ಬೆಂಗಳೂರು : ವಿದೇಶದಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆಸಿಕೊಳ್ಳಲು ಈಗಾಗಲೇ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇದೀಗ ರಾಜ್ಯ ಸರ್ಕಾರ ವಿದೇಶದಲ್ಲಿ ಸಿಲುಕಿರುವ ಕನ್ನಡಿಗರನ್ನು ರಾಜ್ಯಕ್ಕೆ ಕರೆಸುವ ಸಂಬಂಧ ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಿಸಿದೆ.
ರಾಜ್ಯ ಸರ್ಕಾರ ಈ ಸಂಬಂಧ ಐಎಎಸ್ ಅಧಿಕಾರಿ ಮೀನಾ ನಾಗರಾಜ್ ಹಾಗೂ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಆದೇಶ ಹೊರಡಿಸಿದೆ.
![ವಿದೇಶದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ಇಬ್ಬರು ನೋಡಲ್ ಅಧಿಕಾರಿಗಳ ನೇಮಕ](https://etvbharatimages.akamaized.net/etvbharat/prod-images/kn-bng-02-abroad-nodalofficer-script-7201951_05052020142004_0505f_1588668604_504.jpg)
ವಿದೇಶದಲ್ಲಿರುವ ಕನ್ನಡಿಗ ಉದ್ಯೋಗಿಗಳು, ವಿದ್ಯಾರ್ಥಿಗಳನ್ನು ವಾಪಸ್ ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯದ ನೋಡಲ್ ಅಧಿಕಾರಿಗಳು ಕೇಂದ್ರ ಸರ್ಕಾರದ ನೋಡಲ್ ಅಧಿಕಾರಿಗಳ ಜೊತೆ ಸಮನ್ವಯತೆ ಸಾಧಿಸಲಿದ್ದಾರೆ.
ಈ ನೋಡಲ್ ಅಧಿಕಾರಿಗಳು ಬೇರೆ ದೇಶದಲ್ಲಿ ಸಿಲುಕಿರುವ ಕರ್ನಾಟಕ ಮೂಲದ ಉದ್ಯೋಗಿಗಳು, ವಿದ್ಯಾರ್ಥಿಗಳನ್ನು ಮತಳಿ ಕರೆತರುವ ನಿಟ್ಟಿನಲ್ಲಿ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ.