ಬೆಂಗಳೂರು: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಪರಿಸ್ಥಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, N-95 ಮಾಸ್ಕ್ನ ಅಭಾವ ಉಂಟಾದಲ್ಲಿ ಅಥವಾ ಲಾಭಕ್ಕಾಗಿ ಎಂಆರ್ಪಿಗಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದ್ದು ಕಂಡುಬಂದರೆ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿ ಜಾವೇದ್ ಅಕ್ತರ್ ಖಡಕ್ ಸೂಚನೆ ನೀಡಿದ್ದಾರೆ.
ಸರ್ಕಾರ ಈಗಾಗಲೇ ಮಾಸ್ಕ್ಗಳನ್ನು ಹೆಚ್ಚು ಉತ್ಪಾದನೆ ಮಾಡುವಂತೆ ಕಂಪನಿಗಳಿಗೆ ಸೂಚಿಸಿದೆ. ಸದ್ಯ ಸರ್ಜಿಕಲ್ ಮಾಸ್ಕ್ಗಳನ್ನ ಬಳಸಿದರೂ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಕೊರೊನಾ ವೈರಸ್ ಹರಡುವ ಭೀತಿಯಿಂದ ಈಗಾಗಲೇ ಜನತೆಯಲ್ಲಿ ಆತಂಕ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಮಾಸ್ಕ್ಗಳಿಗೆ ಬೇಡಿಕೆ ಹೆಚ್ಚಾಗಿದೆ. ಆದರೆ ದಿಢೀರ್ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಮಾಸ್ಕ್ಗಳು ಜನರ ಕೈ ಸೇರುತ್ತಿಲ್ಲ.