ETV Bharat / state

ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ: ಅರ್ಹರಿಗೆ ಸೌಲಭ್ಯ ಸಿಗುವಂತೆ ಕ್ರಮಕ್ಕೆ ಸಿಎಂ ಸೂಚನೆ

ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಸಭೆ ನಡೆಯಿತು.

ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ
ಗ್ಯಾರಂಟಿ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ
author img

By ETV Bharat Karnataka Team

Published : Nov 22, 2023, 10:59 PM IST

ಬೆಂಗಳೂರು: ನಾಲ್ಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಭೆ ನಡೆಯಿತು. ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ನಡೆದ ಸಭೆಯಲ್ಲಿ ಸಚಿವರಾದ ರಾಮಲಿಂಗಾರೆಡ್ಡಿ, ಲಕ್ಷ್ಮಿ ಹೆಬ್ಬಾಳ್ಕರ್ , ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಅಭಿವೃದ್ಧಿ ಆಯುಕ್ತೆ ಡಾ : ಶಾಲಿನಿ ರಜನೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಾರ್ಯದರ್ಶಿ ಡಿ.ಸಿ.ಪ್ರಕಾಶ್ ನಿರ್ದೇಶಕಿ ಎಂ.ಎಸ್. ಅರ್ಚನಾ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಶಕ್ತಿ ಯೋಜನೆ: ಶಕ್ತಿ ಯೋಜನೆ ಜಾರಿಗೊಳಿಸಿದ ನಂತರ ನವೆಂಬರ್‌ 21ರ ವರೆಗೆ ಒಟ್ಟಾರೆ 99.75 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಸಾರಿಗೆ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದಾರೆ. ಇನ್ನೆರಡು ದಿನಗಳಲ್ಲಿ ನೂರು ಕೋಟಿ ದಾಟಲಿದೆ. ಪ್ರತಿ ತಿಂಗಳ ಪ್ರಯಾಣಿಕರ ಸಂಖ್ಯೆ ಏಪ್ರಿಲ್‌ 2023 ರಲ್ಲಿ 84.17 ಲಕ್ಷ ದಿಂದ ಶಕ್ತಿ ಯೋಜನೆ ಜಾರಿಯ ನಂತರ 1.08 ಕೋಟಿಯಿಂದ 1.15 ಕೋಟಿ ವರೆಗೆ ಹೆಚ್ಚಳ ವಾಗಿದೆ.

ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳಿಗೆ ಒಟ್ಟು 828 ಸಾಮಾನ್ಯ ಹಾಗೂ 145 ವಿದ್ಯುತ್‌ ಚಾಲಿತ ಬಸ್‌ಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ. ಬಸ್‌ಗಳ ಖರೀದಿ ಪ್ರಕ್ರಿಯೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ಅನ್ನಭಾಗ್ಯ: ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್‌ ತಿಂಗಳಲ್ಲಿ 1,10,96,413 ಕಾರ್ಡ್​ದಾರರಿಗೆ ಡಿಬಿಟಿ ಮಾಡಲಾಗಿದೆ. ಈ ವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಚೀಟಿದಾರರ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಮಾಡುವ ಮೂಲಕ ಯೋಜನೆಗೆ ಸೇರ್ಪಡೆಗೊಳಿಸಲಾಗಿದೆ. 2.60 ಲಕ್ಷ ಹೊಸ ಖಾತೆಗಳನ್ನು ಅಂಚೆ ಕಚೇರಿಗಳಲ್ಲಿ ತೆರೆಯಲಾಗಿದೆ ಎಂದು ತಿಳಿಸಿದರು.

7.67 ಲಕ್ಷ ಅನರ್ಹ ಪಡಿತರ ಚೀಟಿಗಳ ವಿಷಯದಲ್ಲಿ ಸಮಸ್ಯೆಗಳನ್ನು ಗುರುತಿಸಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆ ಆಗಿರುವುದರಿಂದ, ಎರಡನೇ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾಯಿಸುವ ಕುರಿತಂತೆ ಸಚಿವ ಸಂಪುಟದ ಮುಂದೆ ಮಂಡಿಸಲು ಸೂಚಿಸಲಾಯಿತು. ಡಿಸೆಂಬರ್‌ 31 ರೊಳಗೆ ಎಲ್ಲ ಅರ್ಹರಿಗೆ ಸೌಲಭ್ಯ ದೊರಕುವಂತೆ ಕ್ರಮ ಕೈಗೊಳ್ಳಲು ಸಿಎಂ ಅವರು ಸೂಚಿಸಿದರು.

ಗೃಹ ಜ್ಯೋತಿ: ಗೃಹಜ್ಯೋತಿ ಯೋಜನೆಯಡಿ ಈ ವರೆಗೆ 1.62 ಕೋಟಿ ಜನ ನೋಂದಾಯಿಸಿದ್ದು, 1.50 ಕೋಟಿ ಕುಟುಂಬಗಳಿಗೆ ಈ ಯೋಜನೆಯ ಸೌಲಭ್ಯ ದೊರೆಯುತ್ತಿದೆ. ಆಗಸ್ಟ್‌ ನಿಂದ ಈ ವರೆಗೆ 2900 ಕೋಟಿ ರೂ. ಭರಿಸಲಾಗಿದೆ.
ಗೃಹ ಜ್ಯೋತಿ ಯೋಜನೆಯಡಿ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಯೋಜನೆಯ ಫಲಾನುಭವಿಗಳು ಇಲಾಖೆಯ ದತ್ತಾಂಶದಲ್ಲಿ ಗೃಹ ಜ್ಯೋತಿ ಯೋಜನೆಯಡಿ ಸೇರ್ಪಡೆಗೊಳಿಸಲಾಗಿದೆ. ಈ ಫಲಾನುಭವಿಗಳು ಯಾರೂ ಗೃಹ ಜ್ಯೋತಿಯಿಂದ ಬಿಟ್ಟು ಹೋಗಬಾರದು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆ : ನವೆಂಬರ್‌ ತನಕ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1.10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. 2 ಲಕ್ಷ ಫಲಾನುಭವಿಗಳಿಗೆ ಸಂಬಂಧಿಸಿದ ತೊಡಕು ನಿವಾರಿಸಲಾಗುತ್ತಿದೆ ಎಂದರು. ಖಾತೆಯ ಮಾಹಿತಿಯಲ್ಲಿ ಗೊಂದಲ, ಆಧಾರ್‌ ಲಿಂಕ್‌ ಆಗದಿರುವುದು ಮೊದಲಾದ ಕಾರಣಗಳಿಂದ ಹಣ ವರ್ಗಾವಣೆಗೆ ತೊಡಕಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕ್​ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ, ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳ್ಳಲು ಸೂಚಿಸಿದರು.

ಡಿಸೆಂಬರ್‌ ಒಳಗೆ ಎಲ್ಲ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆಯನ್ನು ಖಾತರಿ ಪಡಿಸಲು ಸೂಚಿಸಿದರು. ಗೃಹಲಕ್ಷ್ಮಿ ಫಲಾನುಭವಿಗಳು ಬಿಟ್ಟು ಹೋಗಿದ್ದಲ್ಲಿ ಅಥವಾ ಬ್ಯಾಂಕ್‌ ಖಾತೆ ಆಧಾರ್‌ ಲಿಂಕ್‌ ಮತ್ತಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್‌ ಆಯೋಜಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದನ್ನೂಓದಿ:ಜಾತಿಗಣತಿ ವರದಿ ಕೈ ಸೇರಿದ ಬಳಿಕ ಸೂಕ್ತ ತೀರ್ಮಾನ: ಮುಖ್ಯಮಂತ್ರಿ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.