ಬೆಂಗಳೂರು: ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ನೇಮಕ ಮಾಡಿಕೊಂಡ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಹಾಲಿ ಇರುವ 7,500 ರೂ.ನಿಂದ 10,000 ರೂ.ಗೆ ಹೆಚ್ಚಿಸಲಾಗಿದೆ. ಸರ್ಕಾರಿ ಪ್ರೌಢ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಹಾಲಿ ಇರುವ 8,000 ರೂ.ನಿಂದ 10,500 ರೂ.ಗೆ ಪರಿಷ್ಕರಿಸಲಾಗಿದೆ. ಆ ಮೂಲಕ ಅತಿಥಿ ಶಿಕ್ಷಕರ ಗೌರವ ಸಂಭಾವನೆಯನ್ನು ಒಟ್ಟು 2,500 ರೂ.ನಷ್ಟು ಸರ್ಕಾರ ಹೆಚ್ಚಿಸಿದೆ.
ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವ ಧನವನ್ನು ಕಳೆದ ಆರು ವರ್ಷಗಳಿಂದ ಪರಿಷ್ಕರಿಸಿರಲಿಲ್ಲ. ಅತಿಥಿ ಶಿಕ್ಷಕರುಗಳಿಗೆ ನೀಡಲಾಗುವ ಗೌರವ ಸಂಭಾವನೆಯನ್ನು ಪರಿಷ್ಕರಿಸುವ ಅವಶ್ಯಕತೆ ಇದ್ದು, ಪ್ರಾಥಮಿಕ ಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ಮಾಸಿಕ 12,000 ರೂ. ಮತ್ತು ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ಮಾಸಿಕ 15,000 ರೂ. ಪರಿಷ್ಕರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಸರ್ಕಾರವನ್ನು ಕೋರಿದ್ದರು.
ಇದನ್ನೂ ಓದಿ: 2022-23 ಶೈಕ್ಷಣಿಕ ಸಾಲಿಗೆ ಹೆಚ್ಚುವರಿ 5,000 ಅತಿಥಿ ಶಿಕ್ಷಕರನ್ನ ನೇಮಿಸಲು ಸರ್ಕಾರ ಆದೇಶ