ಬೆಂಗಳೂರು: ಜೂನ್ 8 ರ ಬಳಿಕ ರಾಜ್ಯಾದ್ಯಂತ ದೇವಸ್ಥಾನಗಳು ತೆರೆಯಲಿವೆ. ಈ ಹಿನ್ನೆಲೆಯಲ್ಲಿ ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಿದೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಡಿ ಬರುವ ದೇವಸ್ಥಾನಗಳಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಿದ್ದು, ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ.


- ದೇವಾಲಯದ ಒಳ ಮತ್ತು ಹೊರ ಆವರಣಗಳನ್ನು ಸ್ಯಾನಿಟೈಸ್ ಮಾಡಬೇಕು
- ಅಗತ್ಯ ಬಿದ್ದರೆ ಎರಡು ತಿಂಗಳಿಗೆ ಹೆಚ್ಚುವರಿ ಸೆಕ್ಯೂರಿಟಿ ಗಾರ್ಡ್ ನೇಮಕ
- ದೇವಾಲಯದ ಅಧಿಕಾರಿ, ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು
- ಅರ್ಚಕರು, ಪರಿಚಾರಕರು ಒಳಾಂಗಣದಲ್ಲಿ ಕೆಲಸ ಮಾಡುವಾಗ ಹೊರತು ಪಡಿಸಿ ಉಳಿದೆಡೆ ಮಾಸ್ಕ್ ಧರಿಸಬೇಕು
- ಭಕ್ತಾದಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಕೈಗೆ ಸ್ಯಾನಿಟೈಸರ್ ಹಾಕಬೇಕು. ಥರ್ಮಲ್ ಸ್ಕ್ರೀನಿಂಗ್ ವೇಳೆ ಭಕ್ತಾದಿಯ ಉಷ್ಣಾಂಶ ಹೆಚ್ಚಿದ್ದರೆ ಪ್ರವೇಶಕ್ಕೆ ಅವಕಾಶ ಇಲ್ಲ
- ಭಕ್ತಾದಿಗಳು ಮೂಗು, ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸಬೇಕು
- ಭಕ್ತಾದಿಗಳು ಒಂದು ಮೀಟರ್ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಗಿದೆ.