ETV Bharat / state

ಎಚ್ಎಸ್ಆರ್​ಪಿ ನಂಬರ್ ಫಲಕ ಕುರಿತು ಮುಂದಿನ ವಾರ ನಿರ್ಧಾರ : ಹೈಕೋರ್ಟ್​ಗೆ ಸರ್ಕಾರದ ಮಾಹಿತಿ

author img

By ETV Bharat Karnataka Team

Published : Nov 23, 2023, 7:53 PM IST

ಎಚ್ಎಸ್ಆರ್​ಪಿ ವಿಷಯಕ್ಕೆ ಸಂಬಂಧಿಸಿದಂತೆ ಮುಂದಿನವಾರ ಸಭೆ ನಡೆಸಿ ಮುಂದಿನ ನಿರ್ಧಾರದ ಬಗ್ಗೆ ಹೈಕೋರ್ಟ್​ಗೆ ಮಾಹಿತಿ ನೀಡುವುದಾಗಿ ಸರ್ಕಾರ ತಿಳಿಸಿದೆ.

ಎಚ್ಎಸ್ಆರ್​ಪಿ ನಂಬರ್ ಫಲಕ ಕುರಿತಂತೆ ಮುಂದಿನ ವಾರ ಸಭೆ

ಬೆಂಗಳೂರು: ಅತಿ ಸುರಕ್ಷಿತ ನೋಂದಣಿ ಫಲಕ(ಎಚ್ಎಸ್ಆರ್​ಪಿ) ಜಾರಿಗೆ ಸಂಬಂಧಿಸಿದಂತೆ ತಯಾರಕರಿಗೆ ಅನುಮತಿ ನೀಡುವ ಕುರಿತು ಅರ್ಜಿದಾರರು ಸೇರಿದಂತೆ ಸಂಬಂಧ ಪಟ್ಟ ಪಾಲುದಾರರೊಂದಿಗೆ ಮುಂದಿನವಾರ ಸಭೆ ನಡೆಸಿ, ಹೊರಬಂದು ನಿರ್ಧಾರವನ್ನು ನ್ಯಾಯಪೀಠಕ್ಕೆ ತಿಳಿಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್​ಗೆ ಮಾಹಿತಿ ನೀಡಿದೆ. ಎಚ್ಎಸ್ಆರ್​ಪಿ ನಂಬರ್ ಫಲಕ ತಯಾರಕರ ಒಕ್ಕೂಟ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಏಕ ಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 6ಕ್ಕೆ ಮುಂದೂಡಿತು.

ವಿಚಾರಣೆ ವೇಳೆ ಹೆಚ್ಚುವರಿ ಅಡ್ವೋಕೇಟ್ ಜನರಲ್​​ ವಿಕ್ರಮ ಹುಯಿಲಗೋಳ, ನವೆಂಬರ್ ತಿಂಗಳಲ್ಲಿ ಸಭೆ ನಿದಿಯಾಗಿತ್ತು. ಆದರೆ, ಕಾರಣಾಂತರಗಳಿಂದ ಎಲ್ಲ ಪಾಲುದಾರರನ್ನು ಸಭೆಗೆ ಆಹ್ವಾನಿಸುವುದಕ್ಕೆ ಸಾಧ್ಯವಾಗಿರಲಿಲ್ಲ. ಆದ್ದರಿಂದ ಮುಂದಿನ ವಾರ ಸಭೆ ಹಮ್ಮಿಕೊಳ್ಳುವುದಾಗಿ ನ್ಯಾಯಪೀಠಕ್ಕೆ ಮಾಹಿತಿ ನೀಡಿದರು. ಎಚ್ಎಸ್ಆರ್​ಪಿ ತಯಾರಕರ ಸಂಘದ ಪರ ವಕೀಲರು, ಸರ್ಕಾರ ನಡೆಸುವ ಸಭೆಗೆ ಸಂಬಂಧಿಸಿದಂತೆ ಎಲ್ಲ ಪಾಲುದಾರರನ್ನು ಸೇರಿಸಿ ಸಭೆ ನಡೆಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ಆದರೂ, ಸಭೆಗೆ ಯಾವುದೇ ಪಾಲುದಾರರನ್ನು ಸರ್ಕಾರ ಆಹ್ವಾನಿಸಿಲ್ಲ ಎಂದು ವಿವರಿಸಿದರು.

ಪ್ರಕರಣದ ಹಿನ್ನೆಲೆ: 2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳು 90 ದಿನಗಳ ಒಳಗಾಗಿ ಹೊಸ ಪರವಾನಗಿ ನೋಂದಣಿ ಫಲಕ ಹೊಂದಬೇಕು ಎಂದು ರಾಜ್ಯ ಸರ್ಕಾರ ಅಧಿಸೂಚನೆ ಹೊರಿಡಿಸಿತ್ತು. ಈ ಅಧಿಸೂಚನೆ ಪ್ರಶ್ನಿಸಿದ್ದ ಭಾರತೀಯ ಅತಿ ಸುರಕ್ಷಿತ ನಂಬರ್ ಫಲಕಗಳ ಉತ್ಪಾದಕರ ಒಕ್ಕೂಟ ಹೈಕೋರ್ಟ್ ಮೆಟ್ಟಿಲೇರಿ, ಕೆಲ ಕಂಪನಿಗಳಿಗೆ ಮಾತ್ರ ನಂಬರ್‌ ಪ್ಲೇಟ್ ಉತ್ಪಾದನೆಗೆ ರಾಜ್ಯ ಸರ್ಕಾರ ಅವಕಾಶ ಕಲ್ಪಿಸಿದೆ. ಇತರರಿಗೆ ಅವಕಾಶ ನೀಡಿಲ್ಲ. ಹೀಗಾಗಿ ಅಧಿಸೂಚನೆಗೆ ತಡೆ ನೀಡಬೇಕು ಎಂದು ಕೋರಿದ್ದರು.

ಈ ಅರ್ಜಿ ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಒಕ್ಕೂಟದ ಮನವಿಯನ್ನು ತಿರಸ್ಕರಿಸಿದ್ದು, ನಂಬರ್ ಫಲಕ ಉತ್ಪಾದನೆ ಮಾಡುವುದಕ್ಕೆ ಪರವಾನಿಗೆ ಹೊಂದಿರುವ ಎಲ್ಲ ಕಂಪನಿಗಳನ್ನು ಪರಿಗಣಿಸಿ ನಿಯಮಗಳ ಪ್ರಕಾರ ಮುಂದಿನ 15 ದಿನಗಳಲ್ಲಿ ಉತ್ಪಾದಕರನ್ನು ಅಂತಿಮಗೊಳಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿತ್ತು. ಈ ಆದೇಶವನ್ನು ದ್ವಿಸದಸ್ಯ ಪೀಠ ಅಮಾನತ್ತಿನಲ್ಲಿಟ್ಟಿದೆ.

ಪಿಐಎಲ್‌ನಲ್ಲಿ ಕೋರಿಕೆ ಏನು: ಇದೇ ಪ್ರಕರಣ ಸಂಬಂಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ಬೆಂಗಳೂರಿನ ಗೌರಿ ಶಂಕರ್ ಅವರು, 2019ರ ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳು 90 ದಿನಗಳ ಒಳಗಾಗಿ ಹೊಸ ಪರವಾನಿಗೆ ನೋಂದಣಿ ಫಲಕ ಹೊಂದಬೇಕು ಎಂಬ ರಾಜ್ಯ ಸರ್ಕಾರದ ಸುತ್ತೋಲೆಯಿಂದ ಲಕ್ಷಾಂತರ ವಾಹನ ಸವಾರರಿಗೆ ತೊಂದರೆಯಾಗಲಿದೆ. ಅಲ್ಲದೆ, ಬಹುತೇಕ ಚಾಲಕರು ಅನಕ್ಷರಸ್ಥರಾಗಿದ್ದು, ಅವರಿಗೆ ಈ ಎಚ್‌ಎಸ್‌ಆರ್‌ಪಿ ನಂಬರ್ ಫಲಕದ ಕುರಿತು ಮಾಹಿತಿ ಇಲ್ಲ.

ಎಚ್‌ಎಸ್‌ಆರ್‌ಪಿ ನಂಬರ್ ಫಲಕ ಅಳವಡಿಸದ ವಾಹನಗಳಿಗೆ ದಂಡ ವಿಧಿಸುವುದಾಗಿ ಸರ್ಕಾರ ತಿಳಿಸಿದೆ. ಇದರಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸಬೇಕಾಗುತ್ತದೆ. ಹೊರ ರಾಜ್ಯದಿಂದ ಬರುವ ವಾಹನಗಳಿಗೆ ಯಾವ ರೀತಿಯಲ್ಲಿ ಕ್ರಮ ವಹಿಸಬೇಕು ಎಂಬುದರ ಕುರಿತು ಸ್ಪಷ್ಟತೆ ಇಲ್ಲ. ಹೀಗಾಗಿ, ಅವಧಿ ವಿಸ್ತರಿಸಬೇಕು ಎಂದು ಕೋರಿದ್ದಾರೆ.

ಇದನ್ನೂ ಓದಿ: ಭದ್ರತೆಯ ಉದ್ಯೋಗ ಮೌಲ್ಯಯುತ ಆಸ್ತಿ ಇದ್ದಂತೆ, ಹುದ್ದೆಗಾಗಿ ಸುಳ್ಳು ಹೇಳುವುದು ವಂಚನೆಗೆ ಸಮಾನ: ಹೈಕೋರ್ಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.