ETV Bharat / state

ಆಟೋರಿಕ್ಷಾ, ಟ್ಯಾಕ್ಸಿ ಚಾಲಕರಿಗೆ ಘೋಷಣೆ ಮಾಡಿದ್ದ 40 ಕೋಟಿ ರೂ. ಬಿಡುಗಡೆ - Govt released money for autorickshaw drivers

ರೈತರು, ಉದ್ಯಮಿಗಳಿಗೆ ಆರ್ಥಿಕ ನೆರವು ನೀಡಿದಂತೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 5 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದರು. ಈ ಯೋಜನೆಗಾಗಿ 40 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

govt-released-money-for-autorickshaw-drivers
40 ಕೋಟಿ ರೂ. ಬಿಡುಗಡೆ
author img

By

Published : Jun 11, 2020, 3:50 AM IST

ಬೆಂಗಳೂರು : ಲಾಕ್​ಡೌನ್ ಸಂದರ್ಭದಲ್ಲಿ ಆದಾಯವಿಲ್ಲದೆ ಸಂಕಷ್ಟ ಅನುಭವಿಸಿದ್ದ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಘೋಷಣೆ ಮಾಡಿದ್ದ 40 ಕೋಟಿ ರೂ. ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ.

ರೈತರು, ಉದ್ಯಮಿಗಳಿಗೆ ಆರ್ಥಿಕ ನೆರವು ನೀಡಿದಂತೆ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಒಂದು ಬಾರಿ ಪರಿಹಾರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ 5 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದರು. ಒಂದು ಲಕ್ಷ ಟ್ಯಾಕ್ಸಿ ಮತ್ತು ಆಟೋ ರಿಕ್ಷಾ ಚಾಲಕರು ನೋಂದಣಿ ಮಾಡಿಕೊಂಡಿದ್ದು, ಇನ್ನೂ 6.75 ಲಕ್ಷ ಆಟೋ ಮತ್ತು ಟ್ಯಾಕ್ಸಿ ಚಾಲಕರು ನೊಂದಾಯಿಸುವ ನಿರೀಕ್ಷೆ ಇದೆ. ಈ ಯೋಜನೆಗಾಗಿ 40 ಕೋಟಿ ರೂ. ಬಿಡುಗಡೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಕಾರ್ಮಿಕ ಇಲಾಖೆ ಮತ್ತು ಪರಿಶಿಷ್ಟ ಜಾತಿ ಮತ್ತು ಪಂಗಡ ಅನುದಾನದಲ್ಲಿ ಹಣ ಬಿಡುಗಡೆ ಮಾಡಿದೆ. ಹೆಚ್ಚುವರಿ ಅನುದಾನದ ಅಗತ್ಯ ಇದ್ದರೆ ಸೂಕ್ತ ಕ್ರಮ ಕೈಗೊಂಡು ಬಿಡುಗಡೆ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕೆಲವು ಷರತ್ತುಗಳನ್ನು ಸಡಿಲಗೊಳಿಸಿ ಸಂಕಷ್ಟದಲ್ಲಿ ಸಿಲುಕಿರುವ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರಿಗೆ ಪರಿಹಾರ ನೀಡಲು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದರು. ಅದರಂತೆ ಹಣ ಬಿಡುಗಡೆ ಮಾಡಲಾಗಿದ್ದು, ಹಂತಹಂತವಾಗಿ ಆಟೋ ರಿಕ್ಷಾ ಮತ್ತು ಟ್ಯಾಕ್ಸಿ ಚಾಲಕರ ಖಾತೆಗೆ ಹಣ ಜಮೆಯಾಗಲಿದೆ ಎಂದು ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.