ETV Bharat / state

ಗೃಹಲಕ್ಷ್ಮಿ ನೋಂದಣಿಗೆ ಸಿಎಂ ಸಿದ್ದರಾಮಯ್ಯ ಚಾಲನೆ; ಆಗಸ್ಟ್‌ 16ರಿಂದ ಯಜಮಾನಿಯ ಖಾತೆಗೆ ₹2,000 ಜಮೆ - CM Siddaramaiah

ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಿಸಿರುವ 5 ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

gruha lakshmi scheme
ಗೃಹಲಕ್ಷ್ಮಿ ನೋಂದಣಿಗೆ ಸಿಎಂ ಚಾಲನೆ
author img

By

Published : Jul 20, 2023, 6:46 AM IST

ಬೆಂಗಳೂರು : ಕೊನೆಗೂ ಬಹುನಿರೀಕ್ಷಿತ ಗೃಹ ಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಸಿಎಂ ಸಿದ್ದರಾಮಯ್ಯ ಬುಧವಾರ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಾಲನೆ ಕೊಟ್ಟರು. ಈ ಯೋಜನೆಯಿಂದ ರಾಜ್ಯದ ಪ್ರತಿ ಕುಟುಂಬದಲ್ಲಿನ ಯಜಮಾನಿ ಮಹಿಳೆಯು ಪ್ರತಿ ತಿಂಗಳಿಗೆ 2 ಸಾವಿರ ರೂ.ನಂತೆ ವರ್ಷಕ್ಕೆ 24 ಸಾವಿರ ರೂ. ಗಳನ್ನು ಪಡೆಯಲಿದ್ದಾರೆ. 1.28 ಕೋಟಿ ಮಹಿಳೆಯರ ಕುಟುಂಬಕ್ಕೆ ಇದರ ಪ್ರಯೋಜನ ದೊರೆಯಲಿದೆ. ಆ.16ರಿಂದ ಯಜಮಾನಿಯ ಖಾತೆಗೆ 2,000 ರೂ.‌ ಜಮೆಯಾಗಲಿದೆ.

'₹30 ಸಾವಿರ ಕೋಟಿಯ ಯೋಜನೆ': ಗೃಹಲಕ್ಷ್ಮಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಸಿದ್ದರಾಮಯ್ಯ, "ಇತಿಹಾಸದಲ್ಲಿ ಯಾರೂ ಕೂಡ ಈ ರೀತಿಯ ಯೋಜನೆಗಳನ್ನು ಜಾರಿ ಮಾಡಿಲ್ಲ. ಇಡೀ ದೇಶದಲ್ಲಿ ಕರ್ನಾಟಕದಲ್ಲಿ ಮಾತ್ರ 5 ಗ್ಯಾರಂಟಿಗಳು ಜಾರಿ ಆಗುತ್ತವೆ. ಗೃಹ ಲಕ್ಷ್ಮಿಗೆ 35 ಸಾವಿರ ಕೋಟಿ ರೂಪಾಯಿ ಕೊಡುತ್ತಿದ್ದೇವೆ. ಇಡೀ ದೇಶದಲ್ಲೇ 30 ಸಾವಿರ ಕೋಟಿಯ ಒಂದು ಯೋಜನೆ ಜಾರಿಗೆ ತಂದ ಏಕೈಕ ರಾಜ್ಯ ಕರ್ನಾಟಕ. ಜನಪರ ಯೋಜನೆಯನ್ನು ಸಹಿಸಲಾರದೆ ಅತ್ತೆ-ಸೊಸೆ, ಅತ್ತಿಗೆ-ನಾದಿನಿ ಜಗಳ ಹುಟ್ಟು ಹಾಕುತ್ತಾ ಬಿಜೆಪಿಯವರು ಕಿರಿಕ್ ಮಾಡ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.

  • ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ನೊಂದಿರುವ ನಾಡಿನ ನನ್ನ ತಾಯಂದಿರ, ಅಕ್ಕ ತಂಗಿಯರ ಆರ್ಥಿಕ ಹೊರೆಯನ್ನು ತುಸು ತಗ್ಗಿಸಿ, ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ನೆರವಾಗುವ ದೃಷ್ಟಿಯಿಂದ ನಾವು ಘೋಷಣೆ ಮಾಡಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಇಂದು ಚಾಲನೆ ನೀಡಿದ್ದೇನೆ.

    ಅರ್ಹ ಫಲಾನುಭವಿಗಳು ತಪ್ಪದೇ ಅರ್ಜಿ ಸಲ್ಲಿಸುವ ಮೂಲಕ… pic.twitter.com/NbvU4buUKt

    — Siddaramaiah (@siddaramaiah) July 19, 2023 " class="align-text-top noRightClick twitterSection" data=" ">

"ಬಿಜೆಪಿ ಸೈದ್ಧಾಂತಿಕವಾಗಿಯೇ ಮಹಿಳೆಯರು ಮತ್ತು ಶ್ರಮಿಕ ವರ್ಗದ ವಿರೋಧಿ. ಈ ವರ್ಗ ಆರ್ಥಿಕವಾಗಿ ಸಬಲರಾಗುವುದನ್ನು ಆ ಪಕ್ಷ ವಿರೋಧಿಸುತ್ತದೆ. ಬಿಜೆಪಿಯ ಬುರುಡೆದಾಸರು ಬುರುಡೆ ಬಿಡುತ್ತಾ ಜನರ ಹಾದಿ ತಪ್ಪಿಸುತ್ತಿದ್ದಾರೆ. ಅನ್ನಭಾಗ್ಯ ಯೋಜನೆ ಮೋದಿಯವರದ್ದು ಎಂದು ಅವರು ಬುರುಡೆ ಬಿಡುತ್ತಾರೆ. ಆದರೆ, ಇದನ್ನು ಬಿಜೆಪಿ ಅಧಿಕಾರದಲ್ಲಿರುವ ಉತ್ತರಪ್ರದೇಶ, ಗುಜರಾತ್ ಮುಂತಾದ ರಾಜ್ಯಗಳಲ್ಲಿ ಏಕೆ ಜಾರಿಗೆ ತಂದಿಲ್ಲ? ಅಲ್ಲೆಲ್ಲ ಉಚಿತ ಅಕ್ಕಿ ಕೊಡುವ ಕಾರ್ಯಕ್ರಮಗಳು ಏಕಿಲ್ಲ ಎಂದು ಪ್ರಶ್ನಿಸಿದರು.

'ಇದು ನಮ್ಮ ಋಣ ಸಂದಾಯ': ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ, "ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡುತ್ತಿದೆ. ಮಮತಾ ಬ್ಯಾನರ್ಜಿ, ಸ್ಟಾಲಿನ್ ಅವರು ಸಿಕ್ಕಾಗ ನಮ್ಮ ಯೋಜನೆಗಳನ್ನು ಅವರ ರಾಜ್ಯದಲ್ಲಿ ಜಾರಿ ಮಾಡುವ ಬಗ್ಗೆ ಪ್ರಸ್ತಾಪ ಮಾಡಿದರು. ಇದು ಕರ್ನಾಟಕದ ಮಾಡೆಲ್. ಶಿಕ್ಷಕರಿಗೆ ಮಾಡುವ ಸಹಾಯ ಸಹಾಯವಲ್ಲ, ಅದು ಪುಣ್ಯ. ಸಹೋದರ, ಸಹೋದರಿಯರಿಗೆ ಮಾಡುವ ಸಹಾಯ ಸಹಾಯವಲ್ಲ, ಅದು ಕರ್ತವ್ಯ. ತಂದೆಗೆ ಮಾಡಿದ ಸಹಾಯ, ಸಹಾಯವಲ್ಲ ಅದು ಭಾಗ್ಯ. ತಾಯಿಗೆ ಮಾಡಿದ ಸಹಾಯ ಸಹಾಯವಲ್ಲ, ಅದು ಋಣ. ಅದೇ ರೀತಿ ರಾಜ್ಯದ ಜನ, ಅದರಲ್ಲೂ ತಾಯಂದಿರಿಗೆ ಮಾಡುತ್ತಿರುವ ಈ ಗೃಹಲಕ್ಷ್ಮಿ ಯೋಜನೆ ಸಹಾಯವಲ್ಲ, ಇದು ನಮ್ಮ ಋಣ ಸಂದಾಯ, ಇದು ನಮ್ಮ ಭಾಗ್ಯ" ಎಂದರು.

ಇದನ್ನೂ ಓದಿ : Gruha Lakshmi Scheme: ಇಂದಿನಿಂದ ಗೃಹಲಕ್ಷ್ಮಿ ಯೋಜನೆ: ಯಾರು ಅರ್ಹರು? ನೋಂದಣಿ ಎಲ್ಲಿ? ಬೇಕಿರುವ ದಾಖಲೆಗಳೇನು? ಸಂಪೂರ್ಣ ಮಾಹಿತಿ

"ಶಕ್ತಿ ಯೋಜನೆಯನ್ನು ವಿಧಾನಸೌಧದ ಮುಂದೆ ಆರಂಭಿಸಿದ್ದೆವು. ಅನ್ನಭಾಗ್ಯ ಯೋಜನೆಯ ಬೃಹತ್ ಕಾರ್ಯಕ್ರಮವನ್ನು ಮೈಸೂರಿನಲ್ಲೂ, ಆಗಸ್ಟ್ 16ರಂದು ಬೆಳಗಾವಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಬೃಹತ್ ಕಾರ್ಯಕ್ರಮ ಮಾಡಲಾಗುವುದು. ಈ ಯೋಜನೆಗಳು ಯಾವುದೇ, ಜಾತಿ, ಧರ್ಮಕ್ಕೆ ಸೀಮಿತವಲ್ಲ. ಪ್ರತಿ ಮನೆ ಯಜಮಾನಿಗೆ ಮುಟ್ಟಿಸುವ ಯೋಜನೆ. ಸರ್ಕಾರಿ ಕೇಂದ್ರಗಳ ಜತೆಗೆ ಪ್ರಜಾಪ್ರತಿನಿಧಿಗಳ ಮೂಲಕ ಈ ಯೋಜನೆಗಳಿಗೆ ಅರ್ಜಿ ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಕಾರ್ಯಕ್ರಮಗಳನ್ನು ಬಹಳ ಪಾರದರ್ಶಕವಾಗಿ ಜಾರಿ ಮಾಡಲು ಕ್ರಮ ಕೈಗೊಂಡಿದ್ದಾರೆ" ಎಂದು ತಿಳಿಸಿದರು.

'1.28 ಕೋಟಿ ಕುಟುಂಬಗಳಿಗೆ ನೆಮ್ಮದಿ' : ಇದೇ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, "ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಶಿವಾಜಿ ಮಹಾರಾಜರಂತಹ ಮಹಾನ್ ಚೇತನಗಳು ತೋರಿದ ಹಾದಿಯಲ್ಲಿ ವಿಶೇಷವಾಗಿ ಮಹಿಳೆಯರನ್ನು ಕೇಂದ್ರವಾಗಿಟ್ಟುಕೊಂಡು ಸ್ತ್ರೀ ಶಕ್ತಿಕರಣಗೊಳಿಸುವಂತಹ ಅರ್ಥಪೂರ್ಣ ಕಾರ್ಯಕ್ರಮ ಇದು. ಪ್ರಿಯದರ್ಶಿನಿ ಇಂದಿರಾಗಾಂಧಿಯವರು ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ದಿನದಂದೇ ಗೃಹಲಕ್ಷ್ಮಿ ಕಾರ್ಯಕ್ರಮಕ್ಕೆ ಚಾಲನೆ ದೊರೆಯುತ್ತಿರುವುದು ಸಂತಸ ತಂದಿದೆ. ಹಳ್ಳಿಯ ರೈತ ಕುಟುಂಬದ ಹಿನ್ನೆಲೆಯಿಂದ ಬಂದಿರುವ ನನಗೆ ಗ್ರಾಮೀಣ ಬದುಕಿನ ಸಂಕಷ್ಟಗಳು ಗೊತ್ತಿವೆ, ಸರ್ಕಾರದಿಂದ ಸಿಗುವ ಗೃಹಲಕ್ಷ್ಮಿಯ ಮಾಸಿಕ 2 ಸಾವಿರ ರೂ.ನೆರವು, ರಾಜ್ಯದ 1.28 ಕೋಟಿ ಕುಟುಂಬಗಳಲ್ಲಿ ನೆಮ್ಮದಿ ಮೂಡಿಸಲಿದೆ. ಆ ಕುಟುಂಬಗಳ ಹಾರೈಕೆ, ಸಮಾಧಾನ ಸರ್ಕಾರಕ್ಕೆ ಸಿಗುವ ಆಶೀರ್ವಾದ" ಎಂದು ಹರ್ಷ ವ್ಯಕ್ತಪಡಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.