ಬೆಂಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರ ಮಾಸಿಕ ಗೌರವಧನವನ್ನು ದ್ವಿಗುಣಗೊಳಿಸಿ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಈವರೆಗೆ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ 3 ಸಾವಿರ ರೂ. ಉಪಾಧ್ಯಕ್ಷರು 2 ಸಾವಿರ ರೂ. ಹಾಗೂ ಸದಸ್ಯರಿಗೆ 1 ಸಾವಿರ ರೂ. ಮಾಸಿಕ ಗೌರವ ಧನ ನೀಡಲಾಗುತ್ತಿತ್ತು. ಇದೀಗ ಅಧ್ಯಕ್ಷರಿಗೆ 6 ಸಾವಿರ ರೂ. ಉಪಾಧ್ಯಕ್ಷರಿಗೆ 4 ಸಾವಿರ ರೂ. ಹಾಗೂ ಸದಸ್ಯರಿಗೆ 2 ಸಾವಿರ ರೂ. ಗೌರವಧನ ನಿಗದಿ ಪಡಿಸಿ ಸರ್ಕಾರ ಆದೇಶ ಹೊರಡಿಸಿದೆ.
ಇದನ್ನೂ ಓದಿ: ಅಮೃತ ಕಾಲದ ಕನಸು ನನಸಾಗಿಸಲು 25 ವರ್ಷ ಬಿಜೆಪಿಯನ್ನು ಅಧಿಕಾರಕ್ಕೆ ತರಬೇಕಿದೆ: ಬೊಮ್ಮಾಯಿ
ಗ್ರಾಮ ಪಂಚಾಯಿತಿ ಸದಸ್ಯರಿಗೆ ನೀಡುತ್ತಿದ್ದ ಗೌರವಧನ ತುಂಬಾ ಕಡಿಮೆ ಇದ್ದು, ಗೌರವಧನ ಪರಿಷ್ಕರಿಸಿ 5 ವರ್ಷಗಳು ಕಳೆದಿವೆ. ಆದ್ದರಿಂದ ನೀಡುತ್ತಿರುವ ಗೌರವಧನ ಸದ್ಯ ಬೆಲೆ ಏರಿಕೆಯಿಂದಾಗಿ ಏತಕ್ಕೂ ಸಾಲದಾಗಿದೆ. ಕೂಡಲೇ ಸರ್ಕಾರ ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಗೌರವಧನವನ್ನು ಹೆಚ್ಚಿಸುವಂತೆ ಬಹುದಿನಗಳಿಂದ ಬೇಡಿಕೆ ಇತ್ತು. ಇದೀಗ ಸರ್ಕಾರ ಗ್ರಾ.ಪಂ ಅಧ್ಯಕ್ಷರಿಗೆ, ಉಪಾಧ್ಯಕ್ಷರಿಗೆ, ಸದಸ್ಯರಿಗೆ ಗೌರವಧನ ದ್ವಿಗುಣಗೊಳಿಸಿದೆ.