ಬೆಂಗಳೂರು: ಅಕ್ಷಯಪಾತ್ರದಂತಹ ಹಲವು ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ಇಸ್ಕಾನ್ ನಡೆಸುವ ಎಲ್ಲ ಮಾನವೀಯ ಕಾರ್ಯಗಳಿಗೆ ಸರ್ಕಾರ ಅಗತ್ಯ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಕೇವಲ ಬೆಂಗಳೂರು ನಗರ ಅಷ್ಟೇ ಅಲ್ಲದೆ ಇಡೀ ವಿಶ್ವಕ್ಕೆ ಬಹಳ ಭಕ್ತಿಯ ಚೈತನ್ಯದ ದಿನವಾಗಿದೆ. ಇಂದು ಪ್ರಭು ರಾಜಾಧಿರಾಜ ಗೋವಿಂದರ ಆಗಮನ ಆಗಿದೆ. ಇದನ್ನು ಇಸ್ಕಾನ್ ಮುಖ್ಯಸ್ಥ ಮಧು ಪಂಡಿತ್ ದಾಸ್ ಭಕ್ತಿಭಾವದಿಂದ ಶ್ರದ್ಧೆಯಿಂದ ನೆರೆವೇರಿಸಿದ್ದಾರೆ. ಸುಮಾರು ಎರಡು ದಶಕಗಳ ಕಾಲ ಈ ಪ್ರದೇಶವನ್ನು ಸಮಗ್ರ ಅಭಿವೃದ್ಧಿ ಮಾಡಿ ಈ ಸ್ಥಾನದಲ್ಲಿ ದೇವರ ಪ್ರತಿಷ್ಠಾಪಿಸಿ ಲೋಕಾರ್ಪಣೆ ಮಾಡಿ ಲೋಕಕಲ್ಯಾಣದ ಸಂಕಲ್ಪ ಮಾಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ:ಜೂನ್ 20ರಂದು ಬೆಂಗಳೂರು ಉಪನಗರ ರೈಲು ಯೋಜನೆಗೆ ಪ್ರಧಾನಿ ಮೋದಿ ಅಡಿಗಲ್ಲು