ETV Bharat / state

2023-24 ಸಾಲಿನ ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ

ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖೆ ಸಚಿವರಿಗೆ ಅಧಿಕಾರವನ್ನು ನೀಡಲಾಗಿದೆ.

ರಾಜ್ಯ ಸರ್ಕಾರ
ರಾಜ್ಯ ಸರ್ಕಾರ
author img

By

Published : May 30, 2023, 8:11 PM IST

ಬೆಂಗಳೂರು : 2023-24 ಸಾಲಿನಲ್ಲಿ ಸಾರ್ವತ್ರಿಕ ವರ್ಗಾವಣೆಗೆ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. 2023-24ನೇ ಸಾಲಿಗೆ ಗ್ರೂಪ್ ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ವರ್ಗಾವಣೆ ಮಾರ್ಗಸೂಚಿ ಹೊರಡಿಸಲಾಗಿದೆ.

ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ಕೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಈ ಮಾರ್ಗಸೂಚಿಗಳ ಪುಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ. ಒಂದು ಜೇಷ್ಟತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇ.6ರನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ನೀಡಲಾಗಿದೆ.

ಜೂ.1 ರಿಂದ ಜೂ.15 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಸಾರ್ವತ್ರಿಕ ವರ್ಗಾವಣೆ ಮಾಡಲಾಗುತ್ತಿದೆ. ವರ್ಗಾವಣೆಗೆ ಕುರಿತು ಕೂಡ ಆಯಾಯ ಇಲಾಖಾ ಸಚಿವರುಗಳಿಗೆ ಅಧಿಕಾರ ನೀಡಲಾಗಿದೆ.

ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಳ : ರಾಜ್ಯ ಸರಕಾರಿ ನೌಕರರಿಗೆ ಶೇಕಡಾ ನಾಲ್ಕರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿ ರಾಜ್ಯ ಸರಕಾರ ಆದೇಶ ಮಾಡಿದೆ. ಮೂಲ ವೇತನದ ಡಿಎ ಯನ್ನು ಶೇಕಡ 31 ರಿಂದ 35 ಕ್ಕೆ ಹೆಚ್ಚಳ ಮಾಡಿ ಹಣಕಾಸು ಇಲಾಖೆ ಇಂದೇ ಆದೇಶ ಹೊರಡಿಸಿದ್ದು, ಹೊಸದಾಗಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್​ ಸರ್ಕಾರ ರಾಜ್ಯದ ಸರ್ಕಾರಿ ನೌಕರರು ಹಲವು ದಿನಗಳ ಬೇಡಿಕೆಯನ್ನು ಈಡೇರಿಸಿದ್ದು, ಇದೀಗ 2023 ಜನವರಿ 1 ರಿಂದ ಜಾರಿಗೆ ಬರುವಂತೆ ಸರ್ಕಾರಿ ನೌಕರರ ತುಟ್ಟಿಭತ್ಯೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಸರ್ಕಾರ ರಾಜ್ಯದ ಸರಕಾರಿ ನೌಕರರಿಗೆ ನೀಡಿರುವ ಮೊದಲ ಕೊಡುಗೆ ಇದಾಗಿದೆ. ಜನವರಿ 1 ನೇ ತಾರೀಖಿನಿಂದ ಅನ್ವಯವಾಗುವಂತೆ ಎಲ್ಲಾ ರಾಜ್ಯ ಸರಕಾರಿ ನೌಕರರು ಮತ್ತು ನಿವೃತ್ತಿ ಸರಕಾರಿ ನೌಕರರ ತುಟ್ಟಿ ಭತ್ಯೆಯನ್ನು ಶೇ. 4 ರಷ್ಟು ಪರಿಷ್ಕರಣೆಯಾಗಿ ಜಾರಿಗೆ ಬರಲಿದೆ. ಸರಕಾರಿ ನೌಕರರ ತುಟ್ಟಿ ಭತ್ಯೆ ಏರಿಕೆ ಮಾಡಿರುವ ಬಗ್ಗೆ ಹಣಕಾಸು ಇಲಾಖೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಟ್ವೀಟ್ ನಲ್ಲಿ ಸರಕಾರದ ಈ ಆದೇಶವನ್ನು ಹಂಚಿಕೊಂಡಿದ್ದಾರೆ.

ಪೊಲೀಸ್​ ಇಲಾಖೆಯಲ್ಲಿ ಮಹತ್ವದ ಬದಲಾವಣೆ : ನೂತನವಾಗಿ ಕಾಂಗ್ರೆಸ್​ ಪಕ್ಷ ರಾಜ್ಯದ ಅಧಿಕಾರ ಚುಕ್ಕಣಿ ಹಿಡಿದ ಮೇಲೆ ರಾಜ್ಯ ಸರ್ಕಾರ ಆಡಳಿತಕ್ಕೆ ಚುರುಕು ಮುಟ್ಟಿಸಲು ಮುಂದಾಗಿದ್ದು, ಪ್ರಮುಖವಾಗಿ ಪೊಲೀಸ್‌ ಇಲಾಖೆಯಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಿ ಇಂದು ಆದೇಶಿಸಿದೆ. ಆಂತರಿಕ ಭದ್ರತಾ ವಿಭಾಗದ ಡಿಜಿಪಿ ಆಗಿ ಸಿ. ಹೆಚ್. ಪ್ರತಾಪ್​ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಎಂ.ಎ.ಸಲೀಂ ಅವರನ್ನು ಸಿಐಡಿ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಬಿ.ದಯಾನಂದ್ ಅವರನ್ನು ಬೆಂಗಳೂರು ಪೊಲೀಸ್​ ಆಯುಕ್ತರನ್ನಾಗಿ ಸರ್ಕಾರ ನೇಮಿಸಿದ್ದು, ಕೆ.ವಿ.ಶರತ್​ ಚಂದ್ರ ಅವರನ್ನು ಗುಪ್ತಚರ ಎಡಿಜಿಪಿ ಆಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ : ರಾಜ್ಯ ಸರಕಾರಿ ನೌಕರರಿಗೆ ಕಾಂಗ್ರೆಸ್ ಸರಕಾರದ ಮೊದಲ ಕೊಡುಗೆ: ಶೇ.4 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಆದೇಶ ಜಾರಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.