ETV Bharat / state

ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಸಿಎಂಗೆ ಎಚ್​​ಡಿಕೆ ಆಗ್ರಹ

ಸರ್ಕಾರ ಭರವಸೆ ನೀಡಿದ್ದಂತೆ ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು ಎಂದು ಎಚ್​ಡಿಕೆ ಆಗ್ರಹಿಸಿದ್ದಾರೆ.

Graduate college guest lecturers demand increased honors
ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸಲು ಸಿಎಂಗೆ ಎಚ್​​ಡಿಕೆ ಆಗ್ರಹ
author img

By

Published : Oct 11, 2020, 11:42 PM IST

ಬೆಂಗಳೂರು: ರಾಜ್ಯ ಸರ್ಕಾರ ಪದವಿ ಕಾಲೇಜಿನ ಅತಿಥಿ ಶಿಕ್ಷಕರ ಮಾಸಿಕ ಗೌರವಧನ ಹೆಚ್ಚಿಸಬೇಕೆಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಟ್ವೀಟ್ ಮೂಲಕ ಈ ಆಗ್ರಹ ಮಾಡಿರುವ ಅವರು, ಸರ್ಕಾರ ಭರವಸೆ ನೀಡಿದ್ದಂತೆ ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ ಐದು ಸಾವಿರ ರೂಪಾಯಿ ಹೆಚ್ಚಳ ಮಾಡಬೇಕು. ಲಾಕ್​​ಡೌನ್ ಸಂದರ್ಭದಲ್ಲಿ ತಡೆಹಿಡಿದಿದ್ದ ಗೌರವ ಧನದ ಬಾಕಿಯನ್ನು ತಕ್ಷಣವೇ ನೀಡಬೇಕು. ಡಿಗ್ರಿ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ ಗೌರವಧನವನ್ನು ಕನಿಷ್ಠ 15 ಸಾವಿರ ರೂಪಾಯಿಗಳಿಗೆ ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದ್ದು, 14 ವಿಧಾನಪರಿಷತ್ ಸದಸ್ಯರುಗಳಿಗೆ ನೀಡಿದ್ದ ಭರವಸೆಯನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕು ಎಂದಿದ್ದಾರೆ.

ಸುಮಾರು ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಪದವಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಜೆಪಿ ಸರ್ಕಾರ 15,000 ರೂ.ಗಳ ಮಾಸಿಕ ಗೌರವಧನ ನೀಡುವ ಭರವಸೆಯನ್ನು ಕೂಡಲೇ ಜಾರಿ ಮಾಡಬೇಕು. ಕಳೆದ ಸಲದ ಶೈಕ್ಷಣಿಕ ವರ್ಷದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸಿದ್ದ ಎಲ್ಲರನ್ನೂ ಮತ್ತೆ ಮರು ನೇಮಕ ಮಾಡಿಕೊಳ್ಳುವ ಮೂಲಕ ಸಂಕಷ್ಟದಲ್ಲಿರುವ ಅತಿಥಿ ಉಪನ್ಯಾಸಕರಿಗೆ ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಅಕ್ಟೋಬರ್ 12 ರಿಂದ 30ರ ವರೆಗೆ ಶಾಲೆಗಳಿಗೆ ಮಧ್ಯಂತರ ರಜೆ ನೀಡಲು ಸಿಎಂ ಅಧಿಕಾರಿಗಳಿಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸಿರುವ ಎಚ್​​ಡಿಕೆ, ಕಳೆದೊಂದು ವಾರದಿಂದ ಶಿಕ್ಷಕ ಸಮುದಾಯದ ನಾನಾ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಕಂಡು ನನ್ನ ಮನಸು ವಿಹ್ವಲಗೊಂಡಿತ್ತು. ನನ್ನ ಭಾವನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿರುವುದು ಶಿಕ್ಷಕರ ವೃತ್ತಿ ಗೌರವಕ್ಕೆ ಸಮರ್ಪಿಸಿದ ಗುರುದಕ್ಷಿಣೆ. ರಾಜ್ಯದ ಶಿಕ್ಷಕರ ಸಮಸ್ಯೆಗಳನ್ನು ನನ್ನ ಸಮಸ್ಯೆಗಳೆಂದೇ ಸದಾ ಭಾವಿಸುವ ನನ್ನ ನಿಲುವಿಗೆ ರಾಜ್ಯದ ವಿದ್ಯಾರ್ಥಿಗಳು, ಪೋಷಕರು, ಮಾಧ್ಯಮಗಳು ಕೂಡ ನನ್ನ ಬೆಂಬಲಕ್ಕೆ ನಿಂತಿದ್ದು ಅವರಿಗೆಲ್ಲ ಕೃತಜ್ಞನಾಗಿದ್ದೇನೆ ಎಂದಿದ್ದಾರೆ.

ನರಜನ್ಮವ ತೊಡೆದು ಹರಜನ್ಮವ ಮಾಡಿದ ಗುರುವೆ ನಮೋ, ಭವಬಂಧನವ ಬಿಡಿಸಿ ಪರಮಸುಖವ ತೋರಿದ ಗುರುವೆ ನಮೋ, ಭವಿಯೆಂಬುದ ತೊಡೆದು ಭಕ್ತೆ ಎಂದೆನಿಸಿದ ಗುರುವೆ ನಮೋ, ಚೆನ್ನಮಲ್ಲಿಕಾರ್ಜುನನ ತಂದೆನ್ನ ಕೈವಶಕ್ಕೆ ಕೊಟ್ಟ ಗುರುವೆ ನಮೋ ನಮೋ – ಅಕ್ಕಮಹಾದೇವಿ ಎಂಬ ವಚನವನ್ನು ನೆನಪಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.