ETV Bharat / state

ಜ.26ರಂದು 'ಗ್ರಾಮ ಒನ್' ಯೋಜನೆ 12 ಜಿಲ್ಲೆಗಳಲ್ಲಿ ಜಾರಿ: ಸಿಎಂ ಬೊಮ್ಮಾಯಿ - ಹನ್ನೆರಡು ಜಿಲ್ಲೆಗಳಲ್ಲಿ ಗ್ರಾಮ ಒನ್ ಯೋಜನೆ ಜಾರಿ

ಸರ್ಕಾರದ ಮಹತ್ವಾಕಾಂಕ್ಷಿ 'ಗ್ರಾಮ ಒನ್' ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವ ದಿನದಂದು ಜಾರಿಗೆ ಬರಲಿದೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

Gram one project enforcement  in twel district
ಹನ್ನೆರಡು ಜಿಲ್ಲೆಗಳಲ್ಲಿ ಗ್ರಾಮ ಒನ್ ಯೋಜನೆ ಜಾರಿ
author img

By

Published : Jan 17, 2022, 9:56 PM IST

ಬೆಂಗಳೂರು: ರಾಜ್ಯದ ಗ್ರಾಮೀಣ ಪ್ರದೇಶದಲ್ಲಿ ವಿವಿಧ ಇಲಾಖೆಗಳ ಸೇವೆಗಳನ್ನು ಒದಗಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ರಾಮ ಒನ್ ಯೋಜನೆ ರಾಜ್ಯದ 12 ಜಿಲ್ಲೆಗಳಲ್ಲಿ ಗಣರಾಜ್ಯೋತ್ಸವ ದಿನದಂದು ಜಾರಿಗೆ ಬರಲಿದೆ. ಯೋಜನೆಯಲ್ಲಿ ಒಟ್ಟು 3000 ಗ್ರಾಮ ಒನ್ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಯೋಜನೆ ಜಾರಿಗೆ ಸಂಬಂಧಪಟ್ಟಂತೆ ಸಿಎಂ ಅಧ್ಯಕ್ಷತೆಯಲ್ಲಿ ಇಂದು ವರ್ಚುವಲ್ ಮೂಲಕ ಸಭೆ ನಡೆಯಿತು.

ಬೀದರ್, ಕೊಪ್ಪಳ, ಬಳ್ಳಾರಿ, ಬೆಳಗಾವಿ, ಹಾವೇರಿ, ವಿಜಯಪುರ, ದಾವಣಗೆರೆ ,ಶಿವಮೊಗ್ಗ, ತುಮಕೂರು, ಚಿಕ್ಕಮಗಳೂರು, ಉಡುಪಿ ಹಾಗು ಕೊಡಗು ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಯಾಗಲಿದೆ. ಕಂದಾಯ, ಆಹಾರ, ಆರೋಗ್ಯ ಕಾರ್ಮಿಕ ಸೇರಿದಂತೆ ವಿವಿಧ ಇಲಾಖೆಗಳ ಅಂದಾಜು 100 ಸೇವೆಗಳು ಗ್ರಾಮ ಒನ್ ಕೇಂದ್ರದಲ್ಲಿ ಲಭ್ಯವಾಗಲಿವೆ. ಗ್ರಾಮ ಒನ್ ಕೇಂದ್ರಗಳಿಗೆ ನಿರಂತರ ವಿದ್ಯುತ್ ಸಂಪರ್ಕ ಹಾಗೂ ಇಂಟರ್ನೆಟ್ ಸಂಪರ್ಕ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು.

ಈ ಮಾಹಿತಿ ಆಲಿಸಿ ಮಾತನಾಡಿದ ಸಿಎಂ, ಸದ್ಯಕ್ಕೆ 12 ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯೋಜನೆ ಜಾರಿಯಾಗಬೇಕು. ಹಲವಾರು ಪ್ರಮುಖ ಇಲಾಖೆಗಳ ಎಲ್ಲಾ ಸೇವೆಗಳು ಗ್ರಾಮೀಣ ಪ್ರದೇಶದ ಜನರಿಗೆ ಸುಲಭವಾಗಿ ಸಿಗುವಂತಾಗಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಈ ಆಡಳಿತ) ಅಪರ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ: ಶುಕ್ರವಾರದವರೆಗೂ ಕಠಿಣ ನಿಯಮ ಮುಂದುವರಿಕೆ: ಸಿಎಂ ಸಭೆಯ ಮಹತ್ವದ ನಿರ್ಧಾರಗಳಿವು..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.