ETV Bharat / state

Job Alert: ಅತಿಥಿ ಉಪನ್ಯಾಸಕರ ಹುದ್ದೆ ನೇಮಕಾತಿ; ಸೆ.2 ಅರ್ಜಿ ಸಲ್ಲಿಕೆಗೆ ಕಡೆಯ ದಿನ - ಆನ್​ಲೈನ್​ ಕೌನ್ಸಿಲಿಂಗ್​

ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.

Guest Faculty recruitment for karnataka pu college

author img

By ETV Bharat Karnataka Team

Published : Aug 30, 2023, 5:23 PM IST

ಕಾಲೇಜು ಶಿಕ್ಷಣ ಇಲಾಖೆಯಿಂದ ಪ್ರಸಕ್ತ ಅಂದರೆ 2023-24ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ/ ಅತಿಥಿ ಉಪನ್ಯಾಸಕರ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಈ ಹುದ್ದೆಗೆ ಅಭ್ಯರ್ಥಿಗಳನ್ನು ಆನ್​ಲೈನ್​ ಕೌನ್ಸಿಲಿಂಗ್​ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಲಾಗುವುದು. ಈ ಹುದ್ದೆಯಲ್ಲಿ ಆಸಕ್ತಿ ಹೊಂದಿರುವ ಪದವೀಧರರು ಅರ್ಜಿ ಸಲ್ಲಿಸಬಹುದಾಗಿದೆ.

ಅಧಿಸೂಚನೆ
ಅಧಿಸೂಚನೆ

ಹುದ್ದೆ ವಿವರ: ಗ್ರಂಥಪಾಲಕರು ಹಾಗೂ ದೈಹಿಕ ಶಿಕ್ಷಣ ಬೋಧಕರು ಸೇರಿದಂತೆ ವಿವಿಧ ವಿಷಯ ಬೋಧನೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ನಡೆಸಲಾಗುವುದು

ವಿದ್ಯಾರ್ಹತೆ: ಅಭ್ಯರ್ಥಿಗಳು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿಯನ್ನು ಪೂರ್ಣಗೊಳಿಸಿರಬೇಕು. ಪಿಎಚ್​ಡಿ ವಿದ್ಯಾರ್ಹತೆ ಅಥವಾ ಎನ್​ಇಟಿ, ಕೆ-ಸೆಟ್​​, ಎಸ್​ಎಸ್​ಎಲ್​ಇಟಿ ವಿದ್ಯಾರ್ಹತೆ, ಎಂಫಿಲ್​ ವಿದ್ಯಾರ್ಹತೆ ಪಡೆದವರಿಗೆ ಹೆಚ್ಚಿನ ಅವಕಾಶ ಲಭ್ಯವಿದೆ.

ಅನುಭವ: ಅಭ್ಯರ್ಥಿಗಳು ಈಗಾಗಲೇ ಹಿಂದಿನ ವರ್ಷಗಳಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅನುಭವ ಹೊಂದಿರಬೇಕು.

ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಮೆರಿಟ್​ ಲಿಸ್ಟ್​ ಮತ್ತು ಕೌನ್ಸಿಲಿಂಗ್​ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

ವೇತನ: 5 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ಅವಧಿಗೆ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ, ಯುಜಿಸಿ ವಿದ್ಯಾರ್ಹತೆ ಹೊಂದಿದವರಿಗೆ 32 ಸಾವಿರ ರೂ.

5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿ ಪಡಿಸಿದ ವಿದ್ಯಾರ್ಹತೆ ಹೊಂದಿದವರಿಗೆ 30 ಸಾವಿರ ರೂ.

5 ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ 26 ಸಾವಿರ ರೂ. ವೇತನ

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಆಗಸ್ಟ್​ 25ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 2 ಆಗಿದೆ. ರಾಜ್ಯವ್ಯಾಪಿ ಮೆರಿಟ್​ ಪಟ್ಟಿ ಘೋಷಣೆ ಸೆಪ್ಟೆಂಬರ್​ 4 ಆಗಲಿದೆ.

ಅರ್ಜಿ ಸಲ್ಲಿಕೆ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ಮಾಹಿತಿಗಳಿಗೆ ಅಭ್ಯರ್ಥಿಗಳು dce.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

ಇದನ್ನೂ ಓದಿ: KMF Recruitment: ಬೆಳಗಾವಿ ಹಾಲು ಉತ್ಪಾದಕರ ಸಂಘದಲ್ಲಿದೆ ವಿವಿಧ ಉದ್ಯೋಗ; 46 ಹುದ್ದೆ ನೇಮಕಾತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.