ETV Bharat / state

ಮಾಧ್ಯಮ ಕ್ಷೇತ್ರ, ಪತ್ರಕರ್ತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಬಿಎಸ್ವೈ - ಪತ್ರಕರ್ತರ ಹಿತರಕ್ಷಣೆ ಸರ್ಕಾರ ಬದ್ಧ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ, ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮ
Kannada press day program
author img

By

Published : Jul 1, 2021, 8:43 PM IST

ಬೆಂಗಳೂರು: ಸಂವಿಧಾನದ ನಾಲ್ಕನೇ ಅಂಗ ಎಂದು ಕರೆಸಿಕೊಳ್ಳುವ ಪತ್ರಿಕಾರಂಗ ಕೋವಿಡ್ ಸಂದರ್ಭದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಿದ್ದು, ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಗೃಹ ಕಚೇರಿ ಕೃಷ್ಣಾದಿಂದ ವರ್ಚುವಲ್ ಮೂಲಕ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ಕನ್ನಡ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸುಮಾರು ಎರಡು ಶತಮಾನಗಳ ಹಿಂದೆ ಹರ್ಮನ್ ಮೊಗ್ಲಿಂಗ್ ಪ್ರಾರಂಭ ಮಾಡಿದ 'ಮಂಗಳೂರು ಸಮಾಚಾರ' ಕನ್ನಡದ ಮೊಟ್ಟ ಮೊದಲ ಪತ್ರಿಕೆ. ಹೀಗೆ ಕರ್ನಾಟಕದಲ್ಲಿ ಆರಂಭಗೊಂಡ ಪತ್ರಿಕೋದ್ಯಮ ಇಂದು ಹಲವು ಸ್ಥಿತ್ಯಂತರಗಳನ್ನು ಕಂಡಿದೆ. ಅಂತರ್ಜಾಲ ಹಾಗೂ ತಂತ್ರಜ್ಞಾನದಿಂದಾಗಿ ಪತ್ರಿಕೋದ್ಯಮದ ಸ್ವರೂಪವೇ ಬದಲಾಗಿದೆ. ಅದಾಗ್ಯೂ ಸತ್ಯ, ಪ್ರಾಮಾಣಿಕತೆ, ವಸ್ತುನಿಷ್ಠತೆಯ ನೆಲೆಗಟ್ಟಿನಲ್ಲಿ ವರದಿಗಳು ಮೂಡಿಬಂದಾಗ ಮಾತ್ರ ಮಾಧ್ಯಮದ ನಿಜ ಧ್ಯೇಯವನ್ನು ಸಾಧಿಸಿದಂತಾಗುತ್ತದೆ ಎಂದರು.

ಮೃತ ಪರ್ತಕರ್ತರಿಗೆ ನೆರವು:

ಮಾಧ್ಯಮ ಕ್ಷೇತ್ರ ಹಾಗೂ ಪತ್ರಕರ್ತರ ಹಿತರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಪತ್ರಕರ್ತರು ಅತ್ಯಂತ ಕ್ರಿಯಾಶೀಲರಾಗಿ ದುಡಿದಿದ್ದಾರೆ. ಅನೇಕರು ಅಸುನೀಗಿದ್ದಾರೆ. ಕೋವಿಡ್‍ನಿಂದ ಮೃತಪಟ್ಟ 31 ಪತ್ರಕರ್ತರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 5 ಲಕ್ಷ ರೂ.ಗಳ ನೆರವು ನೀಡಲಾಗಿದೆ ಎಂದರು.

ರಾಜ್ಯ ಸರ್ಕಾರ ಪತ್ರಕರ್ತರ ಕಾರ್ಯವನ್ನು ಮನಗಂಡು ಕೋವಿಡ್ ವಾರಿಯರ್ಸ್ ಎಂದು ಘೋಷಿಸಿ ಪತ್ರಿಕಾ ವಿತರಕರೂ ಸೇರಿದಂತೆ ಸುಮಾರು 25 ಸಾವಿರಕ್ಕೂ ಹೆಚ್ಚು ಪತ್ರಕರ್ತರು ಮತ್ತು ಅವರ ಕುಟುಂಬದವರಿಗೆ ಉಚಿತವಾಗಿ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ಹಾಕಿಸಲಾಗಿದೆ. ಪತ್ರಕರ್ತರ ಕ್ಷೇಮ ನಿಧಿಗೆ 5 ಕೋಟಿ ರೂ.ಗಳ ನೆರವನ್ನು ಆಯವ್ಯಯದಲ್ಲಿ ಘೋಷಿಸಲಾಗಿದೆ ಎಂದು ತಿಳಿಸಿದರು.

ಸಿಎಂ ಕಿವಿಮಾತು:

ಬೆರಳ ತುದಿಯಲ್ಲಿ ಮಾಹಿತಿ ಲಭ್ಯವಾಗಿಸುವ ತಂತ್ರಜ್ಞಾನದ ಯುಗದಲ್ಲಿ ಸುದ್ದಿ ಬಿತ್ತರಿಸುವ ರಭಸದಲ್ಲಿ ಸುದ್ದಿಯ ಸಾರವನ್ನು ಮರೆಯುವಂತಾಗಬಾರದು ಎಂಬ ಎಚ್ಚರವೂ ಇಂದು ಅಗತ್ಯ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು. ಬಳಿಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ವೇಳೆ ವಿವಿಧ ಜಿಲ್ಲೆಗಳ ಪತ್ರಕರ್ತರು ಈ ವರ್ಚುವಲ್ ಸಮಾರಂಭದಲ್ಲಿ ಭಾಗವಹಿಸಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮಾಧ್ಯಮ ಸಲಹೆಗಾರ ಎನ್. ಭೃಂಗೀಶ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ.ಎಸ್. ಹರ್ಷ ಹಾಗೂ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.