಾಗಿತ್ತು. ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪಾಡು ಹೇಳತೀರದಾಗಿತ್ತು. ಇದೇ ವೇಳೆ, ಸಕಾಲಕ್ಕೆ ಸಹಕಾರ ಕೊಟ್ಟ ಸರ್ಕಾರಿ ಆಸ್ಪತ್ರೆ, ನೂರಾರು ರೋಗಿಗಳ ಪ್ರಾಣ ಉಳಿಸಿವೆ.
ತನ್ನಲ್ಲಿದ್ದ ಆಕ್ಸಿಜನ್ ಸ್ಟಾಕ್ ನೀಡಿ ಸಕಾಲಕ್ಕೆ ಸಹಯೋಗ ನೀಡಿದ ವಿಕ್ಟೋರಿಯಾ ಆಸ್ಪತ್ರೆಯು ಸಂಭವಿಸಬೇಕಿದ್ದ ಅತಿ ದೊಡ್ಡ ಅವಘಡವನ್ನು ತಪ್ಪಿಸಿದೆ. ಈ ಮೂಲಕ ಕೊನೆ ಕ್ಷಣದಲ್ಲಿ ಸರ್ಕಾರಿ ಆಸ್ಪತ್ರೆಗಳು ಸಂಜೀವಿನಿ ಆಗಿವೆ. ಸ್ವಲ್ಪ ಯಾಮಾರಿದ್ರೂ ಸಾಲು ಸಾಲಾಗಿ ರೋಗಿಗಳು ಸಾವಿಗೀಡಾಗುತ್ತಿದ್ದರು. ಇದಲ್ಲದೇ, ಗಂಭೀರ ಸಮಸ್ಯೆ ಇರುವ ರೋಗಿಗಳಿಗೆ ಆ್ಯಂಬುಲೆನ್ಸ್ ಆಸರೆಯಾದವು. ಆ್ಯಂಬುಲೆನ್ಸ್ನಲ್ಲಿಯೇ ಕೆಲ ರೋಗಿಗಳಿಗೆ ಚಿಕಿತ್ಸೆ ನೀಡಲಾಯಿತು. ಈ ಹಿನ್ನೆಲೆ ಸರ್ಕಾರಕ್ಕೆ ಹಾಗೂ ಸರ್ಕಾರಿ ಆಸ್ಪತ್ರೆಗಳಿಗೆ ಕಿಮ್ಸ್ ಆಡಳಿತ ಮಂಡಳಿ ಧನ್ಯವಾದ ತಿಳಿಸಿ ಪತ್ರ ಬರೆದಿದೆ.
ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ವಿಕ್ಟೋರಿಯಾ ಆಸ್ಪತ್ರೆಯಿಂದ ಮಧ್ಯರಾತ್ರಿಯೇ ಗ್ಯಾಸ್ ರವಾನೆ ಮಾಡಲಾಗಿದೆ. ಇನ್ನುಳಿದಂತೆ ಹಲವು ರೋಗಿಗಳನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಇತ್ತ ಆಕ್ಸಿಜನ್ ಸಮಸ್ಯೆ ಆಗಿದೆ ಎಂದು ತಿಳಿಯುತ್ತಲೇ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು ಅಲರ್ಟ್ ಆದರು. ಪ್ರತಿಯೊಬ್ಬ ರೋಗಿಗೂ ಸೂಕ್ತ ಚಿಕಿತ್ಸೆ ದೊರಕಿಸುವುದು ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಿಗೆ ಎಲ್ಲ ರೀತಿಯ ಸಹಕಾರ ಮತ್ತು ನೆರವು ನೀಡಲು ಬದ್ಧವಾಗಿದೆ. ಕೊರೊನಾ ಚಿಕಿತ್ಸೆಗೆ ಮೂಲ ಸೌಕರ್ಯ ಒದಗಿಸುವುದು ದೊಡ್ಡ ಸವಾಲು ನಿಜ. ಆದರೆ, ಅದನ್ನು ಹಿಮ್ಮೆಟ್ಟಿಸುವ ನಮ್ಮ ಸಂಕಲ್ಪ ಅದಕ್ಕಿಂತ ಬಲವಾಗಿದೆ ಎಂದು ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಇದನ್ನೂ ಓದಿ... ಕಿಮ್ಸ್ನಲ್ಲಿ ಆಕ್ಸಿಜನ್ ಕೊರತೆ: ಕೊರೊನಾ ಸೋಂಕಿತರ ಪರದಾಟ
ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಇರುವುದು ನನ್ನ ಗಮನಕ್ಕೆ ಬಂದ ಕೂಡಲೇ 40ಕ್ಕೂ ಹೆಚ್ಚು ರೋಗಿಗಳನ್ನು ವಿಕ್ಟೊರಿಯಾ, ಬೌರಿಂಗ್ ಹಾಗೂ ರಾಜೀವ್ ಗಾಂಧಿ ಆಸ್ಪತ್ರೆಗೆ ರವಾನಿಸಲು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಗಂಭೀರ ಸ್ಥಿತಿಯಲ್ಲಿರುವ ರೋಗಿಗಳ ಚಿಕಿತ್ಸೆಗೆ ಆಕ್ಸಿಜನ್ ಸಿಲಿಂಡರ್ಗಳನ್ನು ಕಿಮ್ಸ್ ಗೆ ಕಳುಹಿಸಲಾಗಿದೆ ಎಂದು ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
-
ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿದಲಾಗಿದೆ.
— Dr Sudhakar K (@mla_sudhakar) August 17, 2020 " class="align-text-top noRightClick twitterSection" data="
">ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿದಲಾಗಿದೆ.
— Dr Sudhakar K (@mla_sudhakar) August 17, 2020ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ ಗಳನ್ನು ಸಿದ್ಧ ಪಡಿದಲಾಗಿದೆ.
— Dr Sudhakar K (@mla_sudhakar) August 17, 2020
ಕಿಮ್ಸ್ ಆಸ್ಪತೆಯಿಂದ 14 ರೋಗಿಗಳನ್ನು ವಿಕ್ಟೊರಿಯಾ ಆಸ್ಪತ್ರೆಗೆ ಮತ್ತು 15 ರೋಗಿಗಳನ್ನು ಬೌರಿಂಗ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಮೂಲಕ ಸುರಕ್ಷಿತವಾಗಿ ರವಾನಿಸಲಾಗಿದೆ. ತುರ್ತು ಪರಿಸ್ಥಿತಿಗಾಗಿ ರಾಜೀವ್ ಗಾಂಧಿ ಆಸ್ಪತ್ರೆಯಲ್ಲಿ 40 ಆಕ್ಸಿಜನ್ ಬೆಡ್ಗಳನ್ನು ಸಿದ್ಧಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ:
ಇತ್ತ ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸಮಸ್ಯೆಯಿಂದ ಕೋವಿಡ್ ಸೋಂಕಿತರೂ ಸೇರಿದಂತೆ ಕೆಲವು ರೋಗಿಗಳು ಪರದಾಡುತ್ತಿರುವ ಸುದ್ದಿ ಗಮನಕ್ಕೆ ಬಂದಿದೆ. ಈ ಸಂಬಂಧ, ಈಗಾಗಲೇ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ರೋಗಿಗಳನ್ನು ಆಕ್ಸಿಜನ್ ಲಭ್ಯವಿರುವ ಆಸ್ಪತ್ರೆಗಳಿಗೆ ರವಾನಿಸಲು ಸೂಚಿಸಲಾಗಿದೆ. ಕೆಲವರನ್ನು ಈಗಾಗಲೇ ವಿಕ್ಟೋರಿಯಾ, ಬೌರಿಂಗ್ ಮತ್ತು ರಾಜೀವ್ ಗಾಂಧಿ ಆಸ್ಪತ್ರೆಗಳಿಗೆ ರವಾನಿಸಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಆಮ್ಲಜನಕ ಕೊರತೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿರುವ ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.