ETV Bharat / state

ಅಪರಾಧ ಪ್ರಕರಣ, ಸರ್ಕಾರವೇ ಸಂತ್ರಸ್ತರ ಸ್ಥಾನದಲ್ಲಿ ನಿಂತು ಸಿಆರ್‌ಪಿಸಿ 372ರಡಿ ಮೇಲ್ಮನವಿ ಸಲ್ಲಿಸಲಾಗದು: ಹೈಕೋರ್ಟ್ - ಸಿಆರ್ಪಿಸಿ ಕಾಯಿದೆ

ಕಡೂರಿನ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಆಲಿಸಿದ ನ್ಯಾಯಮೂರ್ತಿ ಎಸ್ ರಾಚಯ್ಯ ಅವರಿದ್ದ ಏಕಸದಸ್ಯಪೀಠ ಈ ಆದೇಶ ನೀಡಿದೆ.

high court
ಹೈಕೋರ್ಟ್​
author img

By ETV Bharat Karnataka Team

Published : Sep 29, 2023, 10:52 PM IST

ಬೆಂಗಳೂರು: ಅಪರಾಧ ದಂಡ ಸಂಹಿತೆ ಸೆಕ್ಷನ್ 372ರಡಿ ಸರ್ಕಾರ ಸಂತ್ರಸ್ತ ಎಂದು ಪರಿಗಣಿಸಿ ಆರೋಪಿಗಳು ಖುಲಾಸೆಯಾಗಿದ್ದನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ.

ಕಡೂರಿನ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ಏಕ ಸದಸ್ಯಪೀಠ ಈ ಆದೇಶ ನೀಡಿದೆ. ಅಲ್ಲದೇ ಹಾಗೊಂದು ವೇಳೆ ಸರ್ಕಾರ ಮೇಲ್ಮನವಿ ಸಲ್ಲಿಸುವುದಾದರೆ ಸೆಕ್ಷನ್ 378ರಡಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಬೇಕು ಎಂದು ನ್ಯಾಯಪೀಠ ತಿಳಿಸಿದೆ.

ಸಿಆರ್ಪಿಸಿ ಕಾಯಿದೆಯಡಿ ಸೆಕ್ಷನ್ 372 ರಡಿ ಸಂತ್ರಸ್ತರಿಗೆ ಮಾತ್ರ ಮೇಲ್ಮನವಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅದೆ ರೀತಿ ಸೆಕ್ಷನ್ 378(1) ಮತ್ತು (3)ರಲ್ಲಿ ಸರ್ಕಾರಕ್ಕೆ ಮೇಲ್ಮನವಿ ಸಲ್ಲಿಸಲು ಪ್ರತ್ಯೇಕ ಅವಕಾಶವಿದೆ. ಎರಡೂ ಬೇರೆ ಬೇರೆ ಸೆಕ್ಷನ್‌ಗಳು, ಹಾಗಾಗಿ ಸಂತ್ರಸ್ತರು ಸೆಕ್ಷನ್ 372ರಡಿ ಸಲ್ಲಿಸಬೇಕಾದ ಮೇಲ್ಮನವಿಯನ್ನು ಸರ್ಕಾರ ಸಲ್ಲಿಸಲು ಸಾಧ್ಯವಿಲ್ಲ. ಸರ್ಕಾರ ತಾನೇ ಸೆಕ್ಷನ್ 378ರಡಿ ಪ್ರತ್ಯೇಕ ಮೇಲ್ಮನವಿ ಸಲ್ಲಿಸಬಹುದಾಗಿದೆ ಎಂದು ಪೀಠ ಆದೇಶ ನೀಡಿದೆ.ಅಲ್ಲದೆ, ಅದೇ ಕಾರಣಕ್ಕಾಗಿ ವಿಚಾರಣಾ ನ್ಯಾಯಾಲಯ ಆರೋಪಿಗಳನ್ನು ಖುಲಾಸೆಗೊಳಿಸಿ ನೀಡಿದ್ದ ಆದೇಶವನ್ನು ಪ್ರಶ್ನಿಸಿದ್ದ ಮೇಲ್ಮನವಿಯನ್ನು ವಜಾಗೊಳಿಸಿದೆ.

ಪ್ರಕರಣದಲ್ಲಿ ನ್ಯಾಯಾಲಯಕ್ಕೆ ನೆರವಾಗಲು ನೇಮಕವಾಗಿದ್ದ ಅಮೈಕಾಸ್ ಕ್ಯೂರಿ ಎಸ್.ಜಾವೇದ್, ರಾಜ್ಯ ಸರ್ಕಾರ ತಾನೇ ಬಾಧಿತ ವ್ಯಕ್ತಿ ಎಂದು ಭಾವಿಸಿ ಸಿಆರ್ಪಿಸಿ ಸೆಕ್ಷನ್ 372 ರಡಿ ಮೇಲ್ಮನವಿ ಸಲ್ಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ನ್ಯಾಯಪೀಠಕ್ಕೆ ವಿವರಿಸಿದ್ದರು.

ಆ ವಾದವನ್ನು ಒಪ್ಪಿದ ನ್ಯಾಯಾಲಯ, ಅಪರಾಧ ಪ್ರಕರಣಗಳಲ್ಲಿ ವಿಚಾರಣಾ ನ್ಯಾಯಾಲಯಗಳ ಆದೇಶಗಳನ್ನು ಪ್ರಶ್ನಿಸಲು ಸಂತ್ರಸ್ತರಿಗೆ ಮತ್ತುಸರ್ಕಾರಕ್ಕೆ ಅಪರಾಧ ದಂಡ ಸಂಹಿತೆಯ ಬೇರೆ ಬೇರೆ ಸೆಕ್ಷನ್ ಗಳಲ್ಲಿ ಅವಕಾಶ ನೀಡಲಾಗಿದೆ. ಹಾಗಾಗಿ ಅವುಗಳು ಅದೇ ಸೆಕ್ಷನ್ನಲ್ಲಿ ಮಾತ್ರ ಮೇಲ್ಮನವಿ ಸಲ್ಲಿಸಬೇಕು. ಸರ್ಕಾರ ಸಂತ್ರಸ್ತರಿಗೆ ಲಭ್ಯವಿರುವ ನಿಯಮದಲ್ಲಿ ಮೇಲ್ಮನವಿ ಸಲ್ಲಿಸಲಾಗದು ಎಂದು ಆದೇಶಿಸಿದೆ.

ಇದನ್ನೂಓದಿ:ಕೋರ್ಟ್​​ ಆದೇಶ ಉಲ್ಲಂಘನೆ: ಆರು ತಿಂಗಳಲ್ಲಿ ಪ್ರತಿ ತಿಂಗಳ ಒಂದು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸೇವೆ ಮಾಡಲು ಮುಚ್ಚಳಿಕೆ ನೀಡಿದ ವೈದ್ಯೆ

ಇನ್ನೊಂದು ಪ್ರಕರಣದಲ್ಲಿ, ಪತಿಯ ಸುಪರ್ದಿಗೆ ಅಪ್ರಾಪ್ತ ಪುತ್ರಿಯನ್ನು ಒಪ್ಪಿಸುವಂತೆ ನ್ಯಾಯಾಲಯ ನೀಡಿದ್ದ ಆದೇಶವನ್ನು ಉಲ್ಲಂಘಿಸಿದ ಹಿನ್ನೆಲೆ ವೈದ್ಯೆಯೊಬ್ಬರ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಪ್ರಕರಣದಡಿ ಆರು ತಿಂಗಳ ಕಾಲ ತಿಂಗಳಲ್ಲಿ ಒಂದು ದಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಸಲ್ಲಿಸುವುದಾಗಿ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ.

ಪ್ರಕರಣ ಸಂಬಂಧ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಅರ್ಜಿ, ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠಕ್ಕೆ ಮಹಿಳಾ ವೈದ್ಯರೊಬ್ಬರು ಮುಚ್ಚಳಿಕೆ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.