ETV Bharat / state

ಗ್ರೇಟರ್ ಹೈದರಾಬಾದ್ ಚುನಾವಣೆ.. ಡಾ.ಸುಧಾಕರ್, ಸತೀಶ್ ರೆಡ್ಡಿಗೆ ಚುನಾವಣಾ ಸಹ ಉಸ್ತುವಾರಿ ಹೊಣೆ

author img

By

Published : Nov 15, 2020, 7:07 PM IST

ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಅಖಾಡಕ್ಕೆ ಸಜ್ಜಾಗುತ್ತಿರುವ ಬಿಜೆಪಿ, ಇಂದು ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಭೂಪೇಂದ್ರ ಯಾದವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ..

Dr Sudhakar
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್

ಬೆಂಗಳೂರು : ಮುಂಬರಲಿರುವ ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣೆಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರನ್ನು ಚುನಾವಣಾ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

Greater Hyderabad Election
ಗ್ರೇಟರ್ ಹೈದರಾಬಾದ್ ಚುನಾವಣೆ.. ಡಾ.ಸುಧಾಕರ್, ಸತೀಶ್ ರೆಡ್ಡಿಗೆ ಚುನಾವಣಾ ಸಹ ಉಸ್ತುವಾರಿ ಹೊಣೆ

ಗ್ರೇಟರ್ ಹೈದರಾಬಾದ್ ಮಹಾನಗರ ಪಾಲಿಕೆ ಚುನಾವಣಾ ಅಖಾಡಕ್ಕೆ ಸಜ್ಜಾಗುತ್ತಿರುವ ಬಿಜೆಪಿ, ಇಂದು ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಭೂಪೇಂದ್ರ ಯಾದವ್ ಅವರನ್ನು ಚುನಾವಣಾ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಡಾ.ಸುಧಾಕರ್, ಆಶಿಶ್ ಶಿಲ್ಲರ್, ಪ್ರದೀಪ್ ಸಿಂಗ್, ಸತೀಶ್ ರೆಡ್ಡಿ ಅವರನ್ನು ಸಹ ಉಸ್ತುವಾರಿಗಳನ್ನಾಗಿ ನೇಮಕಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಆದೇಶಿಸಿದ್ದಾರೆ.

ಮಹಾರಾಷ್ಟ್ರ, ತಮಿಳುನಾಡು, ಗೋವಾ ರಾಜ್ಯದ ಉಸ್ತುವಾರಿ ಸ್ಥಾನ ಸಿ.ಟಿ ರವಿಗೆ, ನಿರ್ಮಲ್ ಕುಮಾರ್ ಸುರಾನಾ ಅವರನ್ನು ಪಾಂಡಿಚೇರಿ ಉಸ್ತುವಾರಿಯನ್ನಾಗಿ, ಶಾಸಕ ಸುನೀಲ್ ಕುಮಾರ್ ಅವರನ್ನು ಕೇರಳ ರಾಜ್ಯದ ಸಹ ಉಸ್ತುವಾರಿಯಾಗಿ ನೇಮಕ ಮಾಡಲಾಗಿತ್ತು. ಅದರ ಜೊತೆಗೆ ಈಗ ಮತ್ತೆ ರಾಜ್ಯದ ಒಬ್ಬರಿಗೆ ನೆರೆ ರಾಜ್ಯದ ಚುನಾವಣಾ ಉಸ್ತುವಾರಿ ತಂಡದ ಸ್ಥಾನ ಕಲ್ಪಿಸಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.