ETV Bharat / state

ಕೊರೊನಾ ನಿಯಂತ್ರಣಕ್ಕೆ ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಪಾಲಿಸಬೇಕಾದ ನಿಯಮಗಳೇನು?

ಕೊರೊನಾ ವೈರಸ್ ಹರಡುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಸಚಿವಾಲಯದ ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಅಗತ್ಯವಾಗಿ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕಾಗುತ್ತದೆ.

govt press release for govt officers and workers
ಕೊರೊನಾ ನಿಯಂತ್ರಣ : ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿ ಪಾಲಿಸಬೇಕಾದ ನಿಯಮಗಳು
author img

By

Published : Apr 21, 2020, 8:14 AM IST

ಬೆಂಗಳೂರು: ಕರ್ನಾಟಕ ಸರ್ಕಾರ ಸಚಿವಾಲಯದಲ್ಲಿ ಕೊರೊನಾ ವೈರಸ್ (ಕೋವಿಡ್-19)ನ ನಿಯಂತ್ರಣಕ್ಕಾಗಿ ತೆಗೆದುಕೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಬಗ್ಗೆ ವಿಶೇಷ ಸುತ್ತೋಲೆ ಹೊರಡಿಸಲಾಗಿದೆ.

govt press release for govt officers and workers
ವಿಧಾನಸೌಧ

ಕೊರೊನಾ ವೈರಸ್ (ಕೋವಿಡ್-19) ಹರಡುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಸಚಿವಾಲಯದ ಎಲ್ಲಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿ ಅಗತ್ಯವಾಗಿ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕಾಗಿರುತ್ತದೆ.

ಅದರಂತೆಯೇ ಸಚಿವಾಲಯದ ಎಲ್ಲಾ ಇಲಾಖೆಗಳ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಕೆಳಕಂಡ ಅಗತ್ಯ ಕ್ರಮಗಳನ್ನು ತಗೆದುಕೊಳ್ಳುವಂತೆ ಸೂಚಿಸಲಾಗಿದೆ.

  • • ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು.
    • ಆರೋಗ್ಯ ಸೇತು ಆ್ಯಪ್​​ ಕಡ್ಡಾಯವಾಗಿ ಬಳಸುವುದು.
    • ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಮಾಸ್ಕ್ ಧರಿಸುವುದು.
    • ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವುದು ಜೊತೆಗೆ ಜನರಿಂದ ದೈಹಿಕ ಅಂತರ ಕಾಪಾಡಿಕೊಳ್ಳುವುದು.
    • ಆಗಾಗ್ಗೆ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವ ಅಭ್ಯಾಸವನ್ನು ರೂಢಿಸಿಕೊಳ್ಳುವುದು, ಕೈಗಳನ್ನು ಸೋಪ್ ಮತ್ತು ನೀರನ್ನು ಬಳಸಿ ತೊಳೆದುಕೊಳ್ಳುವುದು ಅಥವಾ ತಕ್ಷಣಕ್ಕೆ ನೀರು ಸಿಗದೇ ಇದ್ದಾಗ ಶೇ.60 ಗಿಂತ ಜಾಸ್ತಿ ಅಲ್ಕೊಹಾಲ್ ಇರುವ ಸ್ಯಾನಿಟೈಸರ್ ಬಳಸಿ ಕೈಗಳನ್ನು ಸ್ವಚ್ಛಗೊಳಿಸುವುದು.
    • ಕೆಮ್ಮುವಾಗ ಮತ್ತು ಸೀನುವಾಗ ಮೂಗು ಮತ್ತು ಬಾಯನ್ನು ಕರವಸ್ತ್ರದಿಂದ / ಟಿಶ್ಯು ಕಾಗದದಿಂದ ಮುಚ್ಚಿಕೊಳ್ಳುವುದು.
    • ಟಿಶ್ಯೂ ಕಾಗದ ಬಳಸಿದ ನಂತರ ಕೂಡಲೇ ಮುಚ್ಚಿದ ತ್ಯಾಜ್ಯ ತೊಟ್ಟಿಗೆ ಹಾಕುವುದು.
    • ಬೇರೆ ವ್ಯಕ್ತಿಗಳೊಂದಿಗೆ ಸಂವಹನ ನಡೆಸುವಾಗ ಸುರಕ್ಷಿತ ಅಂತರ ಕಾಪಾಡಿಕೊಳ್ಳುವುದು. ಅದರಲ್ಲೂ ಜ್ವರ ಕೆಮ್ಮು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿಗಳಿಂದ ದೂರ ಉಳಿಯುವುದು.
    • ಜ್ವರ, ಕೆಮ್ಮು ಮತ್ತು ಉಸಿರಾಟ ತೊಂದರೆಯಿಂದ ಬಳಲುತ್ತಿರುವ ವ್ಯಕ್ತಿಗಳಿಂದ ದೂರವಿರುವುದು.
    • ದೇಹದ ತಾಪಮಾನ ಹಾಗೂ ಉಸಿರಾಟದ ಲಕ್ಷಣವನ್ನು ಆಗಾಗ ಪರಿಶೀಲಿಸಿಕೊಳ್ಳುತ್ತಿರುವುದು, ಉಸಿರಾಟ ತೊಂದರೆಯಿದ್ದಲ್ಲಿ ಹಾಗೂ ಜ್ವರ ಮತ್ತು ಕೆಮ್ಮಿನಿಂದ ಬಳಲುತ್ತಿದ್ದಲ್ಲಿ ಕೂಡಲೇ ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳುವುದು.
  • • ಜ್ವರ/ನ್ಯುಮೋನಿಯಾದಂತಹ ರೋಗ ಲಕ್ಷಣಗಳಿದ್ದಲ್ಲಿ ದಯಮಾಡಿ ರಾಜ್ಯದ ಸಹಾಯವಾಣಿ ಸಂಖ್ಯೆ: 104 ಹಾಗೂ ಕರ್ನಾಟಕ ಸರ್ಕಾರ ಸಚಿವಾಲಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 08046848600 ಮತ್ತು 08066692000 ಗೆ ಅಥವಾ ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯದ 24X7 ಸಹಾಯವಾಣಿ ಸಂಖ್ಯೆಯಾದ 01123978046ಗೆ ಕರೆ ಮಾಡುವುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.