ETV Bharat / state

ಅಕ್ಕಮಹಾದೇವಿ ವಿವಿ ವಿಚಾರ: ಸರ್ಕಾರದ ವಿರುದ್ಧ ಹೋರಾಟಕ್ಕೆ ಕೈ ನಾಯಕರಿಗೆ ಮನವಿ - ಅಕ್ಕಮಹಾದೇವಿ ವಿಶ್ವ ವಿದ್ಯಾಲಯವನ್ನು ರದ್ದುಗೊಳಿಸಲು ಮುಂದಾದ ಸರ್ಕಾರ

ಜನರಿಗೆ ತಿಳಿಯದ ರೀತಿ ಸರ್ಕಾರ ನಡೆಸುತ್ತಿರುವ ಹುನ್ನಾರವನ್ನು ಬಯಲಿಗೆಳೆದು ಹೋರಾಟಕ್ಕೆ ಮುಂದಾಗಬೇಕು. ಸದನದ ಒಳಗೆ ಹಾಗೂ ಹೊರಗೆ ಈ ವಿಚಾರವನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಪಕ್ಷ ಹೋರಾಟಕ್ಕೆ ಮುಂದಾಗಬೇಕು ಎಂದು ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.

ವಿಜಯಪುರದ ಅಕ್ಕಮಹಾದೇವಿ ವಿಶ್ವ ವಿದ್ಯಾಲಯವನ್ನು ರದ್ದು

author img

By

Published : Jan 22, 2022, 10:59 PM IST

ಬೆಂಗಳೂರು: ವಿಜಯಪುರದ ಅಕ್ಕಮಹಾದೇವಿ ವಿಶ್ವ ವಿದ್ಯಾಲಯವನ್ನು ರದ್ದುಗೊಳಿಸುವ ನಿರ್ಧಾರ ಕೈ ಬಿಡಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಪದಾಧಿಕಾರಿಗಳು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಮಾಜಿ ಸಚಿವೆ ಲೀಲಾದೇವಿ ಆರ್. ಪ್ರಸಾದ್, ವಿವಿಯ ವಿಶ್ರಾಂತ ಉಪ ಕುಲಪತಿ ಡಾ. ಸಬೀಹಾ, ವಸುಂಧರಾ ಭೂಪತಿ, ಅಕೈ ಪದ್ಮಶಾಲಿ ಮತ್ತಿತರರು ಈ ಭೇಟಿ ಸಂದರ್ಭ ಇದ್ದರು.

ಅಕ್ಕಮಹಾದೇವಿ ವಿಶ್ವವಿದ್ಯಾಲಯ ಕುರಿತು ಮಾಹಿತಿ ನೀಡಿದ ಅವರು, ವಿಜಯಪುರದಲ್ಲಿ ಕಳೆದ 2 ದಶಕಗಳಿಂದ ನಾಡು ಹೆಮ್ಮೆ ಪಡುವಂತಹ ಕೆಲಸ ಮಾಡುತ್ತಿರುವ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯವನ್ನು ಈಗ ಏಕಾಏಕಿಯಾಗಿ ಕೊನೆಗಾಣಿಸುವ ಸಂಚು ಆಘಾತಕಾರಿಯಾಗಿದೆ. ರಾಜ್ಯದಾದ್ಯಂತ ಎಲ್ಲ ಸರ್ಕಾರಿ ಮಹಿಳಾ ಪದವಿ ಕಾಲೇಜುಗಳನ್ನು ತನ್ನ ವ್ಯಾಪ್ತಿಯಲ್ಲಿ ಹೊಂದಿರುವ ನಾಡಿನ ಏಕೈಕ ಮಹಿಳಾ ವಿಶ್ವವಿದ್ಯಾಲಯವನ್ನು ಈಗ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ಕೆಳಗೆ ಬರುವ ಎಲ್ಲ ಪದವಿ ಕಾಲೇಜುಗಳನ್ನು ಒಳಗೊಳ್ಳುವಂತಹ ವಿಶ್ವವಿದ್ಯಾಲಯದ ಮಟ್ಟಕ್ಕೆ ಇಳಿಸಿ, ಅದನ್ನು ಸಹಶಿಕ್ಷಣ ವಿಶ್ವವಿದ್ಯಾಲಯವನ್ನಾಗಿಸುವ ಹುನ್ನಾರ ನಡೆದಿದೆ. ಪ್ರತಿಪಕ್ಷ ನಾಯಕರಾಗಿ ತಾವು ಈ ವಿಚಾರವನ್ನು ಕೈಗೆತ್ತಿಕೊಳ್ಳಬೇಕು ಎಂದು ಮನವಿ ಮಾಡಿದರು.

ಜನರಿಗೆ ತಿಳಿಯದ ರೀತಿ ಸರ್ಕಾರ ನಡೆಸುತ್ತಿರುವ ಹುನ್ನಾರವನ್ನು ಬಯಲಿಗೆಳೆದು ಹೋರಾಟಕ್ಕೆ ಮುಂದಾಗಬೇಕು. ಸದನದ ಒಳಗೆ ಹಾಗೂ ಹೊರಗೆ ಈ ವಿಚಾರವನ್ನು ಕೈಗೆತ್ತಿಕೊಂಡು ಕಾಂಗ್ರೆಸ್ ಪಕ್ಷ ಹೋರಾಟಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಮಹಿಳಾ ವಿವಿಯ ಪ್ರಸಕ್ತ ಪರಿಸ್ಥಿತಿ ಹೇಗಿದೆಯೆಂದರೆ ಅಲ್ಲಿ ಅಧ್ಯಯನ ಮಾಡುತ್ತಿರುವ ಶೇಕಡಾ 75 ರಷ್ಟು ವಿದ್ಯಾರ್ಥಿನಿಯರ ಹಿನ್ನೆಲೆಯನ್ನು ಗಮನಿಸಿದರೆ ಮಹಿಳಾ ವಿಶ್ವವಿದ್ಯಾಲಯದ ಅವಶ್ಯಕತೆ ಮನದಟ್ಟಾಗುತ್ತದೆ. ಅವರಲ್ಲಿ ಒಂಟಿ ಮಹಿಳೆಯರು - ವಿಚ್ಛೇದಿತರು, ವಿಧವೆಯರು, ಅಲ್ಪಸಂಖ್ಯಾತ ಹೆಣ್ಣುಮಕ್ಕಳೇ ಹೆಚ್ಚಿನವರು. ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಸಹ ಮಹಿಳಾ ವಿದ್ಯಾಲಯಗಳಿದ್ದರೆ ಮಾತ್ರ ಇಂತಹ ಹೆಣ್ಣು ಮಕ್ಕಳು ವಿದ್ಯಾಭ್ಯಾಸ ಪಡೆದುಕೊಳ್ಳುವುದು ಸಾಧ್ಯವೆನ್ನುವಂತಹ ಪರಿಸ್ಥಿತಿ ಇದೆ ಎಂದು ವಿವರಿಸಿದ್ದಾರೆ.

ವಾಸ್ತವ ಪರಿಸ್ಥಿತಿ ಹೀಗಿರುವಾಗ, ಬಹಳ ಕಷ್ಟದಿಂದ ಅಸ್ತಿತ್ವಕ್ಕೆ ಬಂದಿರುವ ವಿಶ್ವವಿದ್ಯಾಲಯವನ್ನು ಮತ್ತಷ್ಟು ಚೆನ್ನಾಗಿ ಕೆಲಸ ಮಾಡುವಂತೆ ಎಲ್ಲ ರೀತಿಯ ಪ್ರೋತ್ಸಾಹ, ಧನಸಹಾಯ ಕೊಡುವುದು ಬಿಟ್ಟು ಅದನ್ನು ಕೊನೆಗಾಣಿಸಲು ಹೊರಟಿರುವುದು ಸರ್ಕಾರದ ಮಹಿಳಾ ವಿರೋಧ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು ಬೇಸರ ಹೊರಹಾಕಿದರು.

ಇನ್ನು ಸಿದ್ದರಾಮಯ್ಯನವರು ಉನ್ನತ ಶಿಕ್ಷಣ ಸಚಿವರಾದ ಅಶ್ವತ್ಥ ನಾರಾಯಣರನ್ನು ತಕ್ಷಣವೇ ಸಂಪರ್ಕಿಸಿದರು. ಅವರು ಈ ವಿಷಯದ ಕುರಿತು ಸರಿಯಾದ ಮಾತುಕತೆಯಾಗದ ಹೊರತು ಖಂಡಿತವಾಗಿಯೂ ಮುಂದುವರೆಯುವುದಿಲ್ಲ ಎಂದು ಭರವಸೆ ನೀಡಿದ್ದಾರೆ.

ಈ ಸಂಬಂಧ ಸಿದ್ದರಾಮಯ್ಯ ಮಾತನಾಡಿ, ಇಷ್ಟಕ್ಕೆ ಕೈ ಕಟ್ಟಿ ಕೂರುವ ಹಾಗಿಲ್ಲ, ಎಚ್ಚರ ಕಾಯ್ದುಕೊಳ್ಳಬೇಕಾಗಿದೆ. ಈ ವಿಚಾರವನ್ನು ನಾವು ಆದ್ಯತೆಯ ರೂಪದಲ್ಲಿ ಪರಿಗಣಿಸುತ್ತೇವೆ. ಯಾರಿಗೂ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.