ETV Bharat / state

ತನಿಖೆ ಪ್ರಗತಿಯಲ್ಲಿರುವಾಗ ಮಾಹಿತಿ ಸೋರಿಕೆ ಮಾಡಿದರೆ ತನಿಖಾಧಿಕಾರಿ ವಿರುದ್ಧ ಶಿಸ್ತುಕ್ರಮ: ಸುತ್ತೋಲೆ ಹೊರಡಿಸಿದ ಸರ್ಕಾರ

ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಆರೋಪಿಗಳ ಭಾವಚಿತ್ರ, ವೈಯಕ್ತಿಕ ಮಾಹಿತಿ ಸೇರಿದಂತೆ ಇನ್ನಿತರ ಮಾಹಿತಿ ಸೋರಿಕೆ ಮಾಡುವುದು ಕಂಡು ಬಂದರೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸುಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೊಯಲ್ ತಿಳಿಸಿದ್ದಾರೆ.

vidhana soudha
ವಿಧಾನಸೌಧ
author img

By

Published : Aug 12, 2021, 10:07 PM IST

ಬೆಂಗಳೂರು: ತನಿಖೆ ಪ್ರಗತಿಯಲ್ಲಿರುವಾಗಲೇ ಆರೋಪಿಗಳು ಹಾಗೂ ನೊಂದವರ ವಿವರಗಳ ಬಗ್ಗೆ ಮಾಧ್ಯಮಗಳಿಗೆ ಸೋರಿಕೆ ಮಾಡಬಾರದು ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ತನಿಖೆ ಪೂರ್ಣಗೊಳ್ಳುವವವರೆಗೆ ಆರೋಪಿತರ ಹಾಗೂ ನೊಂದವರ ಬಗ್ಗೆ ಯಾವುದೇ ಮಾಹಿತಿಯನ್ನು ಮಾಧ್ಯಮಗಳಿಗೆ ನೀಡಕೂಡದು. ಪ್ರಕರಣ ತನಿಖಾ ಹಂತದಲ್ಲಿರುವಾಗಲೇ ಆರೋಪಿಗಳ ಭಾವಚಿತ್ರ, ವೈಯಕ್ತಿಕ ಮಾಹಿತಿ ಸೇರಿದಂತೆ ಇನ್ನಿತರ ಮಾಹಿತಿ ಸೋರಿಕೆ ಮಾಡುವುದು ಕಂಡು ಬಂದರೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಶಿಸುಕ್ರಮ ಜರುಗಿಸಲಾಗುವುದು ಎಂದು ಸುತ್ತೋಲೆಯಲ್ಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ತಿಳಿಸಿದ್ದಾರೆ.

ಅಪರಾಧ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವ ಪೊಲೀಸರು ತನಿಖೆ ಮುಗಿದು ಅಂತಿಮ ವರದಿ ನ್ಯಾಯಾಲಯಕ್ಕೆ ಸಲ್ಲಿಸುವವರೆಗೂ ಆರೋಪಿಗಳ ಭಾವಚಿತ್ರ, ವಿಡಿಯೋ ಹಾಗೂ ಸಂಪೂರ್ಣ ಮಾಹಿತಿಯನ್ನು ಬಹಿರಂಗಪಡಿಸುವಂತಿಲ್ಲ. ಈ ಬಗ್ಗೆ ವ್ಯಕ್ತಿಯೊಬ್ಬರು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಈ ಬಗ್ಗೆ ಮಾರ್ಗಸೂಚಿ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿತ್ತು. ಇದರಂತೆ ಗೃಹ ಇಲಾಖೆಯ ಹೊಸ ಆದೇಶ ಹೊರಡಿಸಿದೆ.

ಆದೇಶದಲ್ಲಿ ಏನಿದೆ ?

1) ತನಿಖೆ ಪ್ರಗತಿಯಲ್ಲಿರುವಾಗಲೇ ಆರೋಪಿಗಳ ಬಗ್ಗೆ ಆತನ ವೈಯಕ್ತಿಕ ಮಾಹಿತಿಗಳ ಬಗ್ಗೆ ಬಹಿರಂಗಪಡಿಸಕೂಡದು. ಪ್ರಕರಣದಲ್ಲಿ ಆತನ ಪಾತ್ರದ ಬಗ್ಗೆ ಮಾಧ್ಯಮಗಳಲ್ಲಿ ಸೋರಿಕೆ ಮಾಡಕೂಡದು.
2) ಪ್ರಕರಣ ದಾಖಲಿಸಿಕೊಂಡ ಬಳಿಕ ಆರಂಭದಿಂದ ಅಂತ್ಯದವರೆಗೂ ತನಿಖೆ ಮುಗಿದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸುವವರೆಗೆ ದೂರುದಾರರ ಬಗ್ಗೆ ಆರೋಪಿಗಳ ಬಗ್ಗೆ ಮಾಹಿತಿ ಮಾಧ್ಯಮಗಳ ಮುಂದೆ ಬಹಿರಂಗಪಡಿಸುವಂತಿಲ್ಲ.
3) ಮಾಧ್ಯಮಗಳಿಗೆ ಮಾಹಿತಿ ಹಂಚಿಕೆ ಸೋರಿಕೆ ವಿಷಯದಲ್ಲಿ ತನಿಖಾಧಿಕಾರಿಗಳಿಂದ ಲೋಪದೋಷ ಎಸಗುವುದು, ಮಾಹಿತಿ ನೀಡುವುದು ಕಂಡು ಬಂದರೆ ಶಿಸ್ತು ಕ್ರಮದ ಜೊತೆಗೆ ಕ್ರಿಮಿನಲ್ ಮೊಕದ್ದಮೆಗೆ ಶಿಫಾರಸು ಮಾಡಲಾಗುವುದು.
4) ಸುಪ್ರೀಂಕೋರ್ಟ್ ನಿರ್ದೇಶನದಂತೆ ಪ್ರಕರಣ ಕುರಿತಂತೆ ಎಫ್ಐಆರ್ ದಾಖಲಾಗಿರುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಬಹುದಾಗಿದೆ.

ಓದಿ: ಏನ್ರಿ ಮಾಡ್ತಿರಾ.. ಇಂತಹ ಸಣ್ಣ ವಿಷಯ ಹೇಳಬೇಕಾ? ಕಾಮನ್​ ಸೆನ್ಸ್​​ ಇಲ್ವಾ... ಅಧಿಕಾರಿಗಳಿಗೆ ಸಿಎಂ ತರಾಟೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.