ETV Bharat / state

ದೀಪಾವಳಿಯಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶ: ಸರ್ಕಾರದ ಮಾರ್ಗಸೂಚಿಯಲ್ಲಿ ಏನೇನಿದೆ?

author img

By

Published : Oct 30, 2021, 5:19 PM IST

ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರ ದೀಪಾವಳಿ ಹಬ್ಬಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಬಾರಿ ಹಸಿರು ಪಟಾಕಿಗಳ ಬಳಕೆಗೆ ಮಾತ್ರ ಅವಕಾಶ ಕಲ್ಪಿಸಿದೆ.

vidhana soudha
ವಿಧಾನಸೌಧ

ಬೆಂಗಳೂರು: ರಾಜ್ಯದ ಜನತೆಯ ಹಿತದೃಷ್ಠಿಯಿಂದ ಮತ್ತು ಕೋವಿಡ್​ ಸೋಂಕು ಹರಡುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ದೀಪಾವಳಿ ಹಬ್ಬವನ್ನು ಸರಳವಾಗಿ ಆಚರಿಸಲು ನಿರ್ಧರಿಸಿದೆ.

ದೀಪಾವಳಿ ಹಬ್ಬದ ಆಚರಣೆ ಸಂದರ್ಭದಲ್ಲಿ ಕೋವಿಡ್​​​ ಸೋಂಕು ಹರಡುವಿಕೆ ತಡೆಗಟ್ಟಲು ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ. ಈ ಆದೇಶ/ಮಾರ್ಗಸೂಚಿಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಇತರ ಇಲಾಖಾ ಮುಖ್ಯಸ್ಥರುಗಳು ಮತ್ತು ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕೆಂದು ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್ ಆದೇಶದಲ್ಲಿ ಸೂಚಿಸಿದ್ದಾರೆ.

ದೀಪಾವಳಿ ಹಬ್ಬದ ಆಚರಣೆ ಸಂಬಂಧ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳು:

  • ಹಸಿರು ಪಟಾಕಿಗಳನ್ನು ಬಿಟ್ಟು ಉಳಿದ ಯಾವುದೇ ಇತರೆ ಪಟಾಕಿಗಳನ್ನು ಮಾರಾಟ ಮಾಡಬಾರದು ಮತ್ತು ಹಚ್ಚಬಾರದು.
  • ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿಯನ್ನು ಪಡೆದ ಮಾರಾಟಗಾರರು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಬೇಕು.
  • ನವೆಂಬರ್ 1 ರಿಂದ 10 ರವರೆಗೆ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ
  • ಪರವಾನಿಗೆದಾರರು ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನ ಮತ್ತು ಸ್ಥಳದಲ್ಲಿ ಮಾತ್ರ ತಾತ್ಕಾಲಿಕ ಹಸಿರು ಪಟಾಕಿ ಅಂಗಡಿಗಳನ್ನು ಇಡಬೇಕು. ಬೇರೆ ಸ್ಥಳದಲ್ಲಿ ಮತ್ತು ದಿನಾಂಕಗಳಲ್ಲಿ ಅಂಗಡಿಯನ್ನು ತೆರೆಯಬಾರದು.
  • ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪುದೇಶಗಳಲ್ಲಿ ಪಟಾಕಿ ಮಳಿಗೆಗಳನ್ನು ಸ್ಥಾಪಿಸಲು ಸಂಬಂಧಿಸಿದ ಇಲಾಖೆ/ ಪ್ರಾಧಿಕಾರಗಳು ಅನುಮತಿ ನೀಡಬೇಕು.
  • ಮಳಿಗೆಗಳಲ್ಲಿ ಎರಡು ಕಡೆಯಿಂದ ಸರಾಗವಾಗಿ ಗಾಳಿಯಾಡುವಂತಿರಬೇಕು. ಒಂದು ಮಾರಾಟ ಮಳಿಗೆಯಿಂದ ಮತ್ತೊಂದು ಮಾರಾಟ ಮಳಿಗೆಗೆ 6 ಮೀಟರ್ ಅಂತರವಿರಬೇಕು.
  • ಪ್ರತಿಯೊಂದು ಮಳಿಗೆಗಳಲ್ಲಿ ಸಂಬಂಧಪಟ್ಟ ಇಲಾಖೆ/ಪ್ರಾಧಿಕಾರದಿಂದ ನೀಡಿರುವ ಪರವಾನಗಿ ಪತಿಯನ್ನು ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದು. ಪರವಾನಗಿ ಪತ್ರವನ್ನು ಪಡೆದಂತವರು ಕಡ್ಡಾಯವಾಗಿ ಮಳಿಗೆಗಳಲ್ಲಿ ಹಾಜರಿರಬೇಕು.
  • ಹಸಿರು ಪಟಾಕಿಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ 6 ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಸಾರ್ವಜನಿಕರು ಕಡ್ಡಾಯವಾಗಿ ಮುಖಗವಸು ಧರಿಸಿರಬೇಕು.
  • ಹಸಿರು ಪಟಾಕಿ ಖರೀದಿಯ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆಯಾಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳಬೇಕು.
  • ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರ ಇಲಾಖೆ/ಕಾರ್ಪೋರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸಬೇಕು.
  • ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.