ETV Bharat / state

ಕೆಲವೇ ದಿನಗಳಲ್ಲಿ ರೈತರ ಖಾತೆ​​​ಗೆ ಪರಿಹಾರ ಹಣ ಜಮೆ: ಸಚಿವ ಡಾ.ನಾರಾಯಣಗೌಡ - ಬೆಳೆ ಪರಿಹಾರ ಹಣ

ಕೊರೊನಾ ಲಾಕ್​ಡೌನ್​ನಿಂದ ಸಾಕಷ್ಟು ಬೆಳೆ ನಷ್ಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಪರಿಹಾರ ನೀಡಲು ಸೂಚನೆ ನೀಡಿದ್ದಾರೆ. ಆದಷ್ಟು ಬೇಗ ರೈತರ ಖಾತೆ​ಗೆ ಹಣವನ್ನು ಜಮಾ ಮಾಡಲಾಗುವುದು ಎಂದು ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣಗೌಡ ತಿಳಿಸಿದರು.

Narayana gowda
ಡಾ.ನಾರಾಯಣಗೌಡ
author img

By

Published : May 28, 2020, 6:09 PM IST

ಬೆಂಗಳೂರು: ಕೆಲವೇ ದಿನಗಳಲ್ಲಿ ರೈತರ ಖಾತೆ​​ಗೆ ಪರಿಹಾರ ಹಣ ಜಮಾ ಆಗಲಿದೆ. ಹೂವು, ಹಣ್ಣು, ತರಕಾರಿ ಬೆಳೆಗಾರರ ಮಾಹಿತಿಯನ್ನು ಕಲೆ ಹಾಕಲಾಗಿದೆ ಎಂದು ತೋಟಗಾರಿಕೆ ಮತ್ತು ರೇಷ್ಮೆ ಸಚಿವ ಡಾ. ನಾರಾಯಣಗೌಡ ತಿಳಿಸಿದರು.

ವಿಕಾಸಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ರೈತರ ಬೆಳೆಗಳ ಕುರಿತು ಸಂಪೂರ್ಣ ವಿವರವನ್ನು ಸಿದ್ಧಪಡಿಸಿ ಅವರವರ ಖಾತೆಗೆ ಬೆಳೆ ಪರಿಹಾರ ಹಣವನ್ನು ವರ್ಗಾಯಿಸುತ್ತೇವೆ ಎಂದು ರೈತರ ಬೆಳೆ ಪರಿಹಾರದ ಬಗ್ಗೆ ಮಾಹಿತಿ ನೀಡಿದರು.

ಕೊರೊನಾ ಹಿನ್ನೆಲೆಯಲ್ಲಿ ಲಾಕ್​​ಡೌನ್ ಜಾರಿಯಾಗಿ ಸಾಕಷ್ಟು ಬೆಳೆ ನಷ್ಟ ಸಂಭವಿಸಿದೆ. ಹೂವಿನ ಬೆಳೆಗಾರರಿಗೆ ದೊಡ್ಡ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಯಾವುದೇ ರೀತಿಯ ಮಾರುಕಟ್ಟೆ ಒದಗಿಸುವ ಅವಕಾಶ ಇರಲಿಲ್ಲ. ಹೀಗಾಗಿ ಹೂವು ಬೆಳೆಗಾರರಿಗೆ ಸರ್ಕಾರ ಪರಿಹಾರ ಘೋಷಣೆ ಮಾಡಿದ್ದು, ಒಟ್ಟು 12,735 ಹೆಕ್ಟೇರ್ ಪ್ರದೇಶದಲ್ಲಿ ಹೂ ಬೆಳೆ ಹಾನಿಯಾಗಿದೆ. ಪ್ರತಿ ಹೆಕ್ಟೇರ್​​ಗೆ ತಲಾ 25 ಸಾವಿರ ರೂ. ನೀಡಲು 31.83 ಕೋಟಿ ರೂಪಾಯಿ ಸರ್ಕಾರ ಘೋಷಿಸಿದೆ ಎಂದು ಹೇಳಿದರು.

ಅಲ್ಲದೆ ಹಣ್ಣು, ತರಕಾರಿ ಬೆಳೆದ ರೈತರಿಗೂ ನಷ್ಟ ಉಂಟಾಗಿ ಹೊರ ರಾಜ್ಯ ಹಾಗೂ ದೇಶಕ್ಕೆ ರಫ್ತು ಸ್ಥಗಿತವಾಗಿತ್ತು. ಸಂಸ್ಕರಣಾ ಘಟಕ, ವೈನ್, ಡಿಸ್ಟಿಲರಿಸ್ ಘಟಕ ಎಲ್ಲವೂ ಬಂದ್ ಆಗಿತ್ತು. ಹೀಗಾಗಿ ಉತ್ಪಾದನೆ ಹೆಚ್ಚಾಗಿ ಮಾರಾಟ ತೀರಾ ಕಡಿಮೆಯಾಗಿತ್ತು. ಇದರಿಂದ ರೈತ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬಳಿ ಚರ್ಚೆ ನಡೆಸಲಾಗಿದ್ದು, ನಮ್ಮ ಮನವಿಗೆ ಸಿಎಂ ಸ್ಪಂದಿಸಿ ರೈತರಿಗೆ ಪರಿಹಾರ ನೀಡಲು ಸೂಚಿಸಿದ್ದಾರೆ ಎಂದರು.

ಸುಮಾರು 50,083 ಹೆಕ್ಟೇರ್​​​ನಲ್ಲಿ ತರಕಾರಿ, 41054 ಹೆಕ್ಟೇರ್​​ನಲ್ಲಿ ಹಣ್ಣು ಬೆಳೆ ಬೆಳೆಯಲಾಗಿದ್ದು, ಪ್ರತಿ ಹೆಕ್ಟೇರ್​​ಗೆ 15 ಸಾವಿರ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಇದಕ್ಕಾಗಿ ಸರ್ಕಾರ 137 ಕೋಟಿ ರೂ. ಘೋಷಿಸಿದೆ.

ಸಚಿವ ಡಾ. ನಾರಾಯಣಗೌಡ ಸುದ್ದಿಗೋಷ್ಠಿ

ಈಗಾಗಲೆ ಬೆಳೆ ಸಮೀಕ್ಷೆ ವರದಿ ಇಲಾಖೆಯಲ್ಲಿ ಲಭ್ಯವಿದ್ದು, ಪರಿಹಾರ ನೀಡುವ ಪ್ರಕ್ರಿಯೆ ನಡೆಯುತ್ತಿದೆ. ಬೆಳೆ ನಷ್ಟ ಆಗಿರುವ ಯಾವುದೆ ರೈತನ ಹೆಸರು ಪಟ್ಟಿಯಿಂದ ಕೈ ತಪ್ಪಿದ್ದಲ್ಲಿ ಪಟ್ಟಿಗೆ ಸೇರಿಸಲು ಅವಕಾಶ ಇದೆ. ಸಂಪೂರ್ಣ ಮಾಹಿತಿ ಕಲೆ ಹಾಕಿ ಅತೀ ಶೀಘ್ರದಲ್ಲಿ ಹಣವನ್ನು ನೇರವಾಗಿ ರೈತರ ಖಾತೆಗೆ ಹಾಕುತ್ತೇವೆ. ಇನ್ನೂ ಪರಿಹಾರದ ಹಣ ಬಂದಿಲ್ಲ ಎಂದು ರೈತರು ಆತಂಕಗೊಳ್ಳೋದು ಬೇಡ. ಕೆಲವೇ ದಿನಗಳಲ್ಲಿ ರೈತರ ಖಾತೆಗೆ ಹಣ ಬರಲಿದೆ ಎಂದು ಮಾಹಿತಿ ನೀಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.