ETV Bharat / state

ಉನ್ನತ ಶಿಕ್ಷಣದಲ್ಲಿ ಆನ್​​ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು: ಸಿಎಂ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕೋವಿಡ್-19 ಹಿನ್ನೆಲೆ ಆನ್​ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ, ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ
author img

By

Published : May 26, 2020, 3:00 PM IST

ಬೆಂಗಳೂರು: ಉನ್ನತ ಶಿಕ್ಷಣದಲ್ಲಿ ಆನ್​ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು ನೀಡುವಂತೆ ಉನ್ನತ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಕೋವಿಡ್-19 ಹಿನ್ನೆಲೆ ಆನ್​ಲೈನ್ ತರಗತಿಗಳ ಮೂಲಕ ಪಠ್ಯಕ್ರಮವನ್ನು ಪೂರ್ಣಗೊಳಿಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸಲು ಯಾವುದೇ ಸಮಸ್ಯೆಯಾಗದಂತೆ ಎಚ್ಚರ ವಹಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು.

ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

ಆನ್​ಲೈನ್ ತರಗತಿಗಳು ಸಾಮಾನ್ಯ ತರಗತಿಗಳಿಗೆ ಹೋಲಿಸಿದರೆ ಕಡಿಮೆ ವೆಚ್ಚದ್ದಾಗಿದ್ದು, ಈ ವ್ಯವಸ್ಥೆಯನ್ನು ಪಿಯು ಮಟ್ಟದಿಂದಲೇ ಪ್ರಾರಂಭಿಸುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಲಾಕಡೌನ್ ಪೂರ್ವದಲ್ಲಿ ಶೇ. 79ರಷ್ಟು ಪಠ್ಯಕ್ರಮ ಪೂರ್ಣಗೊಂಡಿದ್ದು, ಮೇ. 31ರೊಳಗೆ ಶೇ. 21ರಷ್ಟು ಪಠ್ಯಕ್ರಮಗಳನ್ನು ಆನ್‍ಲೈನ್ ಬೋಧನೆ ಮೂಲಕ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯ ವಿವರ:

ವೆಬ್‍ಎಕ್ಸ್, ಸ್ಕೈಪ್ ಹಾಗೂ ಇತರೆ ಆನ್‍ಲೈನ್ ಪ್ಲಾಟ್​​ಫಾರ್ಮ್​ಗಳ ಮೂಲಕ 30 ಸಾವಿರ ಆನ್‍ಲೈನ್ ತರಗತಿಗಳನ್ನು ನಡೆಸಲಾಗಿದೆ. ವಾಟ್ಸಪ್ ಮತ್ತು ಟೆಲಿಗ್ರಾಂ ಮೂಲಕ ಶೇ. 85ರಷ್ಟು ವಿದ್ಯಾರ್ಥಿಗಳಿಗೆ ಇ-ನೋಟ್ಸ್, ಪಿಪಿಟಿ ಹಾಗೂ ಹಳೆಯ ಪ್ರಶ್ನೆ ಪತ್ರಿಕೆಗಳ ವಿತರಣೆ ಮಾಡಲಾಗಿದೆ. ಜ್ಞಾನ ನಿಧಿ ಯುಟ್ಯೂಬ್ ಚಾನೆಲ್ ಮೂಲಕ 65 ವಿಷಯಗಳ 7,074 ಬೋಧನಾ ವಿಡಿಯೋ ಅಪ್‍ಲೋಡ್ ಮಾಡಲಾಗಿದ್ದು, 5 ಲಕ್ಷ ವೀಕ್ಷಣೆಯಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಡಿಸಿಎಂ ಹೇಳಿದ್ದೇನು?

ಗೆಟ್ ಸಿಇಟಿ ಗೋ ಮೂಲಕ 2 ಲಕಕ್ಕೂ ಅಧಿಕ ವಿದ್ಯಾರ್ಥಿಗಳನ್ನು ತಲುಪಲಾಗಿದ್ದು, 13,600 ವಿದ್ಯಾರ್ಥಿಗಳು ಯುಟ್ಯೂಬ್ ಚಂದಾದಾರರಾಗಿದ್ದಾರೆ ಹಾಗೂ 90 ಸಾವಿರ ಲಾಗ್​ಇನ್​​ ಆಗಿದೆ. ಸದರಿ ಪೋರ್ಟಲ್‍ಗೆ ನಾಲ್ಕು ಸ್ಟಾರ್​ಗಳು ದೊರೆತಿದ್ದು, ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲಾಗಿದೆ. 10 ಸಾವಿರಕ್ಕೂ ಅಧಿಕ ಕರೆಗಳನ್ನು ಸ್ವೀಕರಿಸಿ ಸಮಸ್ಯೆಗಳನ್ನು ಪರಿಹರಿಸಲಾಗಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಕಾಲೇಜುಗಳಲ್ಲಿ ಉಚಿತ ಲ್ಯಾಪ್​ಟಾಪ್ ವಿತರಿಸಲಾಗಿರುವ ವಿದ್ಯಾರ್ಥಿಗಳಿಗೆ ಆನ್‍ಲೈನ್ ಕಲಿಕೆ ಅನುಷ್ಠಾನಕ್ಕೆ ಬರಲಿದೆ. ಕೋವಿಡ್– 19 ಪರಿಸ್ಥಿತಿಯಲ್ಲಿ ಡಿಜಿಟಲ್ ಕಲಿಕೆಗೆ ಹೆಚ್ಚಿನ ಮಹತ್ವ ಕೊಟ್ಟಿದ್ದು, ಮೈತ್ರಿ ಸಹಾಯವಾಣಿ ಪೋರ್ಟಲ್​ನಿಂದ ವಿದ್ಯಾರ್ಥಿ ಹಾಗೂ ಶಿಕ್ಷಕರಿಗೆ ಪ್ರಯೋಜನಕಾರಿಯಾಗಿದೆ. ಹನ್ನೊಂದು ಕೋಟಿ ರೂ. ವೆಚ್ಚದಲ್ಲಿ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಮಗ್ರ ನಿರ್ವಹಣಾ ವ್ಯವಸ್ಥೆಯನ್ನು ಇ-ಆಡಳಿತ ಇಲಾಖೆಯ ಮುಖಾಂತರ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್.ಅಶ್ವತ್ಥ್​ ನಾರಾಯಣ ತಿಳಿಸಿದರು.

ಯುಜಿಸಿ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದ್ದು, ಪ್ರಸ್ತುತ ಶೈಕ್ಷಣಿಕ ವರ್ಷದ ಕಾರ್ಯಕ್ರಮಗಳನ್ನು ಜೂನ್ 15ರೊಳಗೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಈ ಬಾರಿ ಬೇಸಿಗೆ ರಜೆಯನ್ನು ಮೊಟಕುಗೊಳಿಸಲಾಗುವುದು. ರಾಜ್ಯದ 13 ವಿಧಾನಸಭಾ ಕ್ಷೇತ್ರಗಳಲ್ಲಿ ಸರ್ಕಾರಿ ಕಾಲೇಜುಗಳು ಇಲ್ಲದೇ ಇರುವುದನ್ನು ಗುರುತಿಸಿದ್ದು, ಹೆಚ್ಚುವರಿ ಕಾಲೇಜುಗಳು ಇರುವ ಕ್ಷೇತ್ರಗಳಿಂದ 6 ಪ್ರಥಮ ದರ್ಜೆ ಕಾಲೇಜುಗಳನ್ನು ಈ ಭಾಗಗಳಿಗೆ ಸ್ಥಳಾಂತರ ಮಾಡಲಾಗುವುದು. ಬೆಂಗಳೂರಿನ ಬಾಬಾ ಸಾಹೇಬ್ ಸ್ಕೂಲ್ ಆಫ್ ಎಕಾನಾಮಿಕ್ಸ್ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಇದರ ಉದ್ಘಾಟನೆಗೆ ಲಾಕ್​​ಡೌನ್ ನಂತರದ ದಿನಗಳಲ್ಲಿ ಪ್ರಧಾನಮಂತ್ರಿಗಳನ್ನು ಆಹ್ವಾನಿಸಲು ಉದ್ದೇಶಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ತಿಳಿಸಿದರು.

ಯುವ ಸಬಲೀಕರಣ ಕೇಂದ್ರಗಳನ್ನು ರಚಿಸಿ ವಿದ್ಯಾರ್ಥಿಗಳಿಗೆ ಆನ್‍ಲೈನ್ ಪೋರ್ಟಲ್ ಮೂಲಕ ಒಂದೇ ಸೂರಿನಡಿ ಸಮಗ್ರ ಮಾಹಿತಿಯನ್ನು ಒದಗಿಸಲಾಗುವುದು. ಈ ಕೇಂದ್ರಕ್ಕೆ ಪ್ರೌಢ ಶಾಲಾ ಮಟ್ಟದಿಂದಲೇ ವಿದ್ಯಾರ್ಥಿಗಳ ನೋಂದಣಿಯನ್ನು ಪ್ರಾರಂಭಿಸಲಾಗುವುದು. ಶಾಲೆ/ಕಾಲೇಜಿನಿಂದ ಹೊರಗುಳಿಯುವ ವಿದ್ಯಾರ್ಥಿಗಳನ್ನು ಈ ಮೂಲಕ ಪತ್ತೆ ಹಚ್ಚಲು ಸಾಧ್ಯವಾಗಲಿದೆ. ಕೈಗಾರಿಕೆಗಳನ್ನು ಇದರೊಂದಿಗೆ ಸಂಪರ್ಕಿಸಿ ವಿದ್ಯಾರ್ಥಿಗಳಿಗೆ ಇಂಟರ್ನ್‍ಶಿಪ್ ಹಾಗೂ ಉದ್ಯೋಗ ದೊರಕಿಸುವ ಅವಕಾಶವನ್ನು ಕಲ್ಪಿಸಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.