ETV Bharat / state

ಕಂಬಳ ಉತ್ತೇಜಿಸಲು 1 ಕೋಟಿ ರೂ. ಸಹಾಯಧನ ಬಿಡುಗಡೆ

ದಕ್ಷಿಣ ಕನ್ನಡ ಜಿಲ್ಲೆಯ 10 ಮತ್ತು ಉಡುಪಿ ಜಿಲ್ಲೆಯ 10 ಕಂಬಳಗಳನ್ನು ನಡೆಸಲು ಪ್ರತಿ ಕಂಬಳಕ್ಕೆ 5 ಲಕ್ಷ ರೂ.ಗಳಂತೆ 1 ಕೋಟಿ ರೂಪಾಯಿ ಸಹಾಯಧನವನ್ನು ಸರ್ಕಾರ ಬಿಡುಗಡೆ ಮಾಡಿದೆ.

Govt released 1 crore Subsidy to promote Kambala
ಕಂಬಳಕ್ಕೆ ಸಹಾಯಧನ ಬಿಡುಗಡೆ
author img

By

Published : Mar 18, 2021, 5:32 PM IST

ಬೆಂಗಳೂರು: ಕರಾವಳಿಯ ಜಾನಪದ ಕ್ರೀಡೆ ಕಂಬಳವನ್ನು ಪ್ರೋತ್ಸಾಹಿಸಲು ಸಹಾಯಧನ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕರಾವಳಿಯ ಜಾನಪದ ಕ್ರೀಡೆಯಾದ ಪ್ರತೀ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ನೀಡಲು ಸರ್ಕಾರ ಆದೇಶ ನೀಡಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ.ಗಳಂತೆ 50 ಲಕ್ಷ ರೂ. ಮತ್ತು ಉಡುಪಿ ಜಿಲ್ಲೆಯಲ್ಲಿ 10 ಕಂಬಳಗಳನ್ನು ನಡೆಸಲು 5 ಲಕ್ಷ ರೂ.ಗಳಂತೆ 10 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಕಂಬಳಗಳಿಗೆ ಸಹಾಯಧನ ನೀಡಲು ಆದೇಶಿಸಲಾಗಿದೆ.

ಓದಿ : ಮಲೆನಾಡು ಭಾಗದಲ್ಲಿ ನೆಟ್​ವರ್ಕ್​ ಸಮಸ್ಯೆ ಇದೆ, ಹೆಚ್ಚಿನ ಟವರ್ ಹಾಕಿ: ಹರತಾಳು ಹಾಲಪ್ಪ ಆಗ್ರಹ

ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್​ ಕೆಲ ದಿನಗಳ ಹಿಂದೆ ಪ್ರವಾಸೋದ್ಯಮ ಇಲಾಖೆಯ ಪ್ರಗತಿ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಎರಡು ದಿನಗಳ ಕಾಲ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಂಬಳ ವೀಕ್ಷಿಸಿ ಸ್ಥಳದಲ್ಲಿಯೇ ಪ್ರತಿ ಕಂಬಳಕ್ಕೆ 5 ಲಕ್ಷ ರೂ. ಸಹಾಯಧನ ಘೋಷಣೆ ಮಾಡಿದ್ದರು. ಈ ಘೋಷಣೆಯ ಹಿನ್ನೆಲೆ ರಾಜ್ಯ ಸರ್ಕಾರ ಸಹಾಯಧನ ಬಿಡುಗಡೆ ಮಾಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.