ETV Bharat / state

ಕಾಮಗಾರಿ ಮುಗಿದರೂ ಗುತ್ತಿಗೆದಾರರ ಬಿಲ್​ ಪಾವತಿಸದ ಸರ್ಕಾರ: ಹೈಕೋರ್ಟ್ ಅಸಮಾಧಾನ - High Court

High court displeasure on contractors bill pending: ಬಾಕಿ ಬಿಲ್ ಪಾವತಿಯಾಗದಿರುವ ಕುರಿತು ಸಲ್ಲಿಸಲಾಗಿರುವ ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರದ ಸ್ವಂತ ದಾಖಲೆಗಳಂತೆ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಇದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿತು.

high court
ಹೈಕೋರ್ಟ್
author img

By ETV Bharat Karnataka Team

Published : Nov 30, 2023, 7:11 AM IST

ಬೆಂಗಳೂರು: ಗುತ್ತಿಗೆದಾರರಿಗೆ ಹಣ ಪಾವತಿ ಮಾಡದಿರುವ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ರಾಜ್ಯ ಹೈಕೋರ್ಟ್​, ಸರ್ಕಾರಿ ದಾಖಲೆಗಳ ಪ್ರಕಾರವೇ ಈವರೆಗೆ ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂತಹ ಘಟನೆಗಳು ಮತ್ತೆ ಮುಂದುವರೆಯಬಾರದು ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಅಲ್ಲದೇ, ಬಿಲ್​ ಪಾವತಿ ಮಾಡುವಲ್ಲಿಯೂ ಹಿರಿತನ ಅನುಸರಿಸಲಾಗುತ್ತಿದೆ, ಸರ್ಕಾರದ ಈ ಪ್ರಕ್ರಿಯೆಯನ್ನು ಅರ್ಥಮಾಡಿಕೊಳ್ಳಲು ಸಾಧ್ಯವೇ ಆಗುತ್ತಿಲ್ಲ ಎಂದು ಹೇಳಿದೆ.

ಕಾಮಗಾರಿಗೆ ಬಾಕಿ ಬಿಲ್​ ಬಿಡುಗಡೆ ಮಾಡುವಂತೆ ನ್ಯಾಯಾಲಯದ ಆದೇಶವಿದ್ದರೂ ಜಾರಿ ಮಾಡದ ಬಿಬಿಎಂಪಿ ಕ್ರಮ ಪ್ರಶ್ನಿಸಿ ಮೆಸ್​ ನಿಕ್ಷೀಪ್​ ಇಫ್ರಾ ಪ್ರೋಜೆಕ್ಟ್ ಗುತ್ತಿಗೆದಾರ ಕಂಪನಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್​ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಇಬ್ಬರು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ನಿಮ್ಮ ದಾಖಲೆಗಳೇ ಹೇಳುತ್ತಿವೆ. ಇದನ್ನು ನೋಡಿ ಅವರನ್ನು ಮೂಲೆಗುಂಪು ಮಾಡುವುದಕ್ಕೆ ಮುಂದಾಗದಿರಿ. ಈ ಹಿಂದೆ ನಡೆದ ವಿಚಾರಣೆಯಲ್ಲಿ ಬಿಬಿಎಂಪಿ ಹಿರಿತನದ ಆಧಾರದಲ್ಲಿ ಗುತ್ತಿಗೆದಾರರ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ನ್ಯಾಯಪೀಠಕ್ಕೆ ತಿಳಿಸಿತ್ತು. ಈ ಅಂಶವನ್ನು ಗಮನಿಸಿದ ನ್ಯಾಯಪೀಠ, ಕಲ್ಯಾಣ ರಾಜ್ಯದಲ್ಲಿ ಹಿರಿತನದ ಆಧಾರದಲ್ಲಿ ಬಿಲ್​ ಪಾವತಿ ಮಾಡುತ್ತಿರುವ ಬಿಬಿಎಂಪಿಯ ಪ್ರಕ್ರಿಯೆಯನ್ನು ಅರ್ಥ ಮಾಡಿಕೊಳ್ಳುವುದಕ್ಕೆ ನಮ್ಮಿಂದ ಸಾಧ್ಯವಾಗುತ್ತಿಲ್ಲ. ಸರ್ಕಾರಿ ಸಂಸ್ಥೆಯೊಂದು ಕೆಲವೊಂದು ಕೆಲಸಗಳಿಗೆ ಟೆಂಡರ್​ ಕರೆಯುತ್ತದೆ. ಗುತ್ತಿಗೆ ಪಡೆದವರು ಸಂಸ್ಥೆಯ ಎಲ್ಲಾ ಷರತ್ತುಗಳನ್ನು ಅನುಸರಿಸಿ ಕಾಮಗಾರಿ ಪೂರ್ಣಗೊಳಿಸಿದ್ದಾರೆ. ಗುತ್ತಿಗೆ ನೀಡಿದ ಸಂಸ್ಥೆಯು ಅದನ್ನು ಒಪ್ಪಿಕೊಂಡಿದೆ. ಆದರೂ, ಬಾಕಿ ಮೊತ್ತ ಪಾವತಿಗೆ ಷರತ್ತುಗಳೇಕೆ ಎಂದು ಪ್ರಶ್ನಿಸಿದೆ.

ಇದಕ್ಕೆ ಬಿಬಿಎಂಪಿ ಪರ ವಕೀಲರು, ಕೆಲವು ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗುತ್ತಿದೆ ಎಂದು ಹೇಳಿದ್ದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ನಾವು ಹಿಂದಿನ ಆದೇಶದಲ್ಲಿ ಉಲ್ಲೇಖಿಸಿದಂತೆ ರಾಜ್ಯ ಸರ್ಕಾರವೇ ಇಂತಹ ಪರಿಸ್ಥಿತಿಗಳನ್ನು ತಪ್ಪಿಸಲು ಸೂಕ್ತ ಮಾರ್ಗಸೂಚಿಗಳನ್ನು ಹೊರಡಿಸಬೇಕಾಗಿದೆ ಎಂದು ಆದೇಶಿಸಿ ವಿಚಾರಣೆಯನ್ನು ಡಿ. 13ಕ್ಕೆ ಮುಂದೂಡಿತು.

ಇದನ್ನೂ ಓದಿ: ಸ್ಥಳೀಯ ಸಂಸ್ಥೆಗಳ ಅಭ್ಯರ್ಥಿಗಳು ಕ್ರಿಮಿನಲ್ ಪ್ರಕರಣ ಬಹಿರಂಗಪಡಿಸಲು ಪ್ರತ್ಯೇಕ ನಮೂನೆ ಒದಗಿಸಬೇಕು: ಚು.ಆಯೋಗಕ್ಕೆ ಹೈಕೋರ್ಟ್ ನಿರ್ದೇಶನ

ಇದೇ ವೇಳೆ ನ್ಯಾಯಾಲಯವು ಸರ್ಕಾರ ಮತ್ತು ಬಿಬಿಎಂಪಿಗೆ, ನಿಮ್ಮಲ್ಲಿ ಹಣ ಇಲ್ಲವೇ ಎಂದು ಪ್ರಶ್ನಿಸಿತು. ಇಲ್ಲವಾದರೆ ಹೇಳಿಬಿಡಿ, ಬಾಕಿ ಪಾವತಿಯಲ್ಲೂ ಹಿರಿತನ ಎಂದರೇನು? ನಿಮ್ಮ ಬಳಿ ಮಾರ್ಗಸೂಚಿ ಇದೆಯೇ, ಸರಿಯಾಗಿ ಹೇಳಿ ಎಂದು ವಕೀಲರನ್ನು ಖಾರವಾಗಿ ಪ್ರಶ್ನಿಸಿತು.

ನ್ಯಾಯಾಂಗ ನಿಂದನೆ ಅರ್ಜಿಯಲ್ಲಿ ನಗರಾಭಿವೃದ್ಧಿ ಕಾರ್ಯದರ್ಶಿ ಡಾ.ಅಜಯ್ ನಾಗಭೂಷಣ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ಮುಖ್ಯ ಲೆಕ್ಕಾಧಿಕಾರಿ ವಾಣಿ, ಬಿಬಿಎಂಪಿ ಮಲ್ಲೇಶ್ವರಂ ವಿಭಾಗದ ಕಾರ್ಯಕಾರಿ ಎಂಜಿನಿಯರ್ ಜೈಶಂಕರ್ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಇದನ್ನೂ ಓದಿ: ಕೆಎಸ್‌ಪಿಸಿಬಿ ಅಧ್ಯಕ್ಷರ ನೇಮಕದ ಮಾರ್ಗಸೂಚಿಗಳನ್ನು ತಿದ್ದುಪಡಿಗೆ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.