ETV Bharat / state

ಏಪ್ರಿಲ್ 7ರಿಂದ ಸಾರಿಗೆ ಮುಷ್ಕರಕ್ಕೆ ಕರೆ: ಒಕ್ಕೂಟದ ಮುಖಂಡರಿಂದ ರಾಜ್ಯ ಪ್ರವಾಸ - Leaders on a trip to the state in 3 teams

ಏಪ್ರಿಲ್​ ಏಳರಂದು ಸಾರಿಗೆ ಮುಷ್ಕರಕ್ಕೆ ನೌಕರರು ಕರೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಮಾಡಿ, ಮುಷ್ಕರಕ್ಕೆ ನೌಕರರ ಬೆಂಬಲ ಕೋರುತ್ತಿದ್ದಾರೆ.

Calling for a transportation strike
ಏ.7ರಿಂದ ಸಾರಿಗೆ ಮುಷ್ಕರಕ್ಕೆ ಕರೆ
author img

By

Published : Mar 29, 2021, 3:46 PM IST

ಬೆಂಗಳೂರು: ಸಾರಿಗೆ ಮುಷ್ಕರಕ್ಕೆ ಕರೆ ನೀಡಲಾಗಿದ್ದು ಸಾರಿಗೆ ನೌಕರರ ಒಕ್ಕೂಟದ ಮುಖಂಡರು ಮೂರು ತಂಡಗಳಲ್ಲಿ ರಾಜ್ಯ ಪ್ರವಾಸ ಕೈಗೊಂಡು ಸಾರಿಗೆ ನೌಕರರನ್ನು ಮುಷ್ಕರಕ್ಕೆ ಅಣಿಗೊಳಿಸುವ ಕಾರ್ಯ ಚುರುಕುಗೊಳಿಸಿದ್ದಾರೆ.

ಈ ಮೂರು ತಂಡಗಳು ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಹುಬ್ಬಳ್ಳಿ-ಧಾರವಾಡ, ಹಾವೇರಿ, ಕಲಬುರಗಿ ಹಾಗು ಬೀದರ್ ಸೇರಿ ನಾಲ್ಕು ಸಾರಿಗೆ ನಿಗಮಗಳ ಎಲ್ಲಾ ಡಿಪೋಗಳಿಗೆ ಭೇಟಿ ನೀಡಿ, ಮುಷ್ಕರಕ್ಕೆ ಮನವೊಲಿಸುವುದರ ಜೊತೆಗೆ ಉಳಿದ ಬೇಡಿಕೆಗಳ ಬಗ್ಗೆ ಒಗ್ಗಟ್ಟಾಗಿರಲು ನೌಕರರ ಬೆಂಬಲ ಕೋರುತ್ತಿದ್ದಾರೆ.

ಇದನ್ನೂ ಓದಿ: ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕಿಳಿದರೆ ಖಾಸಗಿ ಬಸ್​ಗಳಿಗೆ ಪರ್ಮಿಟ್​

ರಾಜ್ಯ ಸರ್ಕಾರ ಸಾರಿಗೆ ನೌಕರರು ಮುಷ್ಕರ ಮಾಡಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೌಲಭ್ಯ ಕಲ್ಪಿಸಲು ನಿರ್ಧರಿಸಿದೆ. ಈ ಸಂಬಂಧ ಆಸಕ್ತ ಖಾಸಗಿ ವಾಹನಗಳು ಸಾರಿಗೆ ಪ್ರಾಧಿಕಾರಗಳಿಂದ ತಾತ್ಕಾಲಿಕ ರಹದಾರಿ ಪಡೆಯಲು ಅರ್ಜಿ ಸಲ್ಲಿಸುವಂತೆ ಸೂಚಿಸಿದೆ. ಕಳೆದ ಡಿಸೆಂಬರ್‌ನಲ್ಲಿ ಹತ್ತು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಡೆಸಿದ ಮುಷ್ಕರದ ವೇಳೆ ನಡೆದ ಸಂಧಾನ ಸಭೆಯಲ್ಲಿ ಸರ್ಕಾರಿ ನೌಕರರಾಗಿ ಪರಿಗಣಿಸುವ ಬೇಡಿಕೆ ಹೊರತುಪಡಿಸಿ ಉಳಿದ ಬೇಡಿಕೆಗಕನ್ನು ಈಡೇರಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.