ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳಿಗೆ ಪ್ರಭಾರ ಹುದ್ದೆ ವಹಿಸಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ.
ಇತ್ತೀಚೆಗಷ್ಟೆ ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಂಡಿರುವ ಸಿ.ಶಿಖಾ ಅವರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಯ ಪ್ರಭಾರ ವಹಿಸಲಾಗಿದೆ.
ಅದೇ ರೀತಿ ಕೊಪ್ಪಳ ಜಿಲ್ಲಾಧಿಕಾರಿ ಸುರಲ್ಕರ್ ವಿಕಾಸ್ ಕಿಶೋರ್ ಅವರಿಗೆ ಕೊಪ್ಪಳ ಜಿ.ಪಂ. ಸಿಇಒ ಹುದ್ದೆಯ ಪ್ರಭಾರ ವಹಿಸಿ ಆದೇಶಿಸಲಾಗಿದೆ.