ಬೆಂಗಳೂರು : ಹೊಸ ವರ್ಷಾಚರಣೆಗೆ ಇನ್ನೂ ಹದಿನೈದು ದಿನಗಳು ಬಾಕಿ ಇರುವಂತೆಯೇ ಮಾರ್ಗಸೂಚಿಗಳ ತಯಾರಿಗಾಗಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಪೊಲೀಸರು ಸಭೆ ನಡೆಸಿದ್ದಾರೆ. ಇನ್ಫ್ಯಾಂಟ್ರಿ ರಸ್ತೆಯ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಮಿಷನರ್ ಬಿ.ದಯಾನಂದ್, ನಗರದ ಎಲ್ಲ ಡಿಸಿಪಿಗಳು, ಹೆಚ್ಚುವರಿ ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಜಂಟಿ ಆಯುಕ್ತರು, ಅಗ್ನಿಶಾಮಕದಳದ ಅಧಿಕಾರಿಗಳು, ಬಿಬಿಎಂಪಿ, ಆರೋಗ್ಯ ಇಲಾಖೆ, ಬೆಸ್ಕಾಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
ಇತ್ತೀಚೆಗೆ ಜಾತ್ರೆ ಸೇರಿದಂತೆ ಹಲವು ಕಾರ್ಯಕ್ರಮಗಳಲ್ಲಿ ಬಳಕೆ ಮಾಡುತ್ತಿರುವ ಕಾರ್ಟೂನ್ ಮಾಸ್ಕ್ಗಳನ್ನು ಹೊಸ ವರ್ಚಾಚರಣೆ ಸಂದರ್ಭದಲ್ಲಿ ಸಂಪೂರ್ಣವಾಗಿ ಬ್ಯಾನ್ ಮಾಡಲು ಚಿಂತನೆ ನಡೆಸಲಾಗಿದೆ. ಜೊತೆಗೆ ಇಡೀ ರಾತ್ರಿ ವಿದ್ಯುತ್ ಸಂಪರ್ಕ ಸ್ಥಗಿತವಾಗದಂತೆ ಕ್ರಮವಹಿಸಲು ಬೆಸ್ಕಾಂಗೆ ಸೂಚಿಸಲಾಗಿದೆ. ಅಲ್ಲದೇ ಬಾರ್ ಅಂಡ್ ರೆಸ್ಟೋರೆಂಟ್ಗಳಿಗೆ ಕಠಿಣ ಮಾರ್ಗಸೂಚಿ ನೀಡಲು ನಿರ್ಧರಿಸಲಾಗಿದ್ದು, ಕುಟುಂಬದೊಂದಿಗೆ ಬರುವವರಿಗೆ ಪ್ರತ್ಯೇಕ ಮಾರ್ಗ ನಿರ್ಮಾಣದ ಬಗ್ಗೆಯೂ ಚರ್ಚಿಸಲಾಗಿದೆ. ಪ್ರತೀ ಬಾರಿಯಂತೆ ಈ ಸಲವೂ ಮತ್ತಷ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಸಭೆ ಬಳಿಕ ಮಾರ್ಗಸೂಚಿಗಳ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ಇದನ್ನೂ ಓದಿ : ಸಂಸತ್ ಭದ್ರತಾ ಲೋಪ; ಪ್ರಜಾಪ್ರಭುತ್ವದ ಮಂದಿರಕ್ಕೆ ಕಳಂಕ ತರಲು ಮಾಡಿರುವ ಕೃತ್ಯ: ಸಚಿವ ಪ್ರಹ್ಲಾದ್ ಜೋಶಿ