ಬೆಂಗಳೂರು : ಉತ್ತರಪ್ರದೇಶದ ಹಥ್ರಾಸ್ನಲ್ಲಿ ನಡೆದ ಅಮಾನವೀಯ ಅತ್ಯಾಚಾರ ಖಂಡಿಸಿ ನಗರದ ಗಾಂಧಿ ಭವನದಲ್ಲಿ ಗ್ರಾಮ ಸೇವಾ ಸಂಘದ ಸದಸ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಗ್ರಾಮೋದ್ಯೋಗ ಉಳಿಸಿ ಆಂದೋಲನದ ಸಲುವಾಗಿ, ಚರಕ, ಕೈಮಗ್ಗ ಸಹಕಾರ ಸಂಘದ ಮಹಿಳೆಯರು, ಹೆಣ್ಣುಮಕ್ಕಳು ಹಥ್ರಾಸ್ ಅತ್ಯಾಚಾರ ಸುದ್ದಿಯಿಂದ ಆತಂಕಿತರಾಗಿದ್ದಾರೆ. ಅಲ್ಲದೆ ರಾಜ್ಯದ ರಾಜಕೀಯ ನಾಯಕರಾದ್ರೂ ಹೆಣ್ಣುಮಕ್ಕಳ ರಕ್ಷಣೆಗೆ ನಿಲ್ಲುತ್ತಾರೆ ಎಂಬ ಭರವಸೆಯಿಂದ ಇಂದು ಮತ್ತು ನಾಳೆ ಉಪವಾಸ ಸತ್ಯಾಗ್ರಹ ನಡೆಸಿ ಶಾಂತಿಯುತ ಪ್ರತಿಭಟನೆಗೆ ಮುಂದಾಗಿದ್ದೇವೆ ಎಂದಿದ್ದಾರೆ.
ಮಹಿಳೆಯರಿಗೆ ರಕ್ಷಣೆಯೇ ಇಲ್ಲವೇನೋ ಎಂಬಂತಾಗಿದೆ ಎಂದು ಆತಂಕ ಹೊರ ಹಾಕಿದ್ದಾರೆ.