ETV Bharat / state

ಮನೆ ಬಾಗಿಲಲ್ಲೇ ಪಾಲಿಟೆಕ್ನಿಕ್ ಕೋರ್ಸ್​ಗೆ ದಾಖಲಾದ ವಿದ್ಯಾರ್ಥಿಗೆ ಪೂರ್ಣ ಉಚಿತ ಶಿಕ್ಷಣ : ಅಶ್ವತ್ಥ್ ನಾರಾಯಣ

ಮೌನೇಶ್ ಬಹಳ ಬಡತನದಲ್ಲಿದ್ದಾನೆ. ಅವರು ಒಂದು ಕೊಳಗೇರಿಯಲ್ಲಿ ವಾಸ ಮಾಡುತ್ತಿದ್ದು, ಅಲ್ಲಿ ಸುಮಾರು 150 ಮನೆಗಳಿವೆ. ನಾನು, ನಮ್ಮ ಬೋಧಕರು ಮತ್ತು ಸಿಬ್ಬಂದಿ ಜೊತೆ ತೆರಳಿ ಅಲ್ಲಿನ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ. ನಮಗೆ ಸರ್ಕಾರದಿಂದಲೂ ಉತ್ತಮ ಪ್ರೋತ್ಸಾಹವಿದೆ. ಪಾಲಿಟೆಕ್ನಿಕ್‌ನಲ್ಲಿ ಕಲಿಯಲು ಸಾಕಷ್ಟು ಸೌಲಭ್ಯಗಳಿವೆ..

vijayanagar student Mounesh
ಬಡ ವಿದ್ಯಾರ್ಥಿ ಮೌನೇಶ್‌ಗೆ ಉಚಿತ ಶಿಕ್ಷಣ
author img

By

Published : Sep 4, 2021, 8:47 PM IST

ಬೆಂಗಳೂರು : ಪ್ರತಿಭೆಯಿಂದಲೇ ತನ್ನ ಮನೆ ಬಾಗಿಲಲ್ಲೆ ಪಾಲಿಟೆಕ್ನಿಕ್​ಗೆ ಪ್ರವೇಶ ಪಡೆದ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕುಡುತಿನಿ ಗ್ರಾಮದ ಪ್ರತಿಭಾವಂತ ಬಡ ವಿದ್ಯಾರ್ಥಿ ಎಂ.ಮೌನೇಶ್‌ಗೆ ಶಿಕ್ಷಣವನ್ನು ಉಚಿತವಾಗಿ ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಭರವಸೆ ನೀಡಿದ್ದಾರೆ.

ಇಂದು ಸಚಿವರು ಮೌನೇಶ್ ಮತ್ತವರ ಪೋಷಕರಿಗೆ ಕರೆ ಮಾಡಿ ಮಾತನಾಡಿ, ಹತ್ತನೇ ತರಗತಿಯಲ್ಲಿ ಶೇ.90ರಷ್ಟು ಅಂಕ ಪಡೆದು ತೇರ್ಗಡೆಯಾದ ವಿದ್ಯಾರ್ಥಿಯನ್ನು ಶ್ಲಾಘಿಸಿದರು. ಮುಂದಿನ ಮೂರು ವರ್ಷಗಳ ಡಿಪ್ಲೊಮಾ ವಿದ್ಯಾಭ್ಯಾಸವನ್ನು ಸರ್ಕಾರ ಸಂಪೂರ್ಣ ಉಚಿತವಾಗಿ ನೀಡಲಿದೆ ಎಂದರು.

ಇದೇ ವೇಳೆ ಮೌನೇಶ್ ಪೋಷಕರ ಜೊತೆಯೂ ಮಾತನಾಡಿ, ನಿಮ್ಮ ಪುತ್ರನಿಗೆ ಉಚಿತ ಶಿಕ್ಷಣ ನೀಡಲಾಗುವುದು. ಯಾವುದೇ ಚಿಂತೆ ನಿಮಗೆ ಬೇಡ. ಎಲ್ಲವನ್ನೂ ಸರ್ಕಾರವೇ ನೋಡಿಕೊಳ್ಳಲಿದೆ. ತದ ನಂತರ ಉದ್ಯೋಗ ಅಥವಾ ಉನ್ನತ ಶಿಕ್ಷಣಕ್ಕೆ ತೆರಳಬೇಕಾದರೂ ಸರ್ಕಾರ ಸಹಕಾರ ನೀಡುತ್ತದೆ ಎಂದು ಹೇಳಿದರು.

ಪ್ರಾಂಶುಪಾಲರ ಕಾರ್ಯಕ್ಕೆ ಮೆಚ್ಚುಗೆ : ವಿದ್ಯಾರ್ಥಿಯ ಮನೆ ಬಾಗಿಲಿಗೆ ತೆರಳಿ ಪ್ರವೇಶಾತಿ ನೀಡಿದ ಕೂಡ್ಲಿಗಿಯ ಸರ್ಕಾರಿ ಪಾಲಿಟೆಕ್ನಿಕ್‌ ಪ್ರಾಂಶುಪಾಲರು, ಬೋಧಕ ಸಿಬ್ಬಂದಿಯನ್ನು ಸಚಿವ ಅಶ್ವತ್ಥ್ ನಾರಾಯಣ ಶ್ಲಾಘಿಸಿದರು. ಪ್ರಾಂಶುಪಾಲ ಎಸ್. ಮಲ್ಲಪ್ಪ ಅವರಿಗೆ ಕರೆ ಮಾಡಿ ಮಾತನಾಡಿದ ಸಚಿವ, ನೀವು ಬಹಳ ಒಳ್ಳೆಯ ಕೆಲಸ ಮಾಡಿದ್ದೀರಿ.

ಆ ವಿದ್ಯಾರ್ಥಿಯ ಎಲ್ಲಾ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ. ನಿಮ್ಮದೇ ವೆಚ್ಚದಲ್ಲಿ ಬಡ ವಿದ್ಯಾರ್ಥಿಯೊಬ್ಬರನ್ನು ದತ್ತು ಪಡೆದು ಅವರ ಮನೆ ಬಾಗಿಲಿಗೆ ಹೋಗಿ ದಾಖಲು ಮಾಡಿಕೊಂಡಿರುವ ಕ್ರಮ ಮಾದರಿಯಾಗಿದೆ ಎಂದಿದ್ದಾರೆ.

ಇದೊಂದು ಅತ್ಯುತ್ತಮ ಪ್ರಯತ್ನ. ಪಾಲಿಟೆಕ್ನಿಕ್‌ ಪ್ರಾಚಾರ್ಯರು, ಬೋಧಕರ ಬದ್ಧತೆ ನನ್ನ ಹೃದಯ ಗೆದ್ದಿದೆ. ತಾಂತ್ರಿಕ ಮತ್ತು ಉನ್ನತ ಶಿಕ್ಷಣವನ್ನು ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತಲುಪಿಸಬೇಕು ಎಂಬ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯವನ್ನು ಹಾಗೂ ಶೈಕ್ಷಣಿಕ ಸಮಾನತೆಯನ್ನು ಇವರು ಆರಂಭದಲ್ಲೇ ಸಾಕಾರ ಮಾಡಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಈ ವರ್ಷದಿಂದ ಹೊಸದಾಗಿ ಆರಂಭ ಮಾಡಲಾದ ಡಿಪ್ಲೊಮಾ ಕೋರ್ಸ್​​ಗಳಲ್ಲಿ ಒಂದಾದ ಸೈಬರ್ ಫಿಸಿಕಲ್ ಸಿಸ್ಟಮ್ಸ್ ಅಂಡ್ ಸೆಕ್ಯೂರಿಟಿ ವಿಭಾಗದ ಕೊನೆಯ ಒಂದು ಸೀಟು ಉಳಿದಿತ್ತು. ಆ ಸೀಟಿಗೆ ಬಹಳ ಬೇಡಿಕೆ ಇದ್ದರೂ ಪಾಲಿಟೆಕ್ನಿಕ್ ಪ್ರಾಚಾರ್ಯರಾದ ಎಸ್.ಮಲ್ಲಪ್ಪ, ಇತರೆ ಬೋಧಕರು ಹಾಗೂ ಸಿಬ್ಬಂದಿ ತಾಲೂಕಿನ ಕುಡಿತಿನಿ ಗ್ರಾಮದ ಗುಡಿಸಲಿನಲ್ಲಿ ವಾಸಿಸುವ ಅಲೆಮಾರಿ ಜನಾಂಗದ ಬಡ ಪ್ರತಿಭಾವಂತ ವಿದ್ಯಾರ್ಥಿ ಎಂ.ಮೌನೇಶ್‌ಗೆ ನೀಡಿದ್ದಾರೆ. ಇದು ಒಳ್ಳೆಯ ಕ್ರಮ ಎಂದು ತಿಳಿಸಿದರು.

ಎಲ್ಲಾ ಸೌಲಭ್ಯ ನೀಡಲಾಗುವುದು : ನಂತರ ವಿದ್ಯಾರ್ಥಿಯ ಬಗ್ಗೆ ಮಾತನಾಡಿದ ಪ್ರಾಂಶುಪಾಲರು, ನಮ್ಮ ವಿದ್ಯಾರ್ಥಿ ಎಂ.ಮೌನೇಶ್‌ಗೆ ಡಿಪ್ಲೊಮಾದಲ್ಲಿ ಈಗಾಗಲೇ ಅಳವಡಿಸಿಕೊಂಡಿರುವ ಜಾಗತಿಕ ಮಟ್ಟಕ್ಕೆ ಸಮನಾದ ಪಠ್ಯಕ್ರಮ, ಡಿಜಿಟಲ್ ಶಿಕ್ಷಣ, ಕಲಿಕಾ ನಿರ್ವಹಣಾ ವ್ಯವಸ್ಥೆ, ಸ್ಮಾರ್ಟ್ ಕ್ಲಾಸ್ ರೂಂ ಹಾಗೂ ಉಚಿತ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಈ ವಿದ್ಯಾರ್ಥಿಗೆ ಒದಗಿಸಲಾಗುವುದು ಎಂದು ಪ್ರಾಂಶುಪಾಲ ಎಸ್. ಮಲ್ಲಪ್ಪ ತಿಳಿಸಿದರು.

ಮೌನೇಶ್ ಬಹಳ ಬಡತನದಲ್ಲಿದ್ದಾನೆ. ಅವರು ಒಂದು ಕೊಳಗೇರಿಯಲ್ಲಿ ವಾಸ ಮಾಡುತ್ತಿದ್ದು, ಅಲ್ಲಿ ಸುಮಾರು 150 ಮನೆಗಳಿವೆ. ನಾನು, ನಮ್ಮ ಬೋಧಕರು ಮತ್ತು ಸಿಬ್ಬಂದಿ ಜೊತೆ ತೆರಳಿ ಅಲ್ಲಿನ ಜನರಿಗೆ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ. ನಮಗೆ ಸರ್ಕಾರದಿಂದಲೂ ಉತ್ತಮ ಪ್ರೋತ್ಸಾಹವಿದೆ. ಪಾಲಿಟೆಕ್ನಿಕ್‌ನಲ್ಲಿ ಕಲಿಯಲು ಸಾಕಷ್ಟು ಸೌಲಭ್ಯಗಳಿವೆ. ಇದೆಲ್ಲವನ್ನೂ ನಾನು ಜನರಿಗೆ ವಿವರಿಸಿ ಹೇಳಿದ್ದೇನೆ. ಎಲ್ಲರಿಗೂ ಮೌನೇಶ್ ದಾಖಲಾತಿ ಮತ್ತು ದತ್ತು ಸ್ವೀಕಾರ ವಿಷಯ ಪ್ರೇರಣೆ ನೀಡಿದೆ ಎಂದು ಹೇಳಿದರು.

ಮುಖ್ಯವಾಗಿ ನಮ್ಮ ಪಾಲಿಟೆಕ್ನಿಕ್‌ನ ಸಹೋದ್ಯೋಗಿಗಳು ಮುಂದಿನ ವರ್ಷದಿಂದ ತಲಾ ಒಬ್ಬೊಬ್ಬ ಬಡ ವಿದ್ಯಾರ್ಥಿಯನ್ನು ದತ್ತು ತೆಗೆದುಕೊಂಡು ಓದಿಸುವ ಸಂಕಲ್ಪ ಮಾಡಿದ್ದಾರೆ. ಇದು ನನಗೆ ತುಂಬಾ ಸಂತೋಷ ಉಂಟು ಮಾಡಿದೆ. ಪಾಲಿಟೆಕ್ನಿಕ್‌ನಲ್ಲಿ ಮೂರು ವರ್ಷ ವ್ಯಾಸಂಗ ಮುಗಿದ ಮೇಲೆ ಅವರು ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳುವ ಅವಖಾಶವೂ ಇದೆ. ಅಗತ್ಯ ಬಿದ್ದರೆ ಉನ್ನತ ಓದಿಗೂ ಹೋಗಬಹುದು. ಸರ್ಕಾರದ ಸೌಲಭ್ಯಗಳ ಬಗ್ಗೆ ನಾವು ವ್ಯಾಪಕವಾಗಿ ಪ್ರಚಾರ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.

ಓದಿ: ತಾಲಿಬಾನ್ ಉಗ್ರರ ಸಮಸ್ಯೆಯಿಂದ ತೈಲ ಬೆಲೆ ಏರಿಕೆಯಾಗಿದೆ : ಬಿಜೆಪಿ ಶಾಸಕ‌ ಅರವಿಂದ ಬೆಲ್ಲದ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.