ETV Bharat / state

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವರದಿ ಜಾರಿಗೆ ತರಲು ಸರ್ಕಾರ ಬದ್ಧ: ಸಚಿವ ಈಶ್ವರಪ್ಪ - Bangalore

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ (ಜಾತಿ ಜನಗಣತಿ) ಜಾರಿಗೆ ತರಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

Minister K.S. Eshwarappa
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿಗೆ ತರಲು ಸರ್ಕಾರ ಬದ್ಧ: ಸಚಿವ ಕೆ.ಎಸ್. ಈಶ್ವರಪ್ಪ
author img

By

Published : Oct 18, 2020, 2:35 PM IST

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ (ಜಾತಿ-ಜನಗಣತಿ) ಜಾರಿಗೆ ತರಲು ರಾಜ್ಯ ಸರ್ಕಾರಕ್ಕೆ ಯಾವುದೇ ಅಡ್ಡಿ ಇಲ್ಲ. ವರದಿ ಜಾರಿಗೆ ತರಲು ನಾವು ಬದ್ಧರಾಗಿದ್ದೇವೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದ್ದಾರೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವರದಿ ಜಾರಿಗೆ ತರಲು ಸರ್ಕಾರ ಬದ್ಧ: ಸಚಿವ ಕೆ.ಎಸ್. ಈಶ್ವರಪ್ಪ

ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಬೆಂಗಳೂರಿನ ಲಾಲ್ ಬಾಗ್ ರಸ್ತೆಯಲ್ಲಿರುವ ಗೋಡ್ವಾಡ್ ಭವನದಲ್ಲಿ ನಡೆಯುತ್ತಿರುವ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಸಿದ್ದರಾಮಯ್ಯ ಸರ್ಕಾರದಲ್ಲಿ ಜಾತಿ ಜನಗಣತಿ ವರದಿ ಜಾರಿಗೆ ಬರಬೇಕಿತ್ತು. ಆದರೆ ಅದರ ಬಗ್ಗೆ ನಾನೇನು ಮಾತನಾಡಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಜಾತಿ ಜನಗಣತಿ ವರದಿ ಜಾರಿಗೆ ಬರಲಿಲ್ಲ. ಸಮ್ಮಿಶ್ರ ಸರ್ಕಾರದಲ್ಲಿ ಪುಟ್ಟರಂಗ ಶೆಟ್ಟಿಯವರಿಗೆ ವರದಿ ಜಾರಿಗೆ ಅವಕಾಶ ಕೊಡಲಿಲ್ಲ. ಈಗ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಒಪ್ಪಿಕೊಳ್ಳುವ ಭರವಸೆ ಕೊಟ್ಟಿದ್ದಾರೆ. ನಮ್ಮ ಸರ್ಕಾರದಲ್ಲಿ ಹೋರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದರು.

ವರದಿ ಜಾರಿಗೆ ನಾವೆಲ್ಲ ಒತ್ತಾಯ ಹಾಕೋಣ. ಸಚಿವ ಶ್ರೀರಾಮುಲು ಅವರು ಪರಿಷತ್​​ನಲ್ಲಿ ವರದಿ ಜಾರಿಗೆ ನಮ್ಮ ಸರ್ಕಾರ ಎಲ್ಲಾ ಪ್ರಯತ್ನ ಮಾಡಲಿದೆ ಎಂದಿದ್ದಾರೆ. ಸದಸ್ಯ ಕೆ.ಪಿ.ನಂಜುಂಡಿ ಪ್ರಸ್ತಾಪಿಸಿದ ವಿಚಾರದ ಮೇಲೆ ಮಾತನಾಡಿದ ಸಂದರ್ಭ ಸಚಿವರು ಉತ್ತರ ನೀಡಿದ್ದಾರೆ. ಸರ್ಕಾರದಿಂದ ಇದಕ್ಕೆ ತಡೆ ಎದುರಾಗಲಿದೆ ಎಂಬ ಆತಂಕ ಬೇಡ. ವರದಿ ಜಾರಿಗೆ ನಾವು ಬದ್ಧರಾಗಿದ್ದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಜೊತೆ ಇನ್ನೊಮ್ಮೆ ಈ ವಿಚಾರವಾಗಿ ಸಮಾಲೋಚಿಸುತ್ತೇನೆ ಎಂದು ಭರವಸೆ ನೀಡಿದರು.

ಜಾತಿ ಜನಗಣತಿ ವರದಿ ಜಾರಿಗೆ ಕೆಲವು ಅಡ್ಡಿ ಬರಬಹುದು. ಆದರೆ ನಿಮ್ಮ ಸರ್ಕಾರ ವರದಿ ಜಾರಿಗೆ ಬದ್ಧ. ಅಡ್ಡಿಗಳನ್ನು ನಮ್ಮ ಸರ್ಕಾರ ಪರಿಗಣಿಸಿಲ್ಲ. ಪಕ್ಷ ಬೇಧ ಮರೆತು ವರದಿ ಜಾರಿಗೆ ಶ್ರಮಿಸೋಣ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.