ETV Bharat / state

ಗ್ರಾಮ ಸ್ವರಾಜ್-ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ ಮಂಡನೆ..

author img

By

Published : Sep 14, 2021, 7:57 PM IST

ಈ ಹಿಂದೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಾಡಿದ ತಾಪಂ ಹಾಗೂ ಜಿಪಂ ಸೀಮಾ ನಿರ್ಣಯ (ಕ್ಷೇತ್ರ ಪುನರ್​ವಿಂಗಡನೆ ) ಅವೈಜ್ಞಾನಿಕ ಹಾಗೂ ಕಾನೂನು ಬಾಹಿರವಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್​ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆ ಕ್ಷೇತ್ರ ಪುನರ್​ ವಿಂಗಡಣೆ ಆಯೋಗ ರಚನೆಗಾಗಿ ವಿಧೇಯಕವನ್ನು ತರಲಾಗಿದೆ..

assembly
ವಿಧಾನಸಭೆ

ಬೆಂಗಳೂರು : ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್​ವಿಂಗಡನೆ ಸಂಬಂಧ ಮಹತ್ವದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ 2021 ಅನ್ನು ವಿಧಾನಸಭೆಯಲ್ಲಿ ಮಂಡನೆ ಮಾಡಲಾಗಿದೆ.

ಈ‌ ವಿಧೇಯಕದ ಮೂಲ ಉದ್ದೇಶ ಕರ್ನಾಟಕ ಪಂಚಾಯತ್ ರಾಜ್ ಕ್ಷೇತ್ರ ಪುನರ್​ವಿಂಗಡನೆ ಆಯೋಗ (ಡಿಲಿಮಿಟೇಷನ್ ಕಮಿಷನ್) ರಚಿಸುವುದಾಗಿದೆ. ಈ ಆಯೋಗದ ಮೂಲಕ ತಾಲೂಕು ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳ ಪುನರ್​ವಿಂಗಡನೆ ಮಾಡಲಾಗುತ್ತದೆ.

ಈ ಹಿಂದೆ ಕರ್ನಾಟಕ ರಾಜ್ಯ ಚುನಾವಣಾ ಆಯೋಗ ಮಾಡಿದ ತಾಪಂ ಹಾಗೂ ಜಿಪಂ ಸೀಮಾ ನಿರ್ಣಯ (ಕ್ಷೇತ್ರ ಪುನರ್​​ ವಿಂಗಡನೆ) ಅವೈಜ್ಞಾನಿಕ ಹಾಗೂ ಕಾನೂನು ಬಾಹಿರವಾಗಿದೆ ಎಂದು ಆಕ್ಷೇಪಿಸಿ ಹೈಕೋರ್ಟ್​ನಲ್ಲಿ ಹಲವಾರು ಅರ್ಜಿಗಳು ಸಲ್ಲಿಕೆಯಾಗಿವೆ. ಈ ಹಿನ್ನೆಲೆ ಕ್ಷೇತ್ರ ಪುನರ್​ ವಿಂಗಡಣೆ ಆಯೋಗ ರಚನೆಗಾಗಿ ವಿಧೇಯಕವನ್ನು ತರಲಾಗಿದೆ.

ಈ ವಿಧೇಯಕ ಜಾರಿಯಾದ ತಕ್ಷಣ ತಾಪಂ ಹಾಗೂ ಜಿಪಂ ಕ್ಷೇತ್ರಗಳ ಎಲ್ಲಾ ಕ್ಷೇತ್ರ ಪುನರ್​ ವಿಂಗಡನೆ ಅಧಿಸೂಚನೆ ರದ್ದಾಗಲಿದೆ. ಜೊತೆಗೆ ಪ್ರಸ್ತುತವಿರುವ ಕ್ಷೇತ್ರ ಪುನರ್​ವಿಂಗಡನೆ ಆಧಾರದಲ್ಲಿ ಜಾರಿಯಲ್ಲಿರುವ ತಾಪಂ ಹಾಗೂ ಜಿಪಂ ಕ್ಷೇತ್ರಗಳ ಮೀಸಲಿರಿಸುವ ಎಲ್ಲಾ ಅಧಿಸೂಚನೆಗಳನ್ನು ಕೂಡಲೇ ರದ್ದಾಗಲಿದೆ.

ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚನೆ

ಆಯೋಗಕ್ಕೆ ನಿವೃತ್ತ ಮುಖ್ಯ ಕಾರ್ಯದರ್ಶಿ ಅಥವಾ ಅಪರ ಕಾರ್ಯದರ್ಶಿ ಅಧ್ಯಕ್ಷರಾಗಿರುತ್ತಾರೆ. ಸರ್ಕಾರ ನೇಮಿಸುವ ಗ್ರಾಮೀಣಾಭಿವೃದ್ಧಿ ವಿಕೇಂದ್ರೀಕರಣ ಮತ್ತು ಪಂಚಾಯತ್ ರಾಜ್ ವಿಷಯಗಳಲ್ಲಿ ಅನುಭವ ಹೊಂದಿರುವ ನಿವೃತ್ತ ಕಾರ್ಯದರ್ಶಿ ಆಯೋಗದ ಸದಸ್ಯರಾಗಿರುತ್ತಾರೆ.

ಅದೇ ರೀತಿ ಸರ್ಕಾರ ನಾಮನಿರ್ದೇಶಿತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಲಯದಲ್ಲಿನ ಒಬ್ಬ ತಜ್ಞ ಸದಸ್ಯರಾಗಿರುತ್ತಾರೆ. ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ಪದನಿಮಿತ್ತ ಸದಸ್ಯರಾಗಿರುತ್ತಾರೆ. ಆಯೋಗದ ಕೇಂದ್ರ ಕಚೇರಿ ಬೆಂಗಳೂರಿನಲ್ಲಿ ಇರಲಿದೆ.

ಆಯೋಗದ ಕಾರ್ಯವೈಖರಿ ಏನು?

- ಜನಗಣತಿ ಆಧಾರದಲ್ಲಿ ಪ್ರತಿ ಗ್ರಾ.ಪಂ, ತಾ. ಪಂ, ಮತ್ತು ಜಿ. ಪಂಚಾಯತಿಗೆ ಚುನಾಯಿಸಬೇಕಾದ ಒಟ್ಟು ಸದಸ್ಯರ ಸಂಖ್ಯೆಯನ್ನು ನಿಗದಿಪಡಿಸಲು ಶಿಫಾರಸು ಮಾಡುವುದು.

- ಜನಗಣತಿ ಆಧಾರದಲ್ಲಿ ಪ್ರತಿ ಗ್ರಾ. ಪಂ, ತಾ. ಪಂ, ಮತ್ತು ಜಿ. ಪಂಚಾಯತಿ ಪ್ರದೇಶವನ್ನು ಆಯಾ ಗ್ರಾಮ ಪಂ. ಅಥವಾ ತಾ.ಪಂ ಅಥವಾ ಜಿ. ಪಂ ಚುನಾಯಿಸಲು ಅಗತ್ಯವಾದ ಸದಸ್ಯರ ಸಂಖ್ಯೆಯನ್ನು ಹಾಗೂ ಒಟ್ಟು ಸದಸ್ಯರ ಸಂಖ್ಯೆಯನ್ನು ವಾರ್ಡ್​ಗಳು ಅಥವಾ ಕ್ಷೇತ್ರಗಳನ್ನಾಗಿ ವಿಂಗಡಿಸಲು ಶಿಫಾರಸು ಮಾಡುವುದು.

- ಪ್ರತಿ ಗ್ರಾ. ಪಂ, ತಾ.ಪಂ, ಮತ್ತು ಜಿ. ಪಂಚಾಯತಿ ಅಥವಾ ಜಿಲ್ಲಾ ಪಂಚಾಯತಿಯ ವಾರ್ಡ್​ಗಳು ಅಥವಾ ಕ್ಷೇತ್ರಗಳ ಗಡಿಗಳನ್ನು ನಿರ್ಧರಿಸುವುದಕ್ಕಾಗಿ ಶಿಫಾರಸು ಮಾಡುವುದು.

ಓದಿ: ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್​

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.