ETV Bharat / state

ಔರಾದ್ಕರ್ ವರದಿ ಜಾರಿಗೆ ಸರ್ಕಾರ ಬದ್ಧ: ಗೃಹ ಸಚಿವ ಎಂ.ಬಿ.ಪಾಟೀಲ್

ಔರಾದ್ಕರ್ ಸಮಿತಿ ವರದಿ ಜಾರಿಗೆ ಸರ್ಕಾರ ಬದ್ಧವಾಗಿರುವುದಾಗಿ ಗೃಹ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ

ಗೃಹ ಸಚಿವ ಎಂ.ಬಿ.ಪಾಟೀಲ್‌
author img

By

Published : Mar 5, 2019, 11:23 PM IST

ಬೆಂಗಳೂರು: ಪೊಲೀಸರ ವೇತನ ಪರಿಷ್ಕರಣೆ ಸಂಬಂಧದ ಔರಾದ್ಕರ್ ಸಮಿತಿ ವರದಿ ಜಾರಿಗೆ ನಮ್ಮ ‌ಸರ್ಕಾರ ಮತ್ತು ಸಿಎಂ ಕುಮಾರಸ್ವಾಮಿ ಅವರು ಬದ್ಧರಾಗಿದ್ದೇವೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್‌ ಸ್ಪಷ್ಟಪಡಿಸಿದರು.

ಗೃಹ ಸಚಿವ ಎಂ.ಬಿ.ಪಾಟೀಲ್‌

ವಿಧಾನಸೌಧದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಸಿಎಂ ಜತೆ ಚರ್ಚೆ ನಡೆಸಲಾಗಿದೆ. ಪೊಲೀಸ್ ವಾರ್ಷಿಕ ಸಭೆಯಲ್ಲೇ ಸಮಯ ಕೊಟ್ಟರೆ ವರದಿಯನ್ನು ಮಂಡನೆ‌ ಮಾಡುವುದಾಗಿ ಸಿಎಂ ಗೆ ಹೇಳಿದ್ದೇವೆ. ಅವರು ಒಂದು ದಿನ ಸಮಯಾವಕಾಶ ಕೊಡುತ್ತೇನೆ ಎಂದೂ ಭರವಸೆ ನೀಡಿದ್ದಾರೆ ಎಂದು ವಿವರಿಸಿದರು.

undefined

ನಾವು ಔರಾದ್ಕರ್ ವರದಿಯನ್ನು ಜಾರಿಗೆ ತರಲು ಬದ್ಧರಾಗಿದ್ದೇವೆ. ನಮ್ಮ‌ ಪೋಲೀಸ್ ಸಿಬ್ಬಂದಿಗಳಿಗೆ ಇತರೆ ಇಲಾಖೆಯ ಸಿಬ್ಬಂದಿಗಿಂತ ಕಡಿಮೆ ವೇತನ‌ ಇದೆ. ಇತರ ಇಲಾಖೆಯ‌ ಸಿಬ್ಬಂದಿಗಳಂತೆ‌ ಪೊಲೀಸ್ ಸಿಬ್ಬಂದಿಗೂ ಸಮನಾಂತರ ವೇತನ ನೀಡುವ ವರದಿ ಇದಾಗಿದೆ.‌ ಈ ಅನ್ಯಾಯ ಸರಿಪಡಿಸುವ ಕೆಲಸ ಮಾಡಲಿದ್ದೇವೆ ಎಂದು ತಿಳಿಸಿದರು.

ನೀತಿ ಸಂಹಿತೆ ಜಾರಿಯಾಗುವ ಮುನ್ನವೇ ಈ ಸಮಸ್ಯೆ ಪರಿಹರಿಸಲು ಯತ್ನಿಸಲಾಗುವುದು. ಸಿಎಂ ಗಮನಕ್ಕೆ ಮೂರು‌ ನಾಲ್ಕು ಬಾರಿ ಈ ವಿಚಾರವನ್ನು ತಂದಿದ್ದೇವೆ. ಸಿಎಂ ಈ ಬಗ್ಗೆ ಸಹಮತ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.